ಬಿಸಿ ಬಿಸಿ ಸುದ್ದಿ

ಆಳಂದ: ವಿವಿಧ ಕಾಮಗಾರಿಗಳಿಗೆ ಶಾಸಕರಿಂದ ಚಾಲನೆ

ಆಳಂದ: ಪಟ್ಟಣದ ವಿವಿಧ ವಾರ್ಡಗಳಲ್ಲಿ ವಿವಿಧ ಕಾಮಗಾರಿಗಳಿಗೆ ಆಳಂದ ಶಾಸಕ ಸುಭಾಷ್ ಆರ್ ಗುತ್ತೇದಾರ ಚಾಲನೆ ನೀಡಿದರು.

ಪಟ್ಟಣದ ಪುರಸಭೆಯ ವಿವಿಧ ವಾರ್ಡಗಳಲ್ಲಿ 2019-20ನೇ ಸಾಲಿನ 14ನೇ ಹಣಕಾಸು ಯೋಜನೆಯ ಅಡಿಯಲ್ಲಿ 12 ಪ್ಯಾಕೇಜಗಳ ಅನುದಾನದಲ್ಲಿ ಒಟ್ಟು 2.64 ಲಕ್ಷ. ರೂ ವೆಚ್ಚದ ಸಿಸಿ ರಸ್ತೆ ಮತ್ತು ಒಳಚರಂಡಿ ಕಾಮಗಾರಿಗಳಿಗೆ ರವಿವಾರ ಚಾಲನೆ ನೀಡಿ ಮಾತನಾಡಿದರು.

ಆಳಂದ ಪಟ್ಟಣದ ಅಭಿವೃದ್ಧಿಗೆ ತಾವು ಕಂಕಣಬದ್ಧರಾಗಿದ್ದು ಮುಂದಿನ ದಿನಗಳಲ್ಲಿ ಇನ್ನಷ್ಟು ಅನುದಾನ ತಂದು ಪಟ್ಟಣವನ್ನು ಅಭಿವೃದ್ಧಿಪಡಿಸಲಾಗುವುದು ಈ ನಿಟ್ಟಿನಲ್ಲಿ ಸರ್ಕಾರದ ಜೊತೆಗೆ ನಿರಂತರ ಸಂಪರ್ಕದಲ್ಲಿದ್ದೇನೆ ಎಂದು ತಿಳಿಸಿದರು.

ಆಳಂದ ಪಟ್ಟಣಕ್ಕೆ ಶಾಶ್ವತ ಕುಡಿಯುವ ನೀರಿನ ಸರಬರಾಜು ಮಾಡಲು 7 ಕೋಟಿ ಅನುದಾನ ಮಂಜೂರಾಗಿದ್ದು ಅಮರ್ಜಾದಿಂದ ನೀರು ಆಳಂದ ಪಟ್ಟಣಕ್ಕೆ ನೀರು ತರುವ ಕಾರ್ಯ ಪ್ರಗತಿಯಲ್ಲಿದೆ ಅದಕ್ಕೆ ಬೇಕಾಗಿರುವ ಪೈಪುಗಳು ಈಗಾಗಲೇ ಬಂದಿವೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಮುಖಂಡರಾದ ಅಶೋಕ ಗುತ್ತೇದಾರ, ವಿಜಯಕುಮಾರ ಕೋಥಳಿಕರ, ಪುರಸಭೆ ಮುಖ್ಯಾಧಿಕಾರಿ ಬಾಬುರಾವ ವಿಭೂತೆ, ಕಿರಿಯ ಅಭಿಯಂತರ ಜಗದೀಶ, ಪುರಸಭೆ ಸದಸ್ಯರಾದ ಶ್ರೀಶೈಲ ಪಾಟೀಲ, ಮೃತ್ಯುಂಜಯ ಆಲೂರೆ, ಮೀರ ಅಹ್ಮದ್, ಸಂತೋಷ ಹೂಗಾರ, ಸೋಮು ಹತ್ತರಕಿ, ಶ್ರೀಶೈಲ ಖಜೂರಿ, ಪ್ರಭಾಕರ ಘನಾತೆ ಸೇರಿದಂತೆ ಇತರರು ಇದ್ದರು.

emedialine

Recent Posts

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

13 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

15 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

22 hours ago

ಸಿದ್ದ ಶ್ರೀ ಕಾರ್ಖಾನೆ ಪ್ರಾರಂಭವಾಗುವರೆಗೂ ಹೋರಾಟ: ವೀರಣ್ಣ ಗಂಗಾಣಿ

ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…

22 hours ago

ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆ

ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…

22 hours ago

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

1 day ago