ಪುಸ್ತಕ ಬಹುಮಾನಕ್ಕಾಗಿ ಕೃತಿಗಳ ಆಹ್ವಾನ

0
23

ಕಲಬುರಗಿ: ಕರ್ನಾಟಕ ಸಾಹಿತ್ಯ ಅಕಾಡೆಮಿಯಿಂದ 2019ನೇ ವರ್ಷದ ಪುಸ್ತಕ ಬಹುಮಾನಕ್ಕಾಗಿ ವಿವಿಧ ಪ್ರಕಾರಗಳ ಕನ್ನಡ ಪುಸ್ತಕಗಳನ್ನು ಆಹ್ವಾನಿಸಲಾಗಿದೆ ಎಂದು ಕರ್ನಾಟಕ ಸಾಹಿತ್ಯ ಅಕಾಡೆಮಿಯ ರಿಜಿಸ್ಟ್ರಾರ್ ಕರಿಯಪ್ಪ ಎನ್. ಅವರು ತಿಳಿಸಿದ್ದಾರೆ.

ಬಹುಮಾನಕ್ಕೆ ಸಲ್ಲಿಸುವ ಕೃತಿಗಳು 2019ರ ಜನವರಿ 1 ರಿಂದ ಡಿಸೆಂಬರ್ 31 ರೊಳಗೆ ಪ್ರಥಮ ಆವೃತ್ತಿಯಾಗಿ ಪ್ರಕಟವಾಗಿರಬೇಕು. ಕೃತಿಯಲ್ಲಿ ಪ್ರಥಮ ಮುದ್ರಣ 2019 ಎಂದು ಮುದ್ರಿತವಾಗಿರಬೇಕು. ಪ್ರತಿ ಪ್ರಕಾರದಲ್ಲಿ ವಿಮರ್ಶಕರು ಆಯ್ಕೆ ಮಾಡುವ ಒಂದು ಕೃತಿಗೆ ಬಹುಮಾನ ನೀಡಲಾಗುತ್ತದೆ.

Contact Your\'s Advertisement; 9902492681

ಮೇಲ್ಕಂಡ ಅವಧಿಯಲ್ಲಿ ಪ್ರಕಟವಾದ ಪುಸ್ತಕಗಳ ತಲಾ 4 ಪ್ರತಿಗಳನ್ನು ರಿಜಿಸ್ಟ್ರಾರ್, ಕರ್ನಾಟಕ ಸಾಹಿತ್ಯ ಅಕಾಡೆಮಿ, ಕನ್ನಡ ಭವನ, 2 ನೇ ಮಹಡಿ, ಜೆಸಿ ರಸ್ತೆ, ಬೆಂಗಳೂರು-560002 ಇವರಿಗೆ ರಿಜಿಸ್ಟರ್ ಅಂಚೆ ಅಥವಾ ಕೋರಿಯರ್ ಮೂಲಕ ಅಥವಾ ಖುದ್ದಾಗಿ 2020ರ ಸೆಪ್ಟೆಂಬರ್ 30 ರೊಳಗೆ ಕಳುಹಿಸಬೇಕು.

ಕಳುಹಿಸಲ್ಪಡುವ ಕೃತಿಯ ಮೇಲೆ ಯಾವ ಸಾಹಿತ್ಯದ ಪ್ರಕಾರಕ್ಕೆ ಸೇರಿರುತ್ತದೆ ಎಂದು ಸ್ಪಷ್ಟವಾಗಿ ಪುಸ್ತಕದ ಶೀರ್ಷಿಕೆ ಪುಟದಲ್ಲಿ ಬರೆಯಬೇಕು. ಹೆಚ್ಚಿನ ಮಾಹಿತಿಗಾಗಿ ಅಕಾಡೆಮಿಯ ದೂರವಾಣಿ ಸಂಖ್ಯೆ 080-22211730, 22106460ಗಳಿಗೆ ಸಂಪರ್ಕಿಸಬೇಕೆಂದು ಅವರು ತಿಳಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here