ಬೆಂಗಳೂರು: ಮಹಾತ್ಮ ಗಾಂಧಿ ಆಶಯಗಳನ್ನು ಎಲ್ಲೆಡೆ ಪಸರಿಸುತ್ತಿರುವ ಹಾಗೂ ಪಾಲಿಸುತ್ತಿರುವ ವ್ಯಕ್ತಿ ಹಾಗೂ ಸಂಸ್ಥೆಗಳಿಗೆ ಕೊಡಮಾಡುವ ಐದು ಲಕ್ಷ ನಗದು ಒಳಗೊಂಡ ರಾಜ್ಯ ಸರ್ಕಾರದ ಪ್ರತಿಷ್ಠಿತ ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿಗೆ ಅರ್ಹರು ಮತ್ತು ಆಸಕ್ತರಿಂದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಅರ್ಜಿಗಳು ಹಾಗೂ ನಾಮನಿರ್ದೇಶನಗಳನ್ನು ಆಹ್ವಾನಿಸಿದೆ.
ಅಸ್ಪøಷ್ಯತಾ ನಿವಾರಣೆ, ಅಹಿಂಸೆ, ಮಕ್ಕಳ ಸಬಲೀಕರಣ, ಗ್ರಾಮೀಣ ನೈರ್ಮಲ್ಯ, ಪಾನ ನಿರೋಧ, ಖಾದಿ ಹಾಗೂ ಸ್ವದೇಶಿ ವಸ್ತುಗಳ ಬಳಕೆ ಮತ್ತು ಪ್ರೋತ್ಸಾಹ, ಸರಳ ಜೀವನ ಮತ್ತು ಅತ್ಯುತ್ತಮ ಚಿಂತನೆ ಹಾಗೂ ಅನುಸೂಚಿತ ಜಾತಿ ಮತ್ತು ಅನುಸೂಚಿತ ವರ್ಗಗಳಿಗೆ ಸೇರಿದ ಜನರ ಶ್ರೇಯೋಭಿವೃದ್ಧಿ ಕಾರ್ಯ ಚಟುವಟಿಕೆಗಳಲ್ಲಿ ಸ್ವ-ಪ್ರೇರಣೆಯಿಂದ ತೊಡಗಿರುವ 60 ವರ್ಷ ವಯೋಮಾನ ಪೂರ್ಣಗೊಳಿಸಿರುವ ವ್ಯಕ್ತಿಗಳನ್ನು ಹಾಗೂ ಸೇವೆಯಲ್ಲಿ 25 ವರ್ಷ ಪೂರ್ಣಗೊಳಿಸಿರುವ ಸಂಸ್ಥೆಗಳನ್ನು ಈ ಪ್ರಶಸ್ತಿಗೆ ಪರಿಗಣಿಸಲು ಅವಕಾಶವಿದೆ.
ಈ ಹಿನ್ನೆಲೆಯಲ್ಲಿ ಇಂತಹ ಕಾರ್ಯ ಚಟುವಟಿಕೆಗಳಲ್ಲಿ ತೊಡಗಿರುವ ವ್ಯಕ್ತಿ ಅಥವಾ ಸಂಸ್ಥೆಗಳು ಅರ್ಜಿಗಳನ್ನು ಹಾಗು ಇಂತಹ ವ್ಯಕ್ತಿ ಅಥವಾ ಸಂಸ್ಥೆಗಳ ಬಗ್ಗೆ ಸಂಪೂರ್ಣ ಮಾಹಿತಿ ಇರುವವರು ನಾಮ ನಿರ್ದೇಶನಗಳನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತ ಕಚೇರಿಯ ಇ-ಮೇಲ್ mmrreport@gmail.com ವಿಳಾಸಕ್ಕೆ ಸೆಪ್ಟೆಂಬರ್ 15 ರ ಸಂಜೆ 6-00 ಗಂಟೆಯೊಳಗೆ ಕಳುಹಿಸಬಹುದಾಗಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.