ಶಹಾಬಾದ:ಶಿಕ್ಷಕರು ಮಕ್ಕಳನ್ನು ನಿರಂತರ ಕಲಿಕೆಗೆ ಹಚ್ಚುವ ಸಲುವಾಗಿ ಶಿಕ್ಷಣ ಇಲಾಖೆ ಪರ್ಯಾಯ ಮಾರ್ಗವಾಗಿ ವಿದ್ಯಾಗಮ ಜಾರಿಗೆ ತಂದಿದ್ದು, ಶಿಕ್ಷಕರು ಈ ಯೋಜನೆಯನ್ನು ಯಶಸ್ವಿಗೊಳಿಸವಲ್ಲಿ ಮುಂದಾಗಬೇಕೆಂದು ಶಿಕ್ಷಣ ಸಂಯೋಜಕ ವೆಂಕಟರೆಡ್ಡಿ ಹೇಳಿದರು.
ಅವರು ಬುಧವಾರ ನಗರದ ಶಿವಯೋಗೇಶ್ವರ ಪ್ರೌಢಶಾಲೆಯ ಮಕ್ಕಳನ್ನು ನಿಜಾಮ ಬಜಾರನ ಸಮುದಾಯ ಭವನದಲ್ಲಿ ಹಾಗೂ ಬಸವೇಶ್ವರ ನಗರದ ಬಸವಣ್ಣನ ಗುಡಿಯಲ್ಲಿ ನಡೆಸುತ್ತಿರುವ ವಠಾರ ಶಾಲೆಗೆ ಬೇಟಿ ನೀಡಿ ಮಾತನಾಡಿದರು.
ಕೋವಿಡ್-19 ದಿಂದ ಸುಮಾರು ಮೂರು ತಿಂಗಳು ಶಾಲಾ ತರಗತಿಗಳು ನಡೆಯುತ್ತಿಲ್ಲ.ಇದರಿಂದ ಮಕ್ಕಳು ಅಭ್ಯಾಸದಿಂದ ವಂಚಿತರಾಗುತ್ತಿರುವುದರಿಂದ ಅವರು ಕಲಿಕೆಯಲ್ಲಿ ತೊಡಗುವಂತೆ ಮಾಡಲು ಶಿಕ್ಷಣ ಇಲಾಖೆ ವಿದ್ಯಾಗಮ ಯೋಜನೆ ತಂದಿದ್ದು, ಶಿಕ್ಷಕರು ಮಕ್ಕಳಿರುವ ಸ್ಥಳಕ್ಕೆ ಹೋಗಿ ಪಾಠ ಹೇಳತಕ್ಕದ್ದು.ಮಕ್ಕಳು ಸಾಮಾಜಿಕ ಅಂತರ ಕಾಪಾಡಿಕೊಂಡು, ಕಡ್ಡಾಯವಾಗಿ ಮಾಸ್ಕ ಧರಿಸಲು ಶಿಕ್ಷಕರು ಸಲಹೆ ನೀಡಬೇಕು.ಮಕ್ಕಳಿಗೆ ಸಾಮನ್ಯ ಜ್ಞಾನ ಹಾಗೂ ಕಲಿಕಾ ಸಾಮಥ್ಯವನ್ನು ಹೆಚ್ಚಿಸುವ ಚಟುವಟಿಕೆಗಳಿಗೆ ಹೆಚ್ಚು ಒತ್ತು ನೀಡಬೇಕೆಂದು ತಿಳಿಸಿದರು.
ಶಿಕ್ಷಣ ಸಂಯೋಜಕ ರವೀಂದ್ರ ರಾಠೋಡ ಮಾತನಾಡಿ, ವಠಾರ ಶಾಲೆಗೆ ಬರದ ಮಕ್ಕಳನ್ನು ಪೋಷಕರಿಗೆ ತಿಳಿಸಿ ಬರುವಂತೆ ಪ್ರೇರೇಪಿಸಿ ಎಂದು ಹೇಳಿದರು. ಅಲ್ಲದೇ ನಂತರ ಮಕ್ಕಳ ಜತೆಗೆ ಸಾಮನ್ಯ ಜ್ಞಾನ ಪ್ರಶ್ನೆಗಳನ್ನು ಕೇಳಿ ಅವರಿಂದ ಉತ್ತರ ಪಡೆದರು.ಅಲ್ಲದೇ ಮಕ್ಕಳು ಈ ಯೋಜನೆಯ ಲಾಭವನ್ನು ಪಡೆದುಕೊಳ್ಳಬೇಕೆಂದು ಹೇಳಿದರು.ಈ ಸಂದರ್ಭದಲ್ಲಿ ಶಿಕ್ಷಕ ಗಣೇಶ ಜಾಯಿ, ಮಹೇಂದ್ರ ಹಾಗೂ ಶಾಲಾ ಮಕ್ಕಳು ಇದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…