ಕಲಬುರಗಿ: ಮಹಿಳಾ ಪೊಲೀಸ್ ಕಾನ್ಸ್ಟೇಬಲ್ವೊಬ್ಬರು ಬಾವಿಯಲ್ಲಿ ಸಂಶಯಾಸ್ಪದ ರೀತಿಯಲ್ಲಿ ಸಾವಿಗೀಡಾದ ಘಟನೆ ಯಡ್ರಾಮಿ ತಾಲೂಕಿನ ಸುಂಬಡ್ ಗ್ರಾಮದಲ್ಲಿ ನಡೆದಿದೆ.
ಸುರೇಖಾ ಬಿರಾದಾರ (34) ಮೃತ ಮಹಿಳಾ ಪೊಲೀಸ್ ಸಿಬ್ಬಂದಿಯಾಗಿದ್ದಾರೆ. 2008ರಲ್ಲಿ ಪೊಲೀಸ್ ಸೇವೆಗೆ ಆಯ್ಕೆಯಾದ ಸುರೇಖಾ 2010ರಲ್ಲಿ ಪೊಲೀಸ್ ಕಾನ್ಸ್ಟೇಬಲ್ ಮಲ್ಲಿನಾಥ ಅವರನ್ನು ಮದುವೆಯಾಗಿದ್ದರು. ಇವರಿಗೆ 5 ವರ್ಷದ ಗಂಡು ಮಗು ಹಾಗೂ 4 ವರ್ಷದ ಹೆಣ್ಣು ಮಗು ಇದೆ.
ಸದ್ಯ ಕಲಬುರಗಿ ನಗರದಲ್ಲಿ ರಾಜ್ಯ ಗುಪ್ತಚರ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ ಸುರೇಖಾ ಪತಿ ಮಲ್ಲಿನಾಥ ಎರಡು ತಿಂಗಳ ಹಿಂದಷ್ಟೇ ಸಾವನ್ನಪ್ಪಿದ್ದರು. ಇದೀಗ ಸುರೇಖಾ ಕೂಡ ಮೃತಪಟ್ಟಿದ್ದು, ಅಪ್ಪ-ಅಮ್ಮ ಇಬ್ಬರನ್ನೂ ಕಳೆದುಕೊಂಡು ಮಕ್ಕಳು ಅನಾತವಾಗಿವೆ.
ಯಡ್ರಾಮಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗ್ರಾಮಸ್ಥರ ಸಹಾಯದಿಂದ ಮೃತದೇಹ ಹೊರ ತೆಗೆಯಲಾಗಿದ್ದು, ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…