ಕಲಬುರಗಿ: ಹೈಕೋರ್ಟ್ ಪೀಠಕ್ಕೆ ಬೆಂಗಳೂರಿನ ವಕೀಲರನ್ನು AAG ಯಾಗಿ ನೇಮಕಗೊಳಿಸಿ ರಾಜ್ಯ ಸರಕಾರ ಈ ಭಾಗದ ನ್ಯಾಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ವಕೀಲರ ಸಮೂಹಕ್ಕೆ ಸಿಕ್ಕಿರುವ ಅವಕಾಶವನ್ನು ವಂಚಿಸಿ ಅನ್ಯಾಯ ಮಾಡಿದೆ ಎಂದು ಎಂದು ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯ ಜಾಗ್ರತಿ ಹೋರಾಟ ಸಮಿತಿಯ ಪ್ರಧಾನ ಕಾರ್ಯದರ್ಶಿ, ನ್ಯಾಯವಾದಿ ಜೇ. ವಿನೋದ ಕುಮಾರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಸರ್ಕಾರದ ಈ ಕ್ರಮದ ವಿರುದ್ಧ ಈ ಭಾಗದ ನ್ಯಾಯವಾದಿ ಮಿತ್ರರು ಸಂಘಟಿತರಾಗಿ ಹೋರಾಟ ನಡೆಸಿ ಆದೇಶ ರದ್ದತಿಗೆ ಕಲ್ಯಾಣ ಕರ್ನಾಟಕ ನ್ಯಾಯವಾದಿಗಳ ಒಕ್ಕೂಟ ಕರೆ ನೀಡಿದೆ ಎಂದು ಅವರು ತಿಳಿಸಿದ್ದಾರೆ.
ನಿನ್ನೆ ಸೆಪ್ಟೆಂಬರ್ 8 ವಿಶ್ವ ಸಾಕ್ಷರತೆ ದಿನ ದಂದು ಈ ಭಾಗದ ನ್ಯಾಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ವಕೀಲರ ಸಮೂಹಕ್ಕೆ ಅಪರೂಪಕ್ಕೆ ಸಿಗುವ ಅವಕಾಶದಿಂದ ವಂಚಿತಗೊಳಿಸಿ, ಅನ್ಯಾಯ ಗೊಳಪಡಿಸಿದೆ, ಕಳೆದ ಸರ್ಕಾರ ಮಾಡಿದ ತಪ್ಪನ್ನು ಸರಿಪಡಿಕೊಂಡು ಸರಿ ದಾರಿಯಲ್ಲಿ ಸಾಗದೆ ಮತ್ತೆ ಅದೇ ತಪ್ಪು ನಿರ್ಣಯವನ್ನು ತೆಗೆದುಕೊಂಡು ಅಭಿವೃದ್ಧಿ ಹೊಂದಲು ಪ್ರಯತ್ನಿಸುವ ಕಾಲಕ್ಕೆ ಈ ರೀತಿ ಅನ್ಯಾಯ ಗೊಳಪಡಿಸಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪ್ರಾದೇಶಿಕ ಅಸಮಾನತೆ ಹೋಗಲಾಡಿಸಲು ತ್ವರಿತವಾಗಿ ಈ ನೇಮಕವನ್ನು ರದ್ದು ಗೊಳಿಸಿ ಸ್ಥಳೀಯರಿಗೆ ನೇಮಕ ಗೋಳಿಸಲು ಒಕ್ಕೂಟದ ಪರವಾಗಿ ಜೇ. ವಿನೋದ ಕುಮಾರ ತಮ್ಮ ಅಭಿಪ್ರಾಯ ಮೂಲಕ ಒತ್ತಾಯಿಸಿದ್ದಾರೆ.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…