ಕಲಬುರಗಿ: ಕನ್ನಡ ಸಾಹಿತ್ಯ ಪರಿಷತ್ ರಾಜ್ಯಾಧ್ಯಕ್ಷರ ಚುನಾವಣೆ ಹಿನ್ನೆಲೆಯಲ್ಲಿ ಈಗಾಗಲೇ ರಾಜ್ಯಾದ್ಯಂತ ಪ್ರವಾಸ ಹಾಕಿಕೊಂಡಿದ್ದೇನೆ. ಹೋದ ಕಡೆಯೆಲ್ಲ ಜನರಿಂದ ಉತ್ತಮ ಪ್ರತಿಕ್ರಿಯೆ ದೊರೆಯುತ್ತಿದೆ ಎಂದು ಕಪಪ್ಪಳದ ಜಿಲ್ಲಾ ಕಸಾಪ ಮಾಜಿ ಆಧ್ಯಕ್ಷ ಹಾಗೂ ಪ್ರಸ್ತುತ ರಾಜ್ಯಾಧ್ಯಕ್ಷ ಸ್ಥಾನದ ಸ್ಪರ್ಧೆ ಬಯಸಿರುವ ಶೇಖರಗೌಡ ಮಾಲಿ ಪಾಟೀಲ ತಿಳಿಸಿದರು.
ನಗರದ ಕನ್ನಡ ಭವನದಲ್ಲಿ ಇಂದು ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಬಾರಿ ನನಗೆ ಆಶೀರ್ವಾದ ಮಾಡಬೇಕು ಎಂದು ಮನವಿ ಮಾಡಿದರು. ಈಗಾಗಲೇ ಬೆಂಗಳೂರು, ಮಡಿಕೇರಿ, ಚಿತ್ರದುರ್ಗ ಜಿಲ್ಲೆಗಳಿಗೆ ಭೇಟಿ ನೀಡಿ ಸಮಾಲೋಚನೆ ನೀಡಿ ಬಂದಿದ್ದೇನೆ ಎಂದು ತಿಳಿಸಿದರು.
ನಾಳೆ ಯಾದಗಿರಿ, ರಾಯಚೂರಿಗೆ ತೆರಳಿ ಅಲ್ಲಿನ ಸಾಹಿತಿ ಕಸಾಪ ಪದಾಧಿಕಾರಿ ಹಾಗೂ ಸದಸ್ಯರನ್ನು ಭೇಟಿ ಮಡುವೆ. ನಂತರ ಬೆಂಗಳೂರು, ಚಿಕ್ಕಮಗಳೂರಿಗೆ ತೆರಳಿ ಚುನಾವಣೆ ಕುರಿತು ಹಾಗೂ ತಮ್ಮನ್ನು ಆಶೀರ್ವದಿಸುವಂತೆ ಕೋರಲಾಗುವುದು ಎಂದು ತಿಳಿಸಿದರು. ತಾವು ಈ ಬಾರಿಯ ಸ್ಪರ್ಧೆಯಲ್ಲಿ ತುರುಸಿನ ಸ್ಪರ್ಧೆ ಒಡ್ಡಲಿದ್ದು, ಎಲ್ಲ ಕಡೆ ಸುತ್ತಾಡಿ ಮತದಾರರಿಗೆ ಮನವಿ ಮಾಡಲಾಗುವುದು ಎಂದು ಹೇಳಿದರು.
105 ವರ್ಷಗಳ ಇತಿಹಾಸವಿರುವ ಕನ್ನಡ ಸಾಹಿತ್ಯ ಪರಿಷತ್ ಅನ್ನು ಅಂತಾರಾಷ್ಟ್ರೀಯ ಮಟ್ಟದ ಸಂಸ್ಥೆಯನ್ನಾಗಿ ಬೆಳೆಸಲು, ಕನ್ನಡ ಭಾಷೆ, ಕನ್ನಡ ವಿಶ್ವ ಕನ್ನಟ ಮೊದಲಾದ ಸಮಸ್ತ ಕನ್ನಡಿಗರ ಆಶಯಗಳನ್ನು ನನಾಗಿಸಲು, ಕೇಂದ್ರ ಸಾಹಿತ್ಯ ಪರಿಷತ್ ನ ಅಧ್ಯಕ್ಷ ಚುನಾವಣೆಯಲ್ಲಿ ನನಗೆ ನಿಮ್ಮ ಬೆಂಬಲ ಮತ್ತು ಆಶೀರ್ವಾದ ನೀಡಬೇಕು ಎಂದು ಮತದಾರ ಬಾಂಧವರಲ್ಲಿ ಪ್ರಾರ್ಥಿಸಿದರು.
ಜಿಲ್ಲಾ ಕಸಾಪ ಅದ್ಯಕ್ಷ ವೀರಭದ್ರ ಸಿಂಪಿ, ಪ್ರಧಾನ ಕಾರ್ಯದರ್ಶಿ ಮಡಿವಾಳಪ್ಪ ನಾಗರಹಳ್ಳಿ, ಕೋಶಾಧ್ಯಕ್ಷ ದೌಲತರಾಯ ಮಾಲಿ ಪಾಟೀಲ, ಪ. ಮಾನು ಸಗರ, ಕೆ.ಎಸ್. ಬಂಧು, ಸಿ.ಎಸ್. ಮಾಲಿಪಾಟೀಲ, ಡಾ. ಸೂರ್ಯಕಾಂತ ಪಾಟೀಲ ಮತ್ತಿತರರಿದ್ದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…