ಬೇಸಿಗೆಗೆ ಟ್ಯಾಂಕರ್ ಮುಕ್ತ ಕುಡಿಯುವ ನೀರಿನ ಸೌಲಭ್ಯಕ್ಕೆ ಚಿಂತನೆ: ಜಿ.ಪಂ ಅಧ್ಯಕ್ಷ ಬಸನಗೌಡ

0
79

ಸುರಪುರ: ಮುಂಬರುವ ಬೇಸಿಗೆಗೆ ಯಾವುದೇ ಗ್ರಾಮದಲ್ಲಿ ಕುಡಿಯುವ ನೀರಿನ ಅಭಾವ ಕಾಡದಿರಲಿ.ಆ ನಿಟ್ಟಿನಲ್ಲಿ ಎಲ್ಲಾ ಪಂಚಾಯತಿ ಅಭೀವೃಧ್ಧಿ ಅಧಿಕಾರಿಗಳು ಮುಂಜಾಗೃತೆ ವಹಿಸಿ.ಬೇಸಿಗೆ ಈ ಬಾರಿ ಟ್ಯಾಂಕರ್ ಮುಕ್ತ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸಲು ಚಿಂತನೆ ನಡೆಸಲಾಗುತ್ತಿದೆ ಎಂದು ಜಿಲ್ಲಾ ಪಂಚಾಯತಿ ಅಧ್ಯಕ್ಷ ಬಸನಗೌಡ ಯಡಿಯಾಪುರ ತಿಳಿಸಿದರು.

ನಗರದ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ನಡೆದ ಪಂಚಾಯತಿ ಅಭೀವೃಧ್ಧಿ ಅಧಿಕಾರಿಗಳ ಸಭೆಯಲ್ಲಿ ಭಾಗವಹಿಸಿ ಮಾತನಾಡಿ,ಯಾವುದೇ ಗ್ರಾಮದಲ್ಲಿ ಕುಡಿಯುವ ನೀರಿನ ಅಭಾವ ಕಾಡದಂತೆ ನೋಡಿಕೊಳ್ಳಿ ಅಲ್ಲದೆ ಗ್ರಾಮೀಣ ಭಾಗದಲ್ಲಿ ತಾತ್ಕಾಲಿಕ ಕುಡಿಯುವ ನೀರಿನ ಸೌಲಭ್ಯದ ಬದಲು ಶಾಸ್ವತ ಪರಿಹಾರಕ್ಕೆ ಯೋಜನೆ ರೂಪಿಸುವಂತೆ ತಿಳಿಸಿದರು.ಅಲ್ಲದೆ ಯಾವುದೇ ಗ್ರಾಮದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸಂಬಂಧಿಸಿದ ಅಭೀವೃದ್ಧಿ ಕಾಮಗಾರಿಗಳ ಅನುದಾನವನ್ನು ಬೇರೆ ಯಾವುದಕ್ಕೂ ಬಳಕೆ ಮಾಡದೆ ಆಯಾ ಅನುದಾನವನ್ನು ಆಯಾ ಸಮುದಾಯಕ್ಕೆ ಬಳಸುವಂತೆ ತಿಳಿಸಿದರು.

Contact Your\'s Advertisement; 9902492681

ಗ್ರಾಮೀಣ ಭಾಗದಲ್ಲಿನ ಯಾವುದೇ ಮೂಲಭೂತ ಸಮಸ್ಯೆಗಳನ್ನು ಗಮನಕ್ಕೆ ತಂದಲ್ಲಿ ಪರಿಹರಿಸುವುದಾಗಿ ತಿಳಿಸಿದರಲ್ಲದೆ ಗ್ರಾಮಗಳಲ್ಲಿ ಸಾರ್ವಜನಿಕ ಶೌಚಾಲಯ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗುವುದು.ಸರಕಾರದ ಖಾಲಿ ಜಾಗವಿದ್ದಲ್ಲಿ ಶೌಚಾಲಯ ನಿರ್ಮಿಸಿಕೊಡುವುದಾಗಿ ತಿಳಿಸಿದರು.ಸಭೆಯಲ್ಲಿ ಭಾಗವಹಿಸಿದ್ದ ಬಹುತೇಕ ಪಿಡಿಒಗಳು ಕುಡಿಯುವ ನೀರಿನ ಸಮಸ್ಯೆಗಳ ಕುರಿತು ಅಧ್ಯಕ್ಷರ ಗಮನಕ್ಕೆ ತಂದರು.

ನಂತರ ಸಭೆಯಲ್ಲಿದ್ದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಎಸಿಡಿಪಿಒ ಮೀನಾಕ್ಷಿ ಪಾಟೀಲ ಮಾತನಾಡಿ,ಪ್ರತಿ ಗ್ರಾಮ ಪಂಚಾಯತಿಯ ಅನುದಾನದಲ್ಲಿ ಶೇ೩ ರಷ್ಟು ಅನುದಾನವನ್ನು ಆಯಾ ಪಂಚಾಯತಿ ವ್ಯಾಪ್ತಿಯ ವಿಕಲಚೇತನರ ಅಭೀವೃಧ್ಧಿಗಾಗಿ ಬಳಕೆ ಮಾಡುವಂತೆ ನಿಯಮವಿದೆ.ಆದರೆ ಈ ವರ್ಷ ಹೆಚ್ಚುವರಿಯಾಗಿ ಶೇ ೨ ಸೇರಿಸಿ ಒಟ್ಟು ಶೇ ೫ ರಷ್ಟು ಅನುದಾನವನ್ನು ವಿಕಲಚೇತನರಿಗಾಗಿ ಖರ್ಚು ಮಾಡುವಂತೆ ತಿಳಿಸಿದರು.

ಇದೇ ಸಂದರ್ಭದಲ್ಲಿ ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಅಂಬ್ರೇಶ ಅವರು ಅನೇಕ ಜನ ಪಂಚಾಯತಿ ಅಭೀವೃಧ್ಧಿ ಅಧಿಕಾರಿಗಳಿಗೆ ಗ್ರಾಮಗಳಲ್ಲಿನ ಸಮಸ್ಯೆಗಳ ನಿವಾರಣೆಗೆ ಕ್ರಮ ಕೈಗೊಳ್ಳುವ ಕುರಿತು ಭರವಸೆ ನೀಡಿದರು.

ಸಭೆಯಲ್ಲಿ ತಾಲೂಕು ಪಂಚಾಯತಿ ಯೋಜನಾಧಿಕಾರಿ ಕುಮುಲಯ್ಯ,ವ್ಯವಸ್ಥಾಪಕ ಯಂಕಣ್ಣ ಬಾಗಲಿ ಸೇರಿದಂತೆ ಸುರಪುರ ಹಾಗು ಹುಣಸಗಿ ತಾಲೂಕಿನ ಎಲ್ಲಾ ಗ್ರಾಮ ಪಂಚಾಯತಿಯ ಅಭೀವೃಧ್ಧಿ ಅಧಿಕಾರಿಗಳಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here