ಕಲಬುರಗಿ: ಕೊಪ್ಪಳ ಜಿಲ್ಲೆಯ ಹಿರಿಯ ಲೇಖಕಿ ಸಹಾಯಕ ಪ್ರಾಧ್ಯಾಪಕಿ ಡಾ.ಮುಮ್ತಾಜ ಬೇಗಂ ಅವರು ಬರೆದಿರುವ ಜಾನಪದ ಸಾಹಿತ್ಯ ತಾತ್ವಿಕ ಮತ್ತು ಸಾಂಸ್ಕೃತಿಕ ಅಧ್ಯಯನ ಪುಸ್ತಕವು ದತ್ತಿ ಪ್ರಶಸ್ತಿಗೆ ಆಯ್ಕೆಯಾಗಿದೆ.
ರಾಜ್ಯ ಕನ್ನಡ ಸಾಹಿತ್ಯ ಪರಿಷತ್ ನೀಡುವ 2019ನೇ ಸಾಲಿನ ಅಕ್ಕಮ್ಮ ಗಿರಿಗೌಡ ರುದ್ರಪ್ಪ ದತ್ತಿ ಪ್ರಶಸ್ತಿಗೆ ಪುಸ್ತಕವೂ ಆಯ್ಕೆಯಾಗಿದೆ. ಪ್ರಶಸ್ತಿಯೂ ನಗದು ಪುರಸ್ಕಾರ ಹಾಗೂ ಪ್ರಶಸ್ತಿ ಪತ್ರ ಒಳಗೊಂಡಿರಲಿದೆ. ಬೆಂಗಳೂರಿನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರಧಾನ ಮಾಡಲಾಗುವುದು.
ಡಾ. ಮುಮ್ತಾಜ ಬೇಗಂ ಗಂಗಾವತಿಯ ಎಸಕೆಎನಜಿ ಸರ್ಕಾರಿ ಪ್ರಥಮ ದರ್ಜೆ ಮಹಾ ವಿದ್ಯಾಲಯದಲ್ಲಿ ಕನ್ನಡ ಸಹಾಯಕ ಪ್ರಾಧ್ಯಾಪಕಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಕಳೆದ 2018ನೇ ಸಾಲಿನಲ್ಲೂ ಇವರು ಬರೆದ ಪುಸ್ತಕ ಸಾಹಿತ್ಯ ಪರಿಷತ ದತ್ತಿ ಪ್ರಶಸ್ತಿಗೆ ಆಯ್ಕೆಯಾಗಿದ್ದನ್ನ ಇಲ್ಲಿ ಸ್ಮರಿಸಬಹುದು. ಸತತ ಎರಡನೇ ಬಾರಿಗೆ ಇವರು ಬರೆದಿರುವ ಪುಸ್ತಕ ದತ್ತಿ ಪ್ರಶಸ್ರಿಗೆ ಆಯ್ಕೆಯಾಗಿರುವುದು ಜಿಲ್ಲೆಯ ಸಾಹಿತ್ಯ ಕ್ಷೇತ್ರದ ಕೀರ್ತಿ ಹೆಚ್ಚಿಸಿದಂತಾಗಿದೆ.