ಶಹಾಪುರ: ಯಾದಗಿರಿ ಜಿಲ್ಲೆಯ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಆರ್.ಎಂ.ನಾಟೇಕರ್ ಅವರು ಆಯ್ಕೆಯಾಗಿದ್ದಾರೆ ಎಂದು ಜಿಲ್ಲಾ ಅಧ್ಯಕ್ಷರಾದ ಮಹಿಪಾಲ ರೆಡ್ಡಿ ಪಾಟೀಲ್ ಅವರು ಪ್ರಕಟಣೆಗೆ ತಿಳಿಸಿದ್ದಾರೆ.
ಪ್ರಸ್ತುತ ಆರ್.ಎಂ.ನಾಟೇಕರ್ ಅವರು ಯಾದಗಿರಿ ಜಿಲ್ಲೆಯ ಪಂಚಾಯಿತಿ ರಾಜ್ಯ ಎಂಜಿನಿಯರಿಂಗ್ ವಿಭಾಗದಲ್ಲಿ ಸೇವೆ ಸಲ್ಲಿಸುತ್ತಿರುವ ಇವರ ಕಾರ್ಯವೈಖರಿಯನ್ನು ಪರಿಗಣಿಸಿ ಕರ್ನಾಟಕ ರಾಜ್ಯ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಹುದ್ದೆಯ ಜವಾಬ್ದಾರಿಯನ್ನು ವಹಿಸಿಕೊಡಲಾಗಿದೆ.
ಈ ಹಿಂದೆ ಪ್ರಧಾನ ಕಾರ್ಯದರ್ಶಿಯಾಗಿರುವ ಸಾಬ ರೆಡ್ಡಿಯವರು ಶಹಾಪುರ ತಾಲ್ಲೂಕಿಗೆ ವರ್ಗಾವಣೆಯಾಗಿರುವ ಸಲುವಾಗಿ ಕಾರ್ಯ ಚಟುವಟಿಕೆ ಮಾಡಲು ತೊಂದರೆ ಉಂಟಾಗದಂತೆ ಕೂಡಲೇ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ಇವರನ್ನು ನೇಮಕ ಮಾಡಲಾಗಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ದಲಿತ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಡಾ.ಮರಿಯಪ್ಪ ನಾಟೇಕರ್,ಕನ್ನಡ ಜಾನಪದ ಪರಿಷತ್ತಿನ ಅಧ್ಯಕ್ಷರಾದ ಬಸವರಾಜ ಸಿನ್ನೂರು ಹಾಗೂ ಸಿಬ್ಬಂದಿ ವರ್ಗದವರು ಹರ್ಷ ವ್ಯಕ್ತಪಡಿಸಿದ್ದಾರೆ.