ಹೈದರಾಬಾದ್ ಕರ್ನಾಟಕ

ಅತಿಥಿ ಉಪನ್ಯಾಸಕರ ವಿವಿಧ ಬೇಡಿಕೆಗಳ ಈಡೇರಿಕೆಗೆ ಸಚಿವ ಶೆಟ್ಟರ್ ಗೆ ಮನವಿ

ಕಲಬುರಗಿ: ಅತಿಥಿ ಉಪನ್ಯಾಸಕರಿಗೆ ಸೇವಾ ಭದ್ರತೆ ಒದಗಿಸಬೇಕು ಮತ್ತು ಯಾವುದೇ ಕಾರಣಕ್ಕೂ ಸೇವೆಯಿಂದ ಕೈಬಿಡಬಾರದು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ಅತಿಥಿ ಉಪನ್ಯಾಸಕರ ಹೋರಾಟ ಸಮಿತಿ ಕಲಬುರ್ಗಿ ಜಿಲ್ಲಾ ಸಮಿತಿಯಿಂದ ಕರ್ನಾಟಕ ಸರ್ಕಾರದ ಸಣ್ಣ ಮತ್ತು ಮಧ್ಯಮ ಕೈಗಾರಿಕಾ ಖಾತೆ ಸಚಿವ ಜಗದೀಶ್ ಶೆಟ್ಟರ್ ಅವರಿಗೆ ಮಂಗಳವಾರ ಮನವಿ ಪತ್ರವನ್ನು ಸಲ್ಲಿಸಲಾಯಿತು.

ರಾಜ್ಯದಲ್ಲಿರುವ 413 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ 14, 564 ಅತಿಥಿ ಉಪನ್ಯಾಸಕರು ಕಾರ್ಯನಿರ್ವಹಿಸುತ್ತಿದ್ದಾರೆ. 2019ರ ಜನವರಿಯಲ್ಲಿ ಯುಜಿಸಿ ಸುತ್ತೋಲೆಯು, ಸರ್ಕಾರಿ ಪದವಿ ಕಾಲೇಜುಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರಿಗೆ ಪ್ರತಿ ಬೋಧನಾ ಅವಧಿಗೆ ರೂಪಾಯಿ 1500 ಅಥವಾ ಮಾಸಿಕ50, 000 ವರೆಗೆ ವೇತನವನ್ನು ನಿಗದಿ ಮಾಡಬೇಕು ಎಂದು ನಿರ್ದೇಶನ ನೀಡಿತ್ತು. ಆದರೆ ಇಂದಿಗೂ ನಮ್ಮ ರಾಜ್ಯದಲ್ಲಿ ಅತಿಥಿ ಉಪನ್ಯಾಸಕರಿಗೆ ನೆಟ್, ಸೆಟ್, ಪಿಎಚ್ಡಿ, ಆಗಿರುವವರಿಗೆ ಮಾಸಿಕ 13, 000 ಸಾವಿರ ಉಳಿದವರಿಗೆ 11, 000 ಸಾವಿರ ವೇತನ ನೀಡಲಾಗುತ್ತದೆ. ಇನ್ನೊಂದೆಡೆ ಕಳೆದ ನಾಲ್ಕೈದು ತಿಂಗಳಿಂದ ಆ ಕೂಡಾ ವೇತನ ಪಾವತಿಯಾಗಿಲ್ಲ.

ಕೋವಿಡ್-19 ಲಾಕ್ಡೌನ್ ನಿಂದಾಗಿ ಅತಿಥಿ ಉಪನ್ಯಾಸಕರ ಸಮಸ್ಯೆಗಳು ತೀವ್ರವಾಗಿ ಉಲ್ಬಣಗೊಂಡಿವೆ.
ಇತ್ತೀಚಿಗೆ ಹಲವು ಅತಿಥಿ ಉಪನ್ಯಾಸಕರು ಆರ್ಥಿಕ ಮುಗ್ಗಟ್ಟಿನಿಂದಾಗಿ 16 ಜನ ಆತ್ಮಹತ್ಯೆ ಮಾಡಿಕೊಂಡರುವ ಪ್ರಕರಣ ಬೆಳಕಿಗೆ ಬಂದಿವೆ. ಇಂತಹ ಸಂದರ್ಭದಲ್ಲಿ ಅತಿಥಿ ಉಪನ್ಯಾಸಕರ ಜೀವನದ ಜೊತೆ ಸರಕಾರ ಚೆಲ್ಲಾಟವಾಡುವುದನ್ನು ಬಿಟ್ಟು ಅತಿಥಿ ಉಪನ್ಯಾಸಕರಿಗೆ ಸೇವಾ ಭದ್ರತೆಯನ್ನು ಖಾತ್ರಿಪಡಿಸಬೇಕು ಮತ್ತು ಯಾವುದೇ ಕಾರಣಕ್ಕೂ ಸೇವೆಯಿಂದ ಕೈಬಿಡಬಾರದು ಹಾಗೂ ಬಾಕಿ ಇರುವ ವೇತನ ಈ ಕೂಡಲೇ ಬಿಡುಗಡೆಗೊಳಿಸಬೇಕು ಎಂಬ ಬೇಡಿಕೆಗಳಿಗಾಗಿ ಆಗ್ರಹಿಸಲಾಯಿತು.

ಈ ಸಂದರ್ಭದಲ್ಲಿ ಸಮಿತಿಯ ಮುಖಂಡರಾದ ಭೀಮಾಶಂಕರ್ ಪಾಣೇಗಾಂವ್, ಜಗಪ್ಪ ತಳವಾರ್, ಅಣವೀರಪ್ಪ ಬೊಳೆವಾಡ್, ಈಶ್ವರ್ ಇ.ಕೆ., ಅಂಬಿಕಾ ಗುತ್ತೇದಾರ್ ಚಂದ್ರಶೇಖರ್ ಜಾಲವಾದಿ, ರಾಜಪ್ಪ ರಟಕಲ್, ಸುಭಾಸ್ ಚವಾಣ್, ಮಲ್ಲು ಧರಿಯಪುರ್ ಇದ್ದರು.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

10 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

20 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

20 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

20 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

2 days ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

2 days ago