ಬೆಂಗಳೂರು: ಟ್ರೋಲ್‌ಗಳು ಹಾಗೂ ವೈರಲ್ ವಿಡಿಯೋಗಳ ಮೂಲಕ ವಿಶ್ವವಿಖ್ಯಾತಿಯನ್ನ ಪಡೆದಿರುವ ಸಿಲ್ಕ್ ಬೋರ್ಡ್ ಜಂಕ್ಷನ್ ನ ಸಂಚಾರ ದಟ್ಟಣೆಯನ್ನು ಸರಾಗಗೊಳಿಸುವ ಬೊಮ್ಮನಹಳ್ಳಿ – ಬಿ.ಟಿ.ಎಂ ಲೇಔಟ್ ರಸ್ತೆ ಹಾಗೂ ಸಂಪರ್ಕ ಸೇತುವೆಯ ಉದ್ಘಾಟನೆ ಸೆಪ್ಟೆಂಬರ್ 7 ರ ಸೋಮುವಾರದಂದು ನಡೆಯಲಿದೆ. ಆ ದಿನ ಕಂದಾಯ ಸಚಿವರಾದ ಶ್ರೀ ಅಶೋಕ್ ಅವರು ಈ ರಸ್ತೆಯನ್ನು ಸಾರ್ವಜನಿಕರ ಬಳಕೆಗೆ ಮುಕ್ತಗೊಳಿಸಲಿದ್ದಾರೆ ಎಂದು ಬೊಮ್ಮನಹಳ್ಳಿ ವಾರ್ಡ್ ನ ಪಾಲಿಕೆ ಸದಸ್ಯರೂ ಆಗಿರುವ ಉಪ ಮೇಯರ್ ಸಿ.ಆರ್.ರಾಮಮೋಹನ್ ರಾಜ್ ಅವರು ತಿಳಿಸಿದರು.
ಪ್ರತಿದಿನ ಲಕ್ಷಾಂತರ ವಾಹನ ಸವಾರರು ಈ ಜಂಕ್ಷನ್ ನಲ್ಲಿ ಸಂಚಾರ ದಟ್ಟಣೆಯ ಕಾರಣ ತೀವ್ರ ತೊಂದರೆಯನ್ನು ಅನುಭವಿಸುತ್ತಿದ್ದರು. ಈ ಬವಣೆಯನ್ನು ನಿವಾರಿಸುವ ದೃಷ್ಟಿಯಿಂದ ಕೈಗೊಂಡ ಕಾಮಗಾರಿಯ ಪೂರ್ಣಗೊಂಡಿದೆ. ಈ ಸಂಪರ್ಕ ರಸ್ತೆಯ ಕಾರಣದಿಂದಾಗಿ ಸುಮಾರು 50 ಸಾವಿರ ವಾಹನ ಸವಾರರು ಸಂಚಾರ ದಟ್ಟಣೆಯ ಬವಣೆಯಿಂದ ಬಚಾವ್ ಆಗಲಿದ್ದಾರೆ. ಬೊಮ್ಮಹಳ್ಳಿ ಹಾಗೂ ಬಿ.ಟಿ.ಎಂ ಪ್ರದೇಶದ ಜನರ ಅನುಕೂಲಕ್ಕಾಗಿ ಉತ್ತಮ ಗುಣಮಟ್ಟದ ರಸ್ತೆಯನ್ನು ನಿರ್ಮಿಸಲಾಗಿದೆ ಎಂದು *ಬೊಮ್ಮನಹಳ್ಳಿ ವಾರ್ಡ್ ನ ಪಾಲಿಕೆ ಸದಸ್ಯರೂ ಆಗಿರುವ ಉಪ ಮೇಯರ್ ಸಿ.ಆರ್.ರಾಮಮೋಹನ್ ರಾಜ್* ಅವರು ತಿಳಿಸಿದರು.
ರಸ್ತೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಕಂದಾಯ ಸಚಿವ ಆರ್. ಅಶೋಕ, ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸದಸ್ಯ ತೇಜಸ್ವಿ ಸೂರ್ಯ, ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಸತೀಶ್ ರೆಡ್ಡಿ, ಬಿಟಿಎಂ ಲೇಔಟ್ ನ ಶಾಸಕ ರಾಮಲಿಂಗಾ ರೆಡ್ಡಿ, ಮೇಯರ್ ಸೇರಿದಂತೆ ಬಿಬಿಎಂಪಿಯ ಉನ್ನತಾಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.