ಸುರಪುರ: ನಗರದ ಶ್ರೀ ಜನನಿ ಮಹಿಳಾ ಕಲಾ ಮತ್ತು ವಾಣಿಜ್ಯ ಪದವಿ ಮಹಾವಿದ್ಯಾಲಯದಲ್ಲಿ ವಿಶ್ವ ತಂಬಾಕು ರಹಿತ ದಿನ ವನ್ನು ಆಚರಿಸಲಾಯಿತು.
ಈ ಸಂದರ್ಭದಲ್ಲಿ ರಾಷ್ಟ್ರೀಯ ಸೇವಾಯೋಜನೆಯ ಕಾರ್ಯಕ್ರಮ ಅಧಿಕಾರಿ ಡಾ.ಮಲ್ಲಿಕಾರ್ಜುನ ಕಮತಗಿಯವರು ಧೂಮಪಾನದ ವಿರುದ್ಧ ಜಾಗೃತಿ ಮೂಡಿಸುವ ಪ್ರತಿಜ್ಞಾ ವಿಧಿಯನ್ನು ಬೋಧಿಸಿ ಮಾತನಾಡಿ,ತಂಬಾಕು ಸೇವನೆ ಎಂಬುದು ಸಾವನ್ನು ತಾನೇ ತಂದುಕೊಂಡಂತೆ.ತಂಬಾಕು ಸೇವನೆಯಿಂದ ಕ್ಯಾನ್ಸರ್‌ನಂತ ಮಾರಕ ರೋಗಗಳಿಂದ ವ್ಯಕ್ತಿ ಸಾವನ್ನಪ್ಪುವ ಸಾಧ್ಯತೆಯಿದೆ.ಅಲ್ಲದೆ ವ್ಯಕ್ತಿಯೊಬ್ಬ ತಂಬಾಕು ಸೇವಿಸಿದರೆ ಅವರ ಅಕ್ಕ ಪಕ್ಕದಲ್ಲಿರುವವರಿಗು ಅದರ ಪರಿಣಾಮ ಬೀರುವ ಮೂಲಕ ನರಳಬೇಕಾಗಲಿದೆ.ಆದ್ದರಿಂದ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಸೇವನೆ ನಿಷೇಧಿಸಿ ಕಾನೂನು ರೂಪಿಸಲಾಗಿದೆ.ಇದನ್ನು ಸಾರ್ವಜನಿಕರು ಅರಿತುಕೊಂಡು ಪಾಲಿಸಬೇಕು.ಅದಕ್ಕಾಗಿ ವಿದ್ಯಾರ್ಥಿಗಳು ಜನರಲ್ಲಿ ಜಾಗೃತಿ ಮೂಡಿಸುವ ಮೂಲಕ ಸಮಾಜದ ಒಂದು ಪಿಡುಗನ್ನು ತೊಲಗಿಸುವಂತೆ ಕರೆ ನೀಡಿದರು.
ಈ ಸಂದರ್ಭದಲ್ಲಿ ಪ್ರಾಂಶುಪಾಲರಾದ ವೆಂಕಟೇಶ ಜಾಲಗಾರ ಮತ್ತು ಉಪನ್ಯಾಸಕರಾದ ಕುಮಾರಿ ಬಸವರಾಜೇಶ್ವರಿ ಘಂಟಿ, ಶಿವಕುಮಾರ ಕ್ವಾಟಿ ಮತ್ತು ಕಾಲೇಜಿನ ವಿದ್ಯಾರ್ಥಿನಿಯರು ಪಾಲ್ಗೊಂಡು ಪ್ರತಿಜ್ಞಾ ವಿಧಿಯನ್ನು ಸ್ವೀಕರಿಸಿದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…