ಕಲಬುರಗಿ: ನಗರದ ಗಂಜ್ ಪ್ರದೇಶದಲ್ಲಿ ಯುವಕನೋರ್ವ ಕೊಲೆಯಾದ ಘಟನೆ ನಡೆದಿದೆ.
ಚಿಂಚೋಳಿ ತಾಲ್ಲೂಕಿನ ಚಿಂತಾ ಗ್ರಾಮದ ರಾಬರ್ಟ್ ರಮೇಶ ಕಣ್ಣಿ (18) ಕೊಲೆಯಾದ ಯುವಕನಾಗಿದ್ದು, ಗಂಜ್ ಪ್ರದೇಶದ ರೇವಣಸಿದ್ಧೇಶ್ವರ ಹೋಟೆಲ್ ನಲ್ಲಿ ಕೆಲಸ ಮಾಡುತ್ತಿದ್ದ ಎಂದು ತಿಳಿದು ಬಂದಿದೆ.
ಕೊಲೆ ಮಾಡಿದವರು ಯಾರು? ಯಾಕೆ ಕೊಲೆ ಮಾಡಿದ್ದಾರೆ ಎಂಬುದರ ಬಗ್ಗೆ ಈವರೆಗೆ ಏನೂ ತಿಳಿದು ಬಂದಿಲ್ಲ. ಈ ಕುರಿತು ಪೊಲೀಸರು ತನಿಖೆ ನಡೆಸಿತಿದ್ದು, ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.