ಕಲಬುರಗಿ: ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಲ್ಲಿ 2020-21ನೇ ಶೈಕ್ಷಣಿಕ ವರ್ಷಕ್ಕೆ (ಜುಲೈ ಆವೃತ್ತಿಗೆ) ಈ ಕೆಳಕಂಡ ಕೋರ್ಸ್‍ಗಳಿಗೆ ಪ್ರವೇಶಾತಿ ಪ್ರಾರಂಭವಾಗಿದೆ ಎಂದು ಕಲಬುರಗಿ ಪ್ರಾದೇಶಿಕ ಕೇಂದ್ರದ ನಿರ್ದೇಶಕ ಡಾ. ಸಂಗಮೇಶ ಹಿರೇಮಠ ಅವರು ತಿಳಿಸಿದ್ದಾರೆ.
ಆಸಕ್ತ ವಿದ್ಯಾರ್ಥಿಗಳು ಪ್ರಥಮ ಬಿ.ಎ., ಬಿ.ಕಾಂ., ಬಿ.ಎಲ್.ಐ.ಎಸ್ಸಿ. ಹಾಗೂ ಪ್ರಥಮ ಎಂ.ಎ., (ಕನ್ನಡ, ಇಂಗ್ಲೀಷ್, ಹಿಂದಿ, ಉರ್ದು, ಇತಿಹಾಸ, ಪ್ರಾಚೀನ ಇತಿಹಾಸ ಹಾಗೂ ಪುರಾತತ್ವ ಅಧ್ಯಯನ, ಅರ್ಥಶಾಸ್ತ್ರ, ರಾಜ್ಯಶಾಸ್ತ್ರ, ಸಮಾಜಶಾಸ್ತ್ರ, ಸಾರ್ವಜನಿಕ ಆಡಳಿತ, ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ) ಹಾಗೂ ಎಂ.ಕಾಂ., ಎಂ.ಎಲ್.ಐ.ಎಸ್ಸಿ. ಎಂ.ಎಸ್ಸಿ ವಿಷಯಗಳಿಗೆ ಪ್ರವೇಶ ಪಡೆಯಬಹುದಾಗಿದೆ.
ಬಿ.ಪಿ.ಎಲ್. ಕಾರ್ಡ್‍ನ್ನು ಹೊಂದಿರುವ ಮಹಿಳಾ ವಿದ್ಯಾರ್ಥಿಗಳಿಗೆ ಬೋಧನಾ ಶುಲ್ಕದಲ್ಲಿ ಶೇ. 25ರಷ್ಟು ವಿನಾಯಿತಿ ನೀಡಲಾಗಿದೆ. ವಿದ್ಯಾರ್ಥಿಗಳು ದಂಡರಹಿತವಾಗಿ ಪ್ರವೇಶ ಪಡೆಯಲು 2020ರ ಅಕ್ಟೋಬರ್ 10 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ಕಛೇರಿ ದೂರವಾಣಿ ಸಂಖ್ಯೆ 08472-265868, ಪ್ರಾದೇಶಿಕ ನಿರ್ದೇಶಕರ ಮೊಬೈಲ್ ಸಂಖ್ಯೆ 9916783555 ಹಾಗೂ www.ksoumysuru.ac.in ವೆಬ್‍ಸೈಟ್‍ನ್ನು ಸಂಪರ್ಕಿಸಲು ಕೋರಲಾಗಿದೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…