ಹಿರಿಯ ಹೋರಾಟಗಾರ ಲಕ್ಷ್ಮಣ ದಸ್ತಿ ಕೊರೊನಾದಿಂದ ಗುಣಮುಖ

0
67

ಕಲಬುರಗಿ: ಹಿರಿಯ ಹೋರಾಟಗಾರ ಲಕ್ಷ್ಮಣ ದಸ್ತಿ ಅವರು ಕೊರೊನಾ ಸೋಂಕಿನಿಂದ ಸಂಪೂರ್ಣ ಗುಣಮುಖರಾಗಿದ್ದಾರೆ ಎಂದು ಕನ್ನಡ ಭೂಮಿ ಜಾಗೃತಿ ಸಮಿತಿ ರಾಜ್ಯಾಧ್ಯಕ್ಷ ಲಿಂಗರಾಜ ಸಿರಗಾಪೂರ ಅವರು ತಿಳಿಸಿದ್ದಾರೆ.

ಸುಮಾರು ದಿನಗಳಿಂದ ಸಾಮಾಜಿಕ ಚಟುವಟಿಕೆಗಳಿಂದ ದೂರವಿದ್ದ ಅವರು ಸೋಂಕಿಗೆ ಒಳಗಾಗಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ. ಕಳೆದ ಜುಲೈ ತಿಂಗಳಲ್ಲಿ ತಮಗೆ ಅನಾರೋಗ್ಯ ಕಂಡು ಬಂದ ಹಿನ್ನೆಲೆಯಲ್ಲಿ ಅವರನ್ನು ವೈದ್ಯರ ಅನುಮತಿ ಮೆರೆಗೆ ಕೊವೀಡ ಪರೀಕ್ಷೆಗೆ ಒಳಪಡಿಸಿದಾಗ ಸೋಂಕು ಇರುವುದು ಕಂಡು ಬಂದಿತ್ತು.

Contact Your\'s Advertisement; 9902492681

ಈ ಮಹಾಮಾರಿ ಕೊರೊನಾ ಸೋಂಕಿನಿಂದ ಸಾಕಷ್ಟು ನೋವು ಯಾತನೆ ಅನುಭವಿಸಿದರು.ಆದರೂ ಧೈರ್ಯ ಕಳೆದುಕೊಳ್ಳದೆ ವೈರಸ್ ವಿರುದ್ಧ ಹೋರಾಡಿದರು.ನಂತರ ಮತ್ತೋಮ್ಮೆ ಪರೀಕ್ಷೆ ಮಾಡಿಸಿದಾಗ ನೇಗೆಟೀವ್ ಬಂದಿರುವುದರಿಂದ ಮತ್ತೋಮ್ಮೆ ಹೋರಾಟದಲ್ಲಿ ತೊಡಗಿಸಿಕೊಳ್ಳುವುದಾಗಿ ಅವರು ತಿಳಿಸಿದ್ದಾರೆ ಎಂದು ಸಿರಗಾಪೂರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here