ಕಲಬುರಗಿ: ಇಡೀ ದೇಶವು ತೀವ್ರ ಆರೋಗ್ಯ ಮತ್ತು ಆರ್ಥಿಕ ಬಿಕ್ಕಟ್ಟನ್ನು ಎದುರಿಸುತ್ತಿರುವ ಸಾಂಕ್ರಾಮಿಕ ರೋಗ ಕೋವಿಡ್-19 ನಿಂದಾಗಿ ದೇಶದ ಜನತೆ ಎಲ್ಲಾ ರೀತಿಯ ಸಂಕಷ್ಟಗಳನ್ನು ಎದುರಿಸುತ್ತಿರುವ ಪರಿಸ್ಥಿತಿಯಲ್ಲಿ, ದೇಶಾದ್ಯಂತ ವೃತ್ತಿಪರ ಕೋರ್ಸ್‍ಗಳಿಗೆ ಪ್ರವೇಶಕ್ಕಾಗಿ ಜೆಇಇ-ನೀಟ್ ಪರೀಕ್ಷೆಗಳನ್ನು ನಡೆಸುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಭಾರತ ವಿದ್ಯಾರ್ಥಿ ಫೆಡರೇಷನ್ ಎಸ್.ಎಫ್.ಐ ಕಲಬುರಗಿ ಜಿಲ್ಲಾ ಸಮಿತಿಯು ಖಂಡಿಸಿ, ಪರೀಕ್ಷೆ ರದ್ದುಗೊಳಿಸಲು ಆಗ್ರಹಿಸಿ ಇಂದು ಭಾರತ ವಿದ್ಯಾರ್ಥಿ ಫೆಡರೇಷನ್ ಜಿಲ್ಲಾ ಸಮಿತಿ ರಾಷ್ಟ್ರಪತಿಗಳಿಗೆ ಒತ್ತಾಯಿಸಿದೆ.
ಜಿಲ್ಲಾಧಿಕಾರಿಗಳ ಮನವಿ ಸಲ್ಲಿದ ಸಂಘಟನಾ ಸಮಿತಿ ಸೋಂಕಿತರ ಸಂಖ್ಯೆ ಮತ್ತು ಸೋಂಕಿನಿಂದ ಸಾಯುವವರ ಸಂಖ್ಯೆಯು ಪ್ರತಿದಿನ ಹೆಚ್ಚಾಗುತ್ತಿರುವುದರಿಂದ, ಸರ್ಕಾರದ ಅತ್ಯಂತ ಸೂಕ್ಷ್ಮವಲ್ಲದ ಕ್ರಮವಾಗಿದ್ದು, ವಿದ್ಯಾರ್ಥಿಗಳ ಆರೋಗ್ಯವನ್ನು ಕಾಪಾಡಬೇಕಾದ ಸರ್ಕಾರಗಳು ಸಂಪೂರ್ಣವಾಗಿ ನಿರ್ಲಕ್ಷಿಸುತ್ತಿವೆ. ಈ ಬಿಜೆಪಿ ಸರಕಾರದ ಈ ನಿರಂಕುಶಾಧಿಕಾರಿ ಕ್ರಮವನ್ನು ಖಂಡಿಸಿ ದೇಶಾದ್ಯಂತ ವಿದ್ಯಾರ್ಥಿಗಳು ಖಂಡನೆ ವ್ಯಕ್ತಪಡಿಸುತ್ತಿದ್ದಾರೆ ಎಂದು ಸಂಘಟನೆಯ ಜಿಲ್ಲಾಧ್ಯಕ್ಷ ಮೈಲಾರಿ ದೊಡ್ಡಮನಿ ತಿಳಿಸಿದರು.
ಈ ವಿದ್ಯಾರ್ಥಿ ವಿರೋಧಿ ಸರ್ಕಾರ ಮತ್ತು ಅದರ ನೀತಿಗಳ ವಿರುದ್ಧ ವಿದ್ಯಾರ್ಥಿ, ವಿದ್ಯಾರ್ಥಿ ಸಂಘಟನೆಗಳು ಮತ್ತು ಪಾಲಕ-ಪೋಷಕರು ಒಂದಾಗಿ ಹೋರಾಟವನ್ನು ಮಾಡುತ್ತಿದ್ದಾರೆ. ಹಾಗೆಯೇ ಈ ಸಮಯದಲ್ಲಿ ಪರೀಕ್ಷೆಗಳನ್ನು ನಡೆಸುವುದು ವಿದ್ಯಾರ್ಥಿಗಳ ಆರೋಗ್ಯದ ಹಿತದೃಷ್ಟಿಯಿಂದ ಒಳ್ಳೆಯದಲ್ಲ, ಈಗಾಗಲೇ ಸರ್ಕಾರದ ಈ ನಿರ್ಧಾರವನ್ನು ಪುನರ್ವಿಮಶಿಸುವಂತೆ ಸುಪ್ರೀಂಕೋರ್ಟ್ ಮುಂದೆ ಮೇಲ್ಮನವಿ ಸಲ್ಲಿಸಿದೆ ಎಂದರು.
ಈ ವೇಳೆಯಲ್ಲಿ ಎಸ್ ಎಫ್ ಐ ಜಿಲ್ಲಾ ಕಾರ್ಯದರ್ಶಿ ಸಿದ್ದಲಿಂಗ ಪಾಳಾ, ವಿಶ್ವನಾಥ್ ರಾಗಿ, ಕರ್ಣಪ್ಪ, ಲಕ್ಷ್ಮಣ ಪಾಳ, ಸಚಿನ್ ಮಲ್ಲಾರ್, ಪ್ರೇಮ್ ಕುಮಾರ್, ಸೇರಿದಂತೆ ಮುಂತಾದವರು ಇದ್ದರು.