ಕಲಬುರಗಿ: ಕಲಬುರಗಿ ರಂಗಾಯಣದಿಂದ (ರಂಗದ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದಿರುವ ಹಿರಿಯರ ಮತದಾಳದ ಮಾತುಗಳು) ರಂಗಾಂತರಾಳ-2 ಕಾರ್ಯಕ್ರಮವನ್ನು ಶುಕ್ರವಾರ ಸೆಪ್ಟೆಂಬರ್ 11 ರಂದು ಸಂಜೆ 5 ಗಂಟೆಗೆ ಕಲಬುರಗಿಯ ಹೊಸ ಆರ್.ಟಿ.ಓ. ಕಚೇರಿಗೆ ಎದುರಿಗೆಯಿರುವ ರಂಗಾಯಣ ಕಚೇರಿ ಆವರಣದಲ್ಲಿ ಏರ್ಪಡಿಸಲಾಗಿದೆ ಎಂದು ರಂಗಾಯಣ ಆಡಳಿತಾಧಿಕಾರಿಗಳು ತಿಳಿಸಿದ್ದಾರೆ.
ಈ ತಿಂಗಳ ಅತಿಥಿಯಾಗಿ ಹಿರಿಯ ರಂಗಭೂಮಿ ನಿರ್ದೇಶಕ ಲಕ್ಕಪ್ಪ ಮಾಸ್ತರ್ ಕಡಗಂಚಿ ಆಗಮಿಸಿ, ಅವರು ತಮ್ಮ ರಂಗಾಂತರಾಳವನ್ನು ತರೆದಿಡಲಿದ್ದಾರೆ. ಕಲಬುರಗಿ ರಂಗಾಯಣ ನಿರ್ದೇಶಕ ಪ್ರಭಾಕರ ಜೋಶಿ ಈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.
ರಂಗಾಯಣದಿಂದ “ರಂಗಾಂತರಾಳ” ಎಂಬ ಶೀರ್ಷಿಕೆಯಡಿ ಪ್ರತಿ ತಿಂಗಳು ರಂಗಭೂಮಿಯಲ್ಲಿ ವಿಶಿಷ್ಟ ಹಾಗೂ ವಿಶೇಷ ಸಾಧನೆಗೈದಿರುವ ಹಿರಿಯ ರಂಗಕರ್ಮಿಯೊಬ್ಬರನ್ನು ರಂಗಾಯಣಕ್ಕೆ ಆಹ್ವಾನಿಸಿ, ಅವರ ರಂಗಾನುಭವದ ಮಾತುಗಳನ್ನು ಹಂಚಿಕೊಳ್ಳುವ ವಿನೂತನ ಕಾರ್ಯಕ್ರಮ ರಂಗಾಯಣ ಹಮ್ಮಿಕೊಳ್ಳುತ್ತಿದೆ. ಇದು ಎರಡನೇ ಸಂಚಿಕೆಯಾಗಿದ್ದು, ಈ ತಿಂಗಳ ಅತಿಥಿಯಾಗಿ ಹಿರಿಯ ರಂಗಭೂಮಿ ನಿರ್ದೇಶಕ ಲಕ್ಕಪ್ಪ ಮಾಸ್ತರ್ ಕಡಗಂಚಿ ಇವರನ್ನು ಆಹ್ವಾನಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…
ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…
ಕಲಬುರಗಿ; ಅಲ್ಪಸುಖಕ್ಕಾಗಿ ಯುವ ಜನತೆ ಮಾದಕ ಪದಾರ್ಥಗಳಿಗೆ ದಾಸರಾಗಿ ತಮ್ಮ ಜೀವನ ಹಾಳು ಮಾಡಿಕೊಳ್ಳಬಾರದು ಎಂದು ಜಿಲ್ಲಾ ತಂಬಾಕು ನಿಯಂತ್ರಣ…
ಸೇಡಂ (ಕಲಬುರಗಿ); ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನ ಕೊಡಮಾಡುವ `ಅಮ್ಮ ಪ್ರಶಸ್ತಿ’ 24ನೇ ವರ್ಷದ ಸಮಾರಂಭವು…