ಬೆಂಗಳೂರು: ಕಲಬುರಗಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ನಿರುದ್ಯೋಗಿ ಯುವಕ/ ಯುವತಿಯರಿಗಾಗಿ ಉದ್ಯಮಶೀಲತೆ ಯೋಜನೆಯಡಿಯಲ್ಲಿ ಡಾ. ಬಿ ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮ, ಕರ್ನಾಟಕ ಭೋವಿ ಅಭಿವೃದ್ದಿ ನಿಗಮ, ಕರ್ನಾಟಕ ತಾಂಡಾ ಅಭಿವೃದ್ದಿ ನಿಗಮ ಹಾಗೂ ಕರ್ನಾಟಕ ಆದಿಜಾಂಬವ ಅಭಿವೃದ್ದಿ ನಿಗಮಗಳ ಮೂಲಕ, ರೂ 200 ಕೋಟಿ ವೆಚ್ಚದಲ್ಲಿ 4500 ವಾಹನಗಳನ್ನು ಒದಗಿಸಲು “ಐರಾವತ” ಯೋಜನೆಯನ್ನು ಅನುಷ್ಠಾನಗೊಳಿಸುತ್ತಿದೆ.
ಈ ಯೋಜನೆಯಡಿಯಲ್ಲಿ ಸೌಲಭ್ಯ ಬಯಸಿ ಆಯ್ಕೆಯಾಗುವ ಪಜಾ ಹಾಗೂ ಪಪಂದ ಅಭ್ಯರ್ಥಿಗಳಿಗೆ ವಾಹನದ ಒಟ್ಟು ವೆಚ್ಚದಲ್ಲಿ ರೂ 5 ಲಕ್ಷಗಳನ್ನು ನಿಗಮಗಳ ವತಿಯಿಂದ ಸಹಾಯಧನವನ್ನಾಗಿ ಕೊಡಲಾಗುತ್ತದೆ.
ಸಮಾಜ ಕಲ್ಯಾಣ ಇಲಾಖೆಯ ಮಹತ್ವಾಕಾಂಕ್ಷಿ ಕಾರ್ಯಕ್ರಮವಾದ ‘ಐರಾವತ’ ಯೋಜನೆಯಡಿ ಮುಖ್ಯಮಂತ್ರಿ ಶ್ರೀ ಹೆಚ್.ಡಿ.ಕುಮಾರಸ್ವಾಮಿ ಅವರು ವಿಧಾನಸೌಧದ ಪೂರ್ವದ್ವಾರದ ಮುಂಭಾಗದಲ್ಲಿ ಇಂದು ಮೇ 30 (ಗುರುವಾರ) ನಡೆದ ಕಾರ್ಯಕ್ರಮದಲ್ಲಿ 209 ಮಂದಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಫಲಾನುಭವಿಗಳಿಗೆ ವಾಹನಗಳನ್ನು ವಿತರಿಸಿದರು.
ಐರಾವತ ಯೋಜನೆಯಡಿ ಪ್ರಸಕ್ತ ಸಾಲಿನಲ್ಲಿ 200 ಕೋಟಿ ರೂ.ವೆಚ್ಚದಲ್ಲಿ 4500 ಮಂದಿಗೆ ವಾಹನಗಳನ್ನು ಓಲಾ/ಊಬರ್ ಸಂಸ್ಥೆಗಳ ಸಹಯೋಗದೊಂದಿಗೆ ನೀಡಲಾಗುತ್ತಿದೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
View Comments
ಕಲಬುರಗಿಯಲ್ಲಿ ಯಾವಾಗ ವಿತರಿಸಲಾಗುತ್ತದೆ ?