ಜೇವರ್ಗಿ: ಎಲ್ಲಾ ಕ್ಷೇತ್ರಗಳಲ್ಲೂ ಮಹಿಳೆಯರು ಸಾಧನೆಗಳನ್ನು ಮಾಡುತ್ತಿದ್ದು ಪ್ರತಿಯೊಂದು ಮನೆಯಲ್ಲಿ ಸಹ ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬನೆ ಗೊಳ್ಳುವ ಮೂಲಕ ಕಾನೂನುಬದ್ಧವಾಗಿ ಹಕ್ಕುಗಳನ್ನು ಪಡೆದುಕೊಂಡು ಮುಂದೆ ಬರಲು ಸರಕಾರ ಹಲವಾರು ಯೋಜನೆಗಳನ್ನು ರೂಪಿಸಿದ್ದು ಸ್ವಸಹಾಯ ಸಂಘಗಳನ್ನು ಕಟ್ಟಿಕೊಂಡು ಕುಟುಂಬದ ಅಭಿವೃದ್ಧಿಗೆ ಶ್ರಮಿಸುವುದು ಈಗ ಸುಲಭವಾಗಿದೆ ಎಂದು ವಕೀಲರಾದ ಮಲ್ಲಿಕಾರ್ಜುನ ಸೂಗೂರ್ ಹೇಳಿದರು.
ತಾಲೂಕಿನ ಗಂವಾರ ಗ್ರಾಮದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಜೇವರ್ಗಿ ವತಿಯಿಂದ ಮಹಿಳಾ ವಿಚಾರಗೋಷ್ಠಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಕಾರ್ಯಕ್ರಮದಲ್ಲಿ ಅಧ್ಯಕ್ಷತೆಯನ್ನು ದಾನಮ್ಮ ಗಂಡ ಗದಿಗೆಪ್ಪ ಸೇರಿದಂತೆ ಉಪಾಧ್ಯಕ್ಷರಾದ ಹಕಿಂ ಪಟೇಲ್ ಹಾಗೂ ಅಂಗನವಾಡಿ ಕಾರ್ಯಕರ್ತರ ತಹರ ಬೇಗಂ, ಈಜೇರಿ ವಲಯ ಮೇಲ್ವಿಚಾರಕರಾದ ಜಯಶ್ರೀ ಪಾಟೀಲ್ ಸೇವಾ ಪ್ರತಿನಿಧಿಯಾದ ಬಸ್ಸಮ್ಮ ಹಾಗೂ 5 ತಂಡದ ಸದಸ್ಯರು ಹಾಜರಿದ್ದರು. ಕಾರ್ಯಕ್ರಮವನ್ನು ತಾಲೂಕು ಸಮನ್ವಯ ಅಧಿಕಾರಿಗಳಾದ ಶಂಕ್ರು ಬಾಯಿ ನಿರೂಪಿಸಿದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…