ಕಲಬುರಗಿ: ಕಲ್ಯಾಣ ಕರ್ನಾಟಕ ಪ್ರದೇಶದ ಅಡಿಯಲ್ಲಿ ಬರುವ 6 ಜಿಲ್ಲೆಗಳ ಗುತ್ತಿಗೆದಾರರ ಸಂಘದ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು ಹಾಗೂ ಸದಸ್ಯರ ಸಭೆಯನ್ನು ಸೆಪ್ಟೆಂಬರ್ 7 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಲೋಕೋಪಯೋಗಿ ಭವನದ ಆವರಣದಲ್ಲಿ ನಡೆಯಲಿದೆ.
ಬೆಂಗಳೂರಿನ ಕೆಎಸ್ಸಿಎ ಜಂಟಿ ಕಾರ್ಯದರ್ಶಿ ಜಗನ್ನಾಥ ಶೇಗಜಿ, ಕೆಎಸ್ಸಿಎ ಸದಸ್ಯರಾದ ಎಮ್.ಕೆ.ಪಾಟೀಲ ಅಧ್ಯಕ್ಷತೆ ವಹಿಸುವರು ಎಂದು ಕಲಬುರ್ಗಿ ಜಿಲ್ಲಾ ಗುತ್ತಿಗೆದಾರರ ಸಂಘದ ಪ್ರಧಾನ ಕಾರ್ಯದರ್ಶಿ ಸಂಜಯ ಆರ್.ಕೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.