ಜೇವರ್ಗಿ: ಇಂದು ಬೆಳಿಗ್ಗೆ 11.30ಕ್ಕೆ ದಲಿತ ಸಂಘರ್ಷ ಸಮಿತಿ ಮತ್ತು ದಲಿತ ವಿದ್ಯಾರ್ಥಿ ಒಕ್ಕೂಟ ತಾಲೂಕು ಶಾಖೆ ಜೇವರಿಗೆ ನೇತೃತ್ವದಲ್ಲಿ ಜೇವರ್ಗಿ ಮತ್ತು ಯಡ್ರಾಮಿ ವ್ಯಾಪ್ತಿಯ ಗ್ರಾಮಗಳಲ್ಲಿ ಬಗರ ಹುಕುಂ ಸಾಗುವಳಿ ಮಾಡುತ್ತಿರುವ ರೈತರಿಗೆ ಭೂಮಿಯ ಹಕ್ಕು ಪತ್ರಕ್ಕಾಗಿ ಒತ್ತಾಯಿಸಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.
ದಲಿತ ಸಂಘರ್ಷ ಸಮಿತಿ ಮತ್ತು ದಲಿತ ವಿದ್ಯಾರ್ಥಿ ಒಕ್ಕೂಟದ ವತಿಯಿಂದ ಹೋರಾಟ ನಡೆಸಿ, ತಹಶಿಲ್ದಾರ್ ಮುಖಾಂತರ ಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಿಗೆ ಮನವಿ ಪತ್ರ ಸಲ್ಲಿಸಲಾಗುತ್ತಿದೆ ಎಂದು ಸಮಿತಿಯ ತಾಲೂಕ ಸಂಚಾಲಕರಾದ ಸಿದ್ದರಾಮ ಕಟ್ಟಿ ತಿಳಿಸಿದ್ದಾರೆ.
ಜೇವರ್ಗಿ ಮತ್ತು ಯಡ್ರಾಮಿ ವ್ಯಾಪ್ತಿಯಲ್ಲಿ ಬರುವ ಎಲ್ಲಾ ವರ್ಗದ ರೈತರು ಪ್ರತಿಭಟನೆಯಲ್ಲಿ ಭಾಗವಹಿಸಿ ಹೋರಾಟಕ್ಕೆ ಪ್ರಗತಿಪರ ಸಂಘಟನೆಗಳು ವಿಚಾರವಂತರು ಭಾಗವಹಿಸಿ ಯಶಸ್ವಿಗೊಳಿಸಲು ದಲಿತ ಸಂಘರ್ಷ ಸಮಿತಿಯ ಶಿವ ಕುಮಾರ್ ಹೆಗಡೆ ಪತ್ರಿಕಾ ಪ್ರಕಟಣೆಗೆ ತಿಳಿಸಿದ್ದಾರೆ.