ಕಲಬುರಗಿ: ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಬೂದಿಹಾಳ ಪಿ.ಎಚ್.ಗ್ರಾಮದ ಅಮಾಯಕ ದಲಿತ ಯುವಕನನ್ನು ಹತ್ಯೆ ಮಾಡಿದ ಆರೋಪಿಗಳನ್ನು ಬಂಧಿಸಿ ಗಡಿಪಾರು ಮಾಡಬೇಕು ಎಂದು ಒತ್ತಾಯಿಸಿ ದಲಿತ ಹಕ್ಕುಗಳ ಜಿಲ್ಲಾ ಸಮಿತಿ ಪದಾಧಿಕಾರಿಗಳು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಹತ್ಯೆಯಾದ ಅನಿಲ್ ಇಂಗಳಗಿ ಎನ್ನುವ ಯುವಕನಿಗೆ ದೇವಸ್ಥಾನದ ಕಟ್ಟೆಯ ಮೇಲೆ ಕುಳಿತ ಎನ್ನುವ ಕಾರಣಕ್ಕೆ ಜಾತಿ ನಿಂದನೆ ಮಾಡಿ ಹತ್ಯೆ ಮಾಡಿದ್ದಾರೆ. ದಲಿತರಿಗೆ ಜಾತಿ ಹೆಸರಿನಲ್ಲಿ ದೌರ್ಜನ್ಯ, ಹಲ್ಲೆ, ಹತ್ಯೆ, ನಿರಂತರವಾಗಿ ನಡೆಯುತ್ತಿರುವುದು ಖಂಡನೀಯವಾಗಿದೆ ಎಂದು ದೂರಿದರು.
ಕೊಲೆ ಮಾಡಿದ ಆರೋಪಿಗಳನ್ನು ಬಂಧಿಸಬೇಕು. ಯುವಕನ ಕುಟುಂಬಕ್ಕೆ ರೂ.50 ಲಕ್ಷ್ ಪರಿಹಾರ ಹಾಗೂ ಭೂಮಿ ಮತ್ತು ಆತನ ಕುಟುಂಬ ಸದಸ್ಯರಿಗೆ ಸರಕಾರಿ ಉದ್ಯೋಗ ನೀಡಬೇಕು ಎಂದು ಆಗ್ರಹಿಸಿದರು.
ಪಾಂಡುರಂಗ ಮಾವಿನಕರ್, ಸಿದ್ದಲಿಂಗ ಪಾಳಾ, ಪೀರಪ್ಪ ಮಾದರ್, ಮೈಲಾರಿ ದೊಡ್ಡಮನಿ ಹಾಗೂ ಇತರರು ಇದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…