ಬಿಸಿ ಬಿಸಿ ಸುದ್ದಿ

ಸಕಾಲಕ್ಕೆ ಚಿಕಿತ್ಸೆ ನೀಡಿ ಮರಣ ಸಂಖ್ಯೆ ತಡೆಯಲು ಕನ್ನಡ ಭೂಮಿ ಆಗ್ರಹ

ಕಲಬುರಗಿ: ಜಿಲ್ಲೆಯಲ್ಲಿ ಮಹಾಮಾರಿ ಕೊರೊನಾ ಸೋಂಕಿನಿಂದ ದಿನ ನಿತ್ಯ ಸಾವುಗಳು ಸಂಭವಿಸುತ್ತಿದ್ದು, ಸಕಾಲಕ್ಕೆ ಚಿಕಿತ್ಸೆ ನೀಡಿ ಮರಣ ಸಂಖ್ಯೆ ತಡೆಯಲು ಕನ್ನಡ ಭೂಮಿ ಜಾಗೃತಿ ಸಮಿತಿ ರಾಜ್ಯಾಧ್ಯಕ್ಷ ಲಿಂಗರಾಜ ಸಿರಗಾಪೂರ ಜಿಲ್ಲಾಡಳಿತಕ್ಕೆ ಆಗ್ರಹಿಸಿದ್ದಾರೆ.

ರಾಜ್ಯವು ಸೇರಿದಂತೆ ಜಿಲ್ಲಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚು ಪತ್ತೆಯಾಗುತ್ತಿವೆ.ಉಸಿರಾಟದ ತೊಂದರೆಯಿಂದ ಬಳಲುತ್ತಿರುವ ಕೊರೊನಾ ರೋಗಿಗಳಿಗೆ ಸರಿಯಾದ ಚಿಕಿತ್ಸೆ ದೊರಕದೆ ಸಾವು ಸಂಭವಿಸುತ್ತಿವೆ.ಇನ್ನು ಹಲವಾರು ರೋಗಿಗಳಿಗೆ ಹಾಸಿಗೆ ಸಿಗದೆ ಪ್ರಾಣಬಿಟ್ಟ ಸಂಖ್ಯೆ ಹೆಚ್ಚುತ್ತಿದೆ.ಸೋಂಕಿತರಿಗೆ ಸರಿಯಾದ ಉಪಚಾರ ಮಾಡುತ್ತಿಲ್ಲವಾದ್ದರಿಂದ ಅನೇಕರು ಹೆದರಿ ಆಸ್ಪತ್ರೆಗೆ ಬರಲು ಹಿಂದೇಟು ಹಾಕುತ್ತಿದ್ದಾರೆ.ವಯಸ್ಕರು ಹಾಗೂ ಸಕ್ಕರೆ ಕಾಯಿಲೆ,ಅಧೀಕ ರಕ್ತದೊತ್ತಡ ಹೀಗೆ ಹಲವಾರು ಸೋಂಕಿತ ರೋಗಿಗಳಿಗೆ ಸರಕಾರಿ ಆಸ್ಪತ್ರೆಗಳಲ್ಲಿ ಸರಿಯಾದ ಚಿಕಿತ್ಸೆ ನೀಡುತ್ತಿಲ್ಲ.

ತುರ್ತು ಸಂದರ್ಭದಲ್ಲಿ ಕೂಡ ಸೋಂಕಿತರನ್ನು ನಿರ್ಲಕ್ಷ್ಯ ಮಾಡುತ್ತಿರುವುದರಿಂರ ಸಾವುಗಳು ಸಂಭವಿಸುತ್ತಿವೆ.ಸರಕಾರಿ ಆಸ್ಪತ್ರೆಗಳಲ್ಲಿ ಪರಿಸ್ಥಿತಿ ಹೀಗಾದರೆ ಇನ್ನು ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೆಪದಲ್ಲಿ ಸುಲಿಗೆ ಮಾಡಲಾಗುತ್ತಿದೆ.ಇಲ್ಲಿ ಕೇಂದ್ರ ಸರ್ಕಾರ ನೀಡಿರುವ ಕೊವೀಡ ಚಿಕಿತ್ಸೆ ದರಪಟ್ಟಿ ಗಾಳಿಗೆ ತೂರಿ ಮನಬಂದಂತೆ ಹಣ ಪಡೆಯುತ್ತಿದ್ದಾರೆ.ಜಿಲ್ಲಾಡಳಿತ ಹಾಗೂ ಸರಕಾರ ಕಣ್ಣು ಮುಚ್ಚಿಕೊಂಡು ಕುಳಿತಿದೆ.ವೈರಸ್ ದಿಂದ ಜನರು ತತ್ತರಿಸಿ ಹೋಗಿದ್ದಾರೆ.ಖಾಸಗಿ ಆಸ್ಪತ್ರೆಗಳಲ್ಲಿ ದುಬಾರಿ ಚಿಕಿತ್ಸೆ ಪಡೆಯಲು ಜನರು ಹೊಲ, ಮನೆಗಳನ್ನು ಮಾರಿಕೊಳ್ಳುತ್ತಿದ್ದಾರೆ.

ಕಲವೋಂದು ಪ್ರಕರಣಗಳಲ್ಲಿ ಹಣ ಸುರಿದರೂ ಜೀವ ಉಳಿಸಿಕೊಳ್ಳದೆ ನೋವು ಅನುಭವಿಸುತ್ತಿದ್ದಾರೆ.ಇದಕ್ಕೇಲ್ಲಾ ಸರ್ಕಾರದ ನೀತಿ ವಿಫಲ ಹಾಗೂ ಜಿಲ್ಲಾಡಳಿತ ಮತ್ತು ಆರೋಗ್ಯ ಇಲಾಖೆಯ ನಿರ್ಲಕ್ಷ್ಯ ಧೋರಣೆಯೇ ಕಾರಣ.ಇನ್ನಾದರೂ ಜಿಲ್ಲಾಧಿಕಾರಿಗಳು ಸಕಾಲಕ್ಕೆ ಚಿಕಿತ್ಸೆ ಕೊಡಿಸಲು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದ್ದಾರೆ.

emedialine

Recent Posts

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

7 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

7 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

7 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

23 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

1 day ago