ವಾಡಿ: ಕೊರೊನಾ ಸಂಕಷ್ಟದ ಮಧ್ಯೆ ಬಸ್ ಪಾಸ್ ರಿಯಾಯಿತಿಯನ್ನು ಏಕಾಏಕಿ ಹಿಂಪಡೆದ ರಾಜ್ಯ ಸರಕಾರದ ದೋರಣೆಯನ್ನು ಅಖಿಲ ಭಾರತ ಪ್ರಜಾಸತ್ತಾತ್ಮಕ ವಿದ್ಯಾರ್ಥಿ ಸಂಘಟನೆ (ಎಐಡಿಎಸ್‍ಒ) ಖಂಡಿಸಿದೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಎಐಡಿಎಸ್‍ಒ ನಗರ ಸಮಿತಿ ಅಧ್ಯಕ್ಷ ಗೌತಮ ಪರತೂರಕರ, ಇಷ್ಟು ವರ್ಷಗಳ ಕಾಲ ನೀಡುತ್ತಿದ್ದ ಬಸ್ ಪಾಸ್ ರಿಯಾಯಿತಿಯನ್ನು ಕೊರೋನಾ ಸಮಯದ ಆರ್ಥಿಕ ಬಿಕ್ಕಟ್ಟಿನ ಸಂದರ್ಭದಲ್ಲಿ ಹಿಂಪಡೆದಿರುವುದು ನಮ್ಮಲ್ಲಿ ಅಚ್ಚರಿ ಮತ್ತು ಆಘಾತ ಮೂಡಿಸಿದೆ. ರಾಜ್ಯದ ಜನತೆ ಲಾಕ್‍ಡೌನ್ ಪರಿಣಾಮದಿಂದ ಇನ್ನೂ ಚೇತರಿಸಿಕೊಂಡಿಲ್ಲ. ರಾಜ್ಯದ ಬಡ ರೈತರು, ಕಾರ್ಮಿಕರ ಪರಿಸ್ಥಿತಿ ಅತ್ಯಂತ ಶೋಚನೀಯವಾಗಿದೆ.
ಇತ್ತೀಚಿನ ನೆರೆ ಹಾವಳಿಯಿಂದಾಗಿ ಸಹಸ್ರಾರು ರೈತರು ತಮ್ಮ ಜೀವನೋಪಾಯ ಕಳೆದುಕೊಂಡಿದ್ದಾರೆ. ಅನೇಕ ಬಡ ರೈತ-ಕಾರ್ಮಿಕರ ಮಕ್ಕಳು ಹಿಂದೆಂದಿಗಿಂತಲೂ ಹೆಚ್ಚಾಗಿ ಶಿಕ್ಷಣದ ಪರೀಧಿಯಿಂದ ಹೊರಬೀಳಲಿದ್ದಾರೆ. ಸರ್ಕಾರವು ಈ ವರ್ಷ ಇಂತಹ ಪ್ರಕ್ಷುಬ್ಧ ಪರಸ್ಥಿತಿಯಲ್ಲಿ ಎಲ್ಲಾ ವಿದ್ಯಾರ್ಥಿಗಳ ಶೈಕ್ಷಣಿಕ ವೆಚ್ಚವನ್ನು ಭರಿಸಬೇಕಿತ್ತು. ಬದಲಾಗಿ ಶಿಕ್ಷಣ ನೀಡುವ ಜವಾಬ್ದಾರಿಯಿಂದ ಸರಕಾರ ಕೈಚೆಲ್ಲಿ ಕುಳಿತಿರುವುದು ಅತ್ಯಂತ ಖಂಡನೀಯ.
ಸಾವಿರಾರು ವಿದ್ಯಾರ್ಥಿಗಳು ತಮ್ಮ ಕನಿಷ್ಟ ಕಾಲೇಜು ಶುಲ್ಕವನ್ನೂ ಹೊಂದಿಸಲು ಪರದಾಡುತ್ತಿರುವ ಈ ಸಂದರ್ಭದಲ್ಲಿ ಬಸ್ ಪಾಸ್‍ನ ಸಂಪೂರ್ಣ ಹೊರೆಯನ್ನು ರಾಜ್ಯದ ವಿದ್ಯಾರ್ಥಿಗಳ ತಲೆಯ ಮೇಲೆ ಹಾಕಿರುವುದು ಜನವಿರೋಧಿ ನಿಲುವಾಗಿದೆ. ಬಸ್ ಪಾಸ್ ರಿಯಾಯಿತಿಯು ಹಲವಾರು ವರ್ಷಗಳ ಕಾಲ ವಿದ್ಯಾರ್ಥಿಗಳು ಹೋರಾಡಿ ರಕ್ಷಿಸಿಕೊಂಡ ಹಕ್ಕು. ಸರಕಾರ ವಿದ್ಯಾರ್ಥಿಗಳ ಈ ಪ್ರಜಾತಾಂತ್ರಿಕ ಹಕ್ಕಿನ ಹರಣ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.
ಬಸ್ ಪಾಸ್ ಹಿಂಪಡೆಯುವ ಈ ಅಪ್ರಜಾತಾಂತ್ರಿಕ ನಡೆಯನ್ನು ಸರಕಾರ ಕೂಡಲೇ ಹಿಂಪಡೆಯಬೇಕು. ರಿಯಾಯಿತಿ ಬಸ್ ಪಾಸ್‍ನ ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ಹೋರಾಟಕ್ಕೆ ಅಣಿಯಾಗಲು ವಿದ್ಯಾರ್ಥಿಗಳು ಮುಂದೆ ಬರಬೇಕು. ಸರಕಾರದ ಈ ವಿದ್ಯಾರ್ಥಿ ವಿರೋಧಿ ನಡೆಯನ್ನು ಖಂಡಿಸಿ, ರಿಯಾಯಿತಿ ಬಸ್ ಪಾಸ್‍ಗಾಗಿ ಆಗ್ರಹಿಸಿ ಸೆ.8 ರಂದು ರಾಜ್ಯವ್ಯಾಪಿ ಹೋರಾಟಕ್ಕೆ ಕರೆ ನೀಡಲಾಗಿದ್ದು, ವಿದ್ಯಾರ್ಥಿಗಳು ಸಹಸ್ರಾರು ಸಂಖ್ಯೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಪ್ರತಿಕ್ರೀಯಿಸಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…