ಕಲಬುರಗಿ: ಕೊರೋನ ಸೋಂಕಿಗೆ ಒಳಗಾಗಿ ಬೆಂಗಳೂರಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಆಳಂದ ಶಾಸಕ ಸುಭಾಷ್ ಆರ್ ಗುತ್ತೇದಾರ ಅವರು ಸೋಂಕಿನಿಂದ ಗುಣಮುಖರಾಗುತ್ತಿದ್ದಾರೆ.
ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು. ತಾಲೂಕಿನ ಆಳಂದ ಪಟ್ಟಣ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಶಾಸಕರ ಹಿತೈಸಿಗಳು ಅವರ ಆರೋಗ್ಯ ಸುಧಾರಣೆಗಾಗಿ ಪ್ರಾರ್ಥನೆ ಕೈಗೊಂಡಿದ್ದರು.
ದೇವರ ಅನುಗೃಹ ಕಾರ್ಯಕರ್ತರ ಪ್ರಾರ್ಥನೆಯ ಪ್ರತಿಫಲವಾಗಿ ಶಾಸಕರು ಶೀಘ್ರವಾಗಿ ಗುಣಮುಖರಾಗುತ್ತಿದ್ದಾರೆ. ಶಾಸಕರ ಆರೋಗ್ಯ ಸುಧಾರಿಸಲೆಂದು ಪ್ರಾರ್ಥನೆ ಸಲ್ಲಿಸಿದ ಎಲ್ಲರಿಗೆ ಅನಂತ ಕೃತಜ್ಞತೆಗಳನ್ನು ಸಲ್ಲಿಸುವುದಾಗಿ ಶಾಸಕರ ಪುತ್ರ, ಜಿ.ಪಂ ಸದಸ್ಯ ಹರ್ಷಾನಂದ ಎಸ್ ಗುತ್ತೇದಾರ ತಿಳಿಸಿದ್ದಾರೆ.
ತಾಲೂಕಿನ ಹಲವು ಜನ ಮುಖಂಡರು, ಕಾರ್ಯಕರ್ತರು ತಮಗೆ ದೂರವಾಣಿ ಮೂಲಕ ಸಂಪರ್ಕಿಸಿ ಶಾಸಕರ ಭೇಟಿಯಾಗಲು ಬಯಸಿರುತ್ತೀರಿ ಆದರೆ ಸಧ್ಯದ ಕೋವಿಡ್ 19 ರ ನಿಯಮಾವಳಿಯಂತೆ ಅವರು ಹೋಮ್ ಐಸೋಲೇಷನನಲ್ಲಿ ಇರಲು ವೈದ್ಯರು ಸೂಚಿಸಿರುವದರಿಂದ ಭೇಟಿ ಸಾಧ್ಯವಾಗುವುದಿಲ್ಲ ಅದಕ್ಕಾಗಿ ಯಾರು ಕೂಡ ಬೆಂಗಳೂರಿಗೆ ಬರಬಾರದು. ಆದರಿಂದ ಎಲ್ಲರೂ ಸಹಕರಿಸಬೇಕೆಂದು ಜಿ.ಪಂ ಸದಸ್ಯ ಹರ್ಷಾನಂದ ಎಸ್ ಗುತ್ತೇದಾರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…