ಕಲಬುರಗಿ: ಹೆಸರು ಹಾಗೂ ಉದ್ದು ಖರೀದಿ ಕೇಂದ್ರ ಸ್ಥಾಪನೆಗೆ ಸರಕಾರ ದಿವ್ಯ ನಿರ್ಲಕ್ಷ್ಯ ವಹಿಸುತ್ತಿದ್ದು , ರೈತರು ತಾವು ಬೆಳೆದ ಬೆಳೆಯನ್ನು ಕಡಿಮೆ ದರದಲ್ಲಿ ಮಾರಾಟ ಮಾಡಿ ನಷ್ಠ ಅನುಭವಿಸುತ್ತಿದ್ದಾರೆ. ನಿದ್ದೆಯಲ್ಲಿರುವ ಸರಕಾರ ನಮ್ಮ ಭಾಗದ ರೈತರ ಕಡೆ ಗಮನ ಹರಿಸಲಿ ಎಂದು ಶಾಸಕರಾದ ಪ್ರಿಯಾಂಕ್ ಖರ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಸರಣಿ ಟ್ವಿಟ್ ಮಾಡಿರುವ ಶಾಸಕರು ಧಾನ್ಯಗಳ ನಾಡು ಕಲಬುರಗಿ ಯಲ್ಲಿ ಹೆಸರು ಹಾಗೂ ಉದ್ದು ಮಾರುಕಟ್ಟೆಗೆ ಬಂದಿವೆ. ಎಂ ಎಸ್ ಪಿ ದರದಲ್ಲಿ ಸದರಿ ಧಾನ್ಯ ಖರೀದಿಸಲು ರಾಜ್ಯ ಸರಕಾರ ಖರೀದಿ ಕೇಂದ್ರ ಸ್ಥಾಪಿಸದೆ ನಿರ್ಲಕ್ಷ್ಯ ಧೋರಣೆ ತೋರುತ್ತಿದೆ. ಹಾಗಾಗಿ ರೈತರು ತಾವು ಬೆಳೆದ ಬೆಳೆಯನ್ನು ಕಡಿಮೆ ದರದಲ್ಲಿ ಮಾರಾಟ ಮಾಡಿ ನಷ್ಟ ಅನುಭವಿಸುತ್ತಿದ್ದಾರೆ. ಈ ಬಗ್ಗೆ ಎರಡು ಪತ್ರ ಬರೆದು ಸರಕಾರಕ್ಕೆ ಎಚ್ಚರಿಸಿದ್ದರೂ ಕೂಡಾ ನಿದ್ದೆಯಿಂದ ಎದ್ದಿಲ್ಲ ಎಂದು ಶಾಸಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕೆಲ ತಿಂಗಳ ಹಿಂದೆ ಹೆಸರು ಕ್ವಿಂಟಾಲ್ ರೂ 9000 ದಂತೆ ಮಾರಾಟ ಮಾಡಲಾಗುತ್ತಿತ್ತು. ಆದರೆ, ಈಗ ಧಾರಣೆ ರೂ 4-5 ಸಾವಿರಕ್ಕೆ ಕುಸಿದಿದೆ. ಜೊತೆಗೆ ಸರಕಾರವೂ ಕೂಡಾ ಈಗಾಗಲೇ ನಿರ್ಧರಿಸಿರುವಂತೆ ಪ್ರತಿಕ್ವಿಂಟಾಲ್ ಗೆ ರೂ 7196 ರಂತೆಯೂ ಖರೀದಿಸದ ಕಾರಣ ರೈತರು ಕಡಿಮೆ ಬೆಲೆಯಲ್ಲಿ ಹೆಸರು ಮಾರಾಟ ಮಾಡಿ ನಷ್ಟ ಅನುಭವಿಸುತ್ತಿದ್ದಾರೆ ಎಂದು ಹೇಳಿದ್ದಾರೆ.
ಒಂದು ಕಡೆ ಮಾರುಕಟ್ಟೆಯಲ್ಲಿ ದರ ಕುಸಿದಿದ್ದರೆ ಮತ್ತೊಂದು ಕಡೆ ನಿರಂತರ ಮಳೆ ಸುರಿದ ಕಾರಣ ರೈತರು ಕಟಾವು ಮಾಡಲಾಗದ ಹೆಸರು ಜಮೀನಿನಲ್ಲಿಯೇ ಮೊಳೆಕೆಯೊಡೆಯುತ್ತಿದೆ.
ಹಿಂಗಾರು ಬಿತ್ತನೆ ಬೀಜ ಹಾಗೂ ರಸಗೊಬ್ಬರ ಖರೀದಿ ಸೇರಿದಂತೆ ಇತರೆ ಖರ್ಚುಗಳಿಗೆ ಹಣ ಸರಿದೂಗಿಸಲು ಕಷ್ಟಪಡುತ್ತಿರುವ ರೈತರಿಗೆ ಸಾಲ ಮರುಪಾವತಿ ಮತ್ತೊಂದು ಸಂಕಷ್ಟ ತಂದೊಡ್ಡಿದೆ. ಇಂತಹ ಸಂದರ್ಭಗಳಲ್ಲಿ ರೈತರಿಗೆ ಸಹಾಯ ಮಾಡಬೇಕಿರುವ ಸರಕಾರ ನಿದ್ದೆಯಿಂದ ಎದ್ದಿಲ್ಲ. ಸಿಎಂ ಯಡಿಯೂರಪ್ಪನವರು ನಮ್ಮ ಭಾಗದ ರೈತರ ಕಡೆ ಗಮನ ಹರಿಸಬೇಕೆಂದು ಆಗ್ರಹಿಸಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…