ಶಹಾಬಾದ:ನಗರದ ಬಸವೇಶ್ವರ ವೃತ್ತದಿಂದ ಜೇವರ್ಗಿ ವೃತ್ತದವರೆಗಿನ ಕಳಪೆ ರಸ್ತೆ ಕಾಮಗಾರಿಯಿಂದ ರಾಜ್ಯ ಹೆದ್ದಾರಿ ರಸ್ತೆಯಲ್ಲಿ ಹೊಂಡಗಳು ನಿರ್ಮಾಣವಾಗಿ ವಾಹನ ಸವಾರರಿಗೆ ಅಪಾಯಕ್ಕೆ ಆಹ್ವಾನ ನೀಡುತ್ತಿದ್ದ ರಸ್ತೆಯಲ್ಲಿನ ಹೊಂಡಗಳಿಗೆ ಕಂಕರ್ ತುಂಬುವ ಕಾರ್ಯಕ್ಕೆ ನಗರಸಭೆಯ ಅಧಿಕಾರಿಗಳು ಮುಂದಾಗಿರುವುದಕ್ಕೆ ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಲೋಹಿತ್ ಕಟ್ಟಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ರಸ್ತೆ ಅಗಲೀಕರಣ ಮಾಡಲು ಹೋಗಿ ಸಂಪೂರ್ಣ ರಸ್ತೆಯನ್ನೇ ಗುತ್ತಿಗೆದಾರ ಹಾಳು ಮಾಡಿದ್ದಾನೆ. ರಸ್ತೆ ಕಿತ್ತು ಹೋದರೂ ಇಲ್ಲಿನ ಅಧಿಕಾರಿಗಳು ಮಾತ್ರ ಕಣ್ಮುಚ್ಚಿ ಕುಳಿತ್ತಿದ್ದರು. ಇತ್ತಿಚ್ಚಿಗಷ್ಟೇ ಬಂದ ನೂತನ ನಗರಸಭೆಯ ಪೌರಾಯುಕ್ತ ಕೆ.ಗುರಲಿಂಗಪ್ಪ ಟೂಥ್ ಪಾಲಿಷ್ ಕೆಲಸಕ್ಕೆ ಮುಂದಾಗಿರುವುದು ಸಾರ್ವಜನಿಕರು ಬೇಸರ ವ್ಯಕ್ತಪಡಿಸಿದ್ದಾರೆ. ಇಂತಹ ಟೂಥ್ ಪಾಲಿಷ್ ಕೆಲಸಗಳು ಹಲವು ಬಾರಿ ಮಾಡಿದ್ದಾರೆ. ಕೋಟಿಗಟ್ಟಲೇ ಬಂದ ಅನುದಾನದಿಂದ ಮಾಡಿದ ರಸ್ತೆಯೇ ಹಾಳಾಗಿರುವಾಗ ಟೂಥ್ ಪಾಲಿಷ್ ಕೆಲಸದಿಂದ ಏನು ಪ್ರಯೋಜನ ಎಂಬ ಪ್ರಶ್ನೆ ಸಾರ್ವಜನಿಕರದಾಗಿದೆ.
ಕಳಪೆ ಕಾಮಗಾರಿಯಿಂದ ಇಲ್ಲಿನ ರಸ್ತೆ ಇನ್ನೂ ನಿರ್ಮಾಣ ಹಂತದಲ್ಲೇ ಹಾಳಾಗಿ ಹೋದರೂ ಅಧಿಕಾರಿಗಳು ಕ್ರಮಕ್ಕೆ ಮುಂದಾಗುತ್ತಿಲ್ಲವೆಂಬುದು ಅನುಮಾನ ಹುಟ್ಟಿಸುತ್ತಿದೆ. ಅಲ್ಲದೇ ಶಾಸಕ ಬಸವರಾಜ ಮತ್ತಿಮಡು ಅವರು ಯಾಕೇ ನಿರ್ಲಕ್ಷ್ಯ ತೋರುತ್ತಿದ್ದಾರೆ ಎಂಬುದು ಗೊತ್ತಾಗುತ್ತಿಲ್ಲ ಎಂಬುದು ಸಾರ್ವಜನಿಕರ ಯಕ್ಷ ಪ್ರಶ್ನೆಯಾಗಿದೆ. ಈಗಾಲೇ ಕಂಕರ್ ತಂದು ಒಂದು ಹೊಂಡದಲ್ಲಿ ಹಾಕಿ ಸಮತಟ್ಟು ಮಾಡದೇ ಹೋಗಿದ್ದಾರೆ. ಇದು ಕೂಡ ಸಾರ್ವಜನಿಕರಿಗೆ ಸಂಚಾರಕ್ಕೆ ತೊಂದರೆಯಾಗುತ್ತಿದೆ.ಮತ್ತೆ ಹೊಸ ರಸ್ತೆ ಮಾಡಿದರೇ ಮಾತ್ರ ಪರಿಹಾರ.ಆದ್ದರಿಂದ ಶಾಸಕರು ಕಳಪೆ ಕಾಮಗಾರಿ ಕೈಗೊಂಡ ಗುತ್ತಿಗೆದಾರನ ವಿರುದ್ಧ ಕ್ರಮಕೈಗೊಳ್ಳಬೇಕು.ಹೊಸದಾಗಿ ಮತ್ತೆ ರಸ್ತೆ ನಿರ್ಮಾಣ ಮಾಡಕೆಂಬುದೇ ಸಾರ್ವಜನಿಕರ ಒತ್ತಾಯವಾಗಿದೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…