ಕಲಬುರಗಿ: ಪ್ರಸಕ್ತ ಸಾಲಿಗೆ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಇಲಾಖೆಗಳಿಗೆ ಹಂಚಿಕೆ ಮಾಡಲಾದ ಅನುದಾನಕ್ಕೆ ಕ್ರಿಯಾ ಯೋಜನೆ ರೂಪಿಸಿ ವರ್ಷಾಂತ್ಯದೊಳಗೆ ಅನುಷ್ಠಾನ ಮಾಡುವ ಮೂಲಕ ಆರ್ಥಿಕ ಸಾಧನೆ ಮಾಡಬೇಕು. ಅನುದಾನ ಖರ್ಚಾಗದೆ ಲ್ಯಾಪ್ಸ್‍ವಾದಲ್ಲಿ ಸಂಬಂಧಿಸಿದ ಅಧಿಕಾರಗಳನ್ನೇ ನೇರವಾಗಿ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಸುವರ್ಣಾ ಹಣಮಂತರಾಯ ಮಲಾಜಿ ಹೇಳಿದರು.
ಸೋಮವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಹಣಕಾಸು, ಲೆಕ್ಕಪರಿಶೋಧನೆ ಹಾಗೂ ಯೋಜನಾ ಸ್ಥಾಯಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಕ್ರಿಯಾ ಯೋಜನೆಯನ್ವಯ ಕಾಮಗಾರಿಗಳಿಗೆ ನಿಗಧಿತ ಅನುದಾನ ಖರ್ಚು ಮಾಡದೆ ಹಾಗೇ ಇಟ್ಟುಕೊಂಡಿದಲ್ಲಿ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಸರ್ಕಾರಕ್ಕೆ ವರದಿ ಮಾಡಲಾಗುವುದು. ಅನುದಾನ ಬಳಕೆಯಲ್ಲಿ ಕರ್ತವ್ಯ ನಿರ್ಲಕ್ಷತನ ಯಾವುದೇ ಕಾರಣಕ್ಕು ಸಹಿಸುವುದಿಲ್ಲ ಎಂದು ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದರು.
ಅನುದಾನ ಕುರಿತು ಯಾವುದೇ ಸಮಸ್ಯೆಗಳಿದಲ್ಲಿ ಅಧಿಕಾರಿಗಳು ನೇರವಾಗಿ ನನ್ನನ್ನು ಭೇಟಿಯಾಗಿ ಚರ್ಚಿಸಬೇಕು. ಕೊರೋನಾ ಸಂಕಷ್ಠದ ಸಂದರ್ಭದಲ್ಲಿ ಆರೋಗ್ಯ ಇಲಾಖೆಯ ವೈದ್ಯರು ಮತ್ತು ಆರೋಗ್ಯ ಸಿಬ್ಬಂದಿಯ ಕರ್ತವ್ಯವನ್ನು ಜಿ.ಪಂ. ಅಧ್ಯಕ್ಷರು ಶ್ಲಾಘಿಸಿದರು.
ಸಭೆಯ ಆರಂಭದಲ್ಲಿ ಗೌರವಾನ್ವಿತ ಮಾಜಿ ರಾಷ್ಟ್ರಪತಿ ದಿ|| ಪ್ರಣಬ್ ಮುಖರ್ಜಿ ಅವರ ಇತ್ತೀಚೆಗೆ ನಿಧನರಾದ ಹಿನ್ನೆಲೆಯಲ್ಲಿ ಒಂದು ನಿಮಿಷ ಮೌನಾಚರಣೆ ಮಾಡಿ ಮೃತರಿಗೆ ಗೌರವ ಸಲ್ಲಿಸಲಾಯಿತು.
ಸಭೆಯಲ್ಲಿ ಸಮಿತಿ ಸದಸ್ಯರುಗಳಾದ ಶಿವರಾಜ ಪಾಟೀಲ, ಶಿವಾನಂದ ಪಾಟೀಲ, ಶಿವಶರಣಪ್ಪ ಆರ್. ಶಂಕರ, ದೇವಕ್ಕಿ ಚನ್ನಮಲ್ಲಯ್ಯ ಹಿರೇಮಠ, ಕಲಾವತಿ ಮಲ್ಲ್ಲಣ್ಣ ನಾಗೂರೆ, ಸದಸ್ಯ ಕಾರ್ಯದರ್ಶಿ ಕಿಶೋರಕುಮಾರ ದುಬೆ ಸೇರಿದಂತೆ ಜಿಲ್ಲಾ ಪಂಚಾಯತ ಅಧಿಕಾರಿಗಳು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…