ವಾಡಿ: ಪೋಷಕರು ತಮ್ಮ ಮಕ್ಕಳ ಆರೋಗ್ಯ ಕಾಳಜಿ ಕುರಿತು ನಿರ್ಲಕ್ಷ್ಯ ವಹಿಸಬಾರದು ಎಂದು ಇಂಗಳಗಿ ಗ್ರಾಮದ ಆರೋಗ್ಯ ಉಪಕೇಂದ್ರದ ಕಿರಿಯ ಆರೋಗ್ಯ ಸಹಾಯಕಿ ತ್ರೀವೇಣಿ ಜಾಧವ ಹೇಳಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆದೇಶದಂತೆ ಇಂಗಳಗಿ ಗ್ರಾಮದಲ್ಲಿ ಏರ್ಪಡಿಸಲಾಗಿದ್ದ ರಾಷ್ಟ್ರೀಯ ಜಂತುಹುಳು ನಿವಾರಣಾ ಕಾರ್ಯಕ್ರಮದಲ್ಲಿ ವಿವಿಧ ಬಡಾವಣೆಗಳ ೬೭೫ ಮಕ್ಕಳಿಗೆ ಅಲ್ಬೆಂಡಝೋಲ್ ಮಾತ್ರೆ ವಿತರಿಸಿ ಅವರು ಮಾತನಾಡಿದರು.
ಸಾಮಾನ್ಯವಾಗಿ ಮಕ್ಕಳು ಮತ್ತು ಹದಿಹರೆಯದವರಲ್ಲಿ ಕರುಳಿನ ಜಂತುಹುಳು ಭಾದೆ ಕಂಡುಬರುತ್ತದೆ. ಈ ಸಮಸ್ಯೆ ಬರಿಗಣ್ಣಿಗೆ ಕಾಣದಿದ್ದರೂ ಮಕ್ಕಳ ಆರೋಗ್ಯದ ಮೇಲೆ ಹಾಗೂ ಬೆಳವಣಿಗೆ ಮೇಲೆ ಗಂಭೀರ ಪರಿಣಾಮ ಬೀರುತ್ತದೆ. ಸೋಂಕು ಹೊಂದಿರುವ ಮಕ್ಕಳಲ್ಲಿ ವಾಕರಿಕೆ, ವಾಂತಿ, ಭೇದಿ ಮತ್ತು ತಲೆಸುತ್ತು ಕಂಡುಬರುತ್ತದೆ ಎಂದರು.
ಜಂತುಹುಳು ಬಾಧಿತ ಮಕ್ಕಳು ರಕ್ತಹೀನತೆ ಮತ್ತು ಅಪೌಷ್ಠಿಕತೆಯಿಂದ ಸುಸ್ತು ಮತ್ತು ನಿಶಕ್ತಿಯಿಂದ ಬಳಲುತ್ತಾರೆ. ಆದ್ದರಿಂದ ೧ ರಿಂದ ೧೯ ವರ್ಷದೊಳಗಿನ ಮಕ್ಕಳಿಗೆ ಜಂತು ಹುಳು ನಿವಾರಣಾ ಮಾತ್ರೆ ಕಡ್ಡಾಯವಾಗಿ ಹಾಕಿಸಬೇಕು. ಮುನ್ನೆಚ್ಚರಿಕೆ ವಹಿಸುವ ಮೂಲಕ ಪೋಷಕರು ಮಕ್ಕಳ ಬೆಳವಣಿಗೆ ಕುಂಠಿತವಾಗುವುದನ್ನು ತಪ್ಪಿಸಬೇಕು. ಮಕ್ಕಳ ದೈಹಿಕ ಶುಚಿತ್ವಕ್ಕೂ ಹೆಚ್ಚಿನ ಮಹತ್ವ ಕೊಡಬೇಕು. ಮಹಾಮಾರಿ ಕೊರೊನಾ ಸೋಂಕಿನಿಂದ ರಕ್ಷಣೆ ಪಡೆಯಲು ಸುರಕ್ಷತಾ ನಿಯಮಗಳನ್ನು ಅನುಸರಿಸಬೇಕು ಎಂದು ವಿವರಿಸಿದರು.
ಆಶಾ ಕಾರ್ಯಕರ್ತೆಯರಾದ ಮಂಜುಳಾ ಗೋಪಾಲ ಚಾಮನೂರ, ಸಾವಿತ್ರಿ ಶಿವುಕುಮಾರ ಹಂದರ್ಕಿ, ರಾಜೇಶ್ವರಿ ದೇವಿಂದ್ರಪ್ಪ ನಾಟೀಕಾರ, ಸಾವಿತ್ರಿ ಪರಮೇಶ್ವರ ಬಳವಡಗಿ, ಮಲ್ಲಮ್ಮ ಶಿವಶರಣಪ್ಪ ತಳಗೇರಿ, ಶಕುಂತಲಾ ಮಲ್ಲಣ್ಣ ಹೂಗಾರ ಸೇರಿದಂತೆ ಮಕ್ಕಳ ಪೋಷಕರು ಹಾಗೂ ಗ್ರಾಮಸ್ಥರು ಪಾಲ್ಗೊಂಡಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…