ಅತಿಥಿ ಶಿಕ್ಷಕರಿಗೆ ಕೋವಿಡ್-19 ಪ್ಯಾಕೆಜ್, ಉದ್ಯೋಗ ಭದ್ರತೆ ನೀಡಬೇಕೆಂದು ಆಗ್ರಹಿಸಿ ಅಖಿಲ ಭಾರತ ಶಿಕ್ಷಣ ಉಳಿಸಿ ಸಮಿತಿ ವತಿಯಿಂದ ಆಗ್ರಹ

0
64

ಶಹಾಬಾದ:ಅಖಿಲ ಭಾರತ ಶಿಕ್ಷಣ ಉಳಿಸಿ ಸಮಿತಿ ವತಿಯಿಂದ ಸೋಮವಾರ ಅತಿಥಿ ಶಿಕ್ಷಕರಿಗೆ ಕೋವಿಡ್-19 ಪ್ಯಾಕೆಜ್, ಉದ್ಯೋಗ ಭದ್ರತೆ ಹಾಗೂ ಇನ್ನಿತರ ಸಮಸ್ಯೆಗಳ ಪರಿಹಾರವನ್ನು ನೀಡುವಂತೆ ಆಗ್ರಹಿಸಿ ಉಪತಹಸೀಲ್ದಾರ ಮಲ್ಲಿಕಾರ್ಜುನ ರೆಡ್ಡಿ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅಖಿಲ ಭಾರತ ಶಿಕ್ಷಣ ಉಳಿಸಿ ಸಮಿತಿ ಜಿಲ್ಲಾ ಸಂಘಟಕ ರಾಮಣ್ಣ ಎಸ್.ಇಬ್ರಾಹಿಂಪೂರ, ಅತಿಥಿ ಶಿಕ್ಷಕರಾಗಿ ಶಿಕ್ಷಣ ಇಲಾಖೆಯಲ್ಲಿ ಹಲವಾರು ವರ್ಷಗಳಿಂದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡುತ್ತಾ ಹಲವಾರು ಶಾಲೆಗಳ ಬೆನ್ನೆಲುಬಾಗಿ ನಿಂತಿದ್ದೇವೆ. ಅತಿಥಿ ಶಿಕ್ಷಕರು ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮೀಣ ಭಾಗದಲ್ಲಿ ಹಗಲಿರುಳು ದುಡಿಯುತ್ತಾ ಸಕರ್ಾರಿ ಶಾಲೆಗಳ ಪ್ರಗತಿ ಹಾಗೂ ಗ್ರಾಮೀಣ ಮಕ್ಕಳಿಗೆ ವಿದ್ಯಾಭ್ಯಾಸ ನೀಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದೇವೆ. ಮಾನವೀಯತೆ ದೃಷ್ಠಿಯಿಂದ ಮತ್ತು ನೈತಿಕವಾಗಿಯೂ ಕೂಡಾ ಅತಿಥಿ ಶಿಕ್ಷಕರ ಹಿತ ಕಾಪಾಡುವುದು ಸಕರ್ಾರದ ಜವಾಬ್ದಾರಿಯಾಗಿದೆ. ರಾಜ್ಯ ಸರಕಾರ ಈ ಕೂಡಲೇ ಎಲ್ಲಾ ಅತಿಥಿ ಶಿಕ್ಷಕರಿಗೆ ಕೋವಿಡ್-19 ವಿಶೇಷ ಆರ್ಥಿಕ ಪ್ಯಾಕೇಜನ್ನು ಘೋಷಿಸಬೇಕು.

Contact Your\'s Advertisement; 9902492681

ಮುಂಬರುವ ಎಲ್ಲಾ ನೇಮಕಾತಿಗಳಲ್ಲಿ ಅತಿಥಿ ಶಿಕ್ಷಕರಿಗೆ ಪ್ರಾತಿನಿಧ್ಯ ನೀಡಿ, ಅತಿಥಿ ಶಿಕ್ಷಕರನ್ನು ನಿದರ್ಿಷ್ಟ ಸಂಖ್ಯೆಯಲ್ಲಿ ಈ ಖಾಯಂ ಹುದ್ದೇಗಳಿಗೆ ನೇಮಕಾತಿ ಮಾಡಿಕೊಳ್ಳಬೇಕು. ಈಗಾಗಲೇ ಅತಿಥಿ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿರುವವರನ್ನು ಕೆಲಸದಿಂದ ತೆಗೆದು ಹಾಕದಂತೆ ಹಾಗೂ ಅವರೆಲ್ಲರಿಗೂ ಉದ್ಯೋಗ ಭದ್ರತೆ ನೀಡುವಂತಹ ಸೂಕ್ತ ಸಕರ್ಾರಿ ಆದೇಶವನ್ನು ಈ ಕೂಡಲೇ ಹೊರಡಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಪೂರೈಸಬೇಕೆಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಕಾಲೇಜಿನ ಅತಿಥಿ ಉಪನ್ಯಾಸಕರಾದ ಗುರುಲಿಂಗಪ್ಪ ತುಂಗಳ,ಮಹಮ್ಮದ್ ಇಪರ್ಾನ್,ಅತಿಥಿ ಶಿಕ್ಷರಾದ ಶಿವಕುಮಾರ ಕುಸಾಳೆ,ಭರತಕುಮಾರ ಉಪಸ್ಥಿತರಿದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here