ಸುರಪುರ: ರಾಜ್ಯದಲ್ಲಿನ ಅನೇಕ ಜನ ಬಡ ವಿದ್ಯಾರ್ಥಿಗಳಿಗೆ ಪ್ರತಿ ತಿಂಗಳು ವಿದ್ಯಾರ್ಥಿ ವೇತನವನ್ನು ಅವರ ಬ್ಯಾಂಕ್ ಖಾತೆಗಳಿಗೆ ಹಾಕುವ ಮೂಲಕ ವೀರಶೈವ ಲಿಂಗಾಯತ ಸಮುದಾಯದ ವಿದ್ಯಾರ್ಥಿಗಳ ಓದಿಗೆ ಬೆಂಬಲಿಸುವ ರಾಜ್ಯದ ಮೊದಲ ಸಂಘಟನೆ ವೀರಶೈವ ಲಿಂಗಾಯತ ಯುವ ವೇದಿಕೆಯಾಗಿದೆ ಎಂದು ಸಂಘಟನೆಯ ರಾಜ್ಯ ಉಪಾಧ್ಯಕ್ಷ ಮಂಜುನಾಥ ಜಾಲಹಳ್ಳಿ ತಿಳಿಸಿದರು.
ವೇದಿಕೆಯ ರಾಜ್ಯಾಧ್ಯಕ್ಷ ಪ್ರಶಾಂತ ಕಲ್ಲೂರ ಹಾಗು ಪ್ರಧಾನ ಕಾರ್ಯದರ್ಶಿ ಕವನ ಬಸವಕುಮಾರ ಅವರ ಜನುಮ ದಿನದ ಅಂಗವಾಗಿ ನಗರದ ರಂಗಂಪೇಟೆಯ ಬನಶಂಕರಿ ದೇವಸ್ಥಾನದಲ್ಲಿ ಹಮ್ಮಿಕೊಂಡಿದ್ದ ವಿಶೇಷ ಪೂಜೆ ಹಾಗು ವಠಾರ ಶಾಲೆ ಮತ್ತು ವಿದ್ಯಾಗಮ ಶಾಲೆಗಳಲ್ಲಿನ ಮಕ್ಕಳಿಗೆ ಉಚಿತ ಪ್ರಸಾದ ವಿತರಿಸಿ ಮಾತನಾಡಿ,ವೀರಶೈವ ಲಿಂಗಾಯತ ಸಮುದಾಯದ ನೂರಾರು ಬಡ ಕುಟುಂಬದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡುತ್ತೇವೆ,ಅಲ್ಲದೆ ಅನೇಕ ಸರಕಾರಿ ಶಾಲೆಗಳಿಗೆ ಶುದ್ಧ ಕುಡಿಯುವ ನೀರಿನ ಯಂತ್ರಗಳನ್ನು ವಿತರಿಸಿದ್ದೇವೆ ಹಾಗು ಪ್ರತಿ ವರ್ಷ ಅನೇಕ ವಿದ್ಯಾರ್ಥಿಗಳಿಗೆ ಕಲಿಕಾ ಸಾಮಗ್ರಿಗಳನ್ನು ಉಚಿತವಾಗಿ ನೀಡುವ ಮೂಲಕ ಮಕ್ಕಳ ಓದಿಗೆ ಬೆಂಬಲಿಸುವ ರಾಜ್ಯದ ಮೊದಲ ಸಂಘಟನೆಯಾಗಿದೆ.
ಇನ್ನೂ ನಾಡಿನ ವಿದ್ಯಾರ್ಥಿಗಳ ಹೆಚ್ಚಿನ ಸೇವೆ ಮಾಡಲು ನಮ್ಮ ರಾಜ್ಯಾಧ್ಯಕ್ಷರಾದ ಪ್ರಶಾಂತ ಕಲ್ಲೂರವರಿಗೆ ಮತ್ತು ಪ್ರಧಾನ ಕಾರ್ಯದರ್ಶಿಗಳಾದ ಕವನ ಬಸವಕುಮಾರ ಅವರಿಗೆ ಹೆಚ್ಚಿನ ಶಕ್ತಿ ಬಸವಾದಿ ಶರಣರು ಕರುಣಿಸಲೆಂದು ಪ್ರಾರ್ಥಿಸುವುದಾಗಿ ತಿಳಿಸಿದರು.
ನಂತರ ವಠಾರ ಶಾಲೆ ಮತ್ತು ವಿದ್ಯಾಗಮ ಶಾಲೆಗಳಲ್ಲಿನ ಅನೇಕ ವಿದ್ಯಾರ್ಥಿಗಳಿಗೆ ಉಚಿತ ಪ್ರಸಾದ ವಿತರಣೆ ಮಾಡಲಾಯಿತು.
ಈ ಸಂದರ್ಭದಲ್ಲಿ ವೇದಿಕೆಯ ರಾಜ್ಯ ಸಂಘಟನಾ ಕಾರ್ಯದರ್ಶಿ ಚಂದ್ರಶೇಖರ ಡೊಣೂರ ಜಿಲ್ಲಾಧ್ಯಕ್ಷ ಪ್ರದೀಪ ಕದರಾಪುರ ಸಿದ್ದನಗೌಡ ಹೆಬ್ಬಾಳ ರವಿಕುಮಾರ ಹೆಮನೂರ ಶರಣಯ್ಯಸ್ವಾಮಿ ಲಕ್ಷ್ಮೀಪುರ ರಾಘವೇಂದ್ರ ಲಕ್ಷ್ಮೀಪುರ ಭೀಮು ಹಳ್ಳದ ಮಲ್ಲು ಹಳ್ಳದ ಮಂಜುನಾಥ ಸ್ವಾಮಿ ಬಸ್ಸಯ್ಯಸ್ವಾಮಿ ಬೋನಾಳ ಸೇರಿದಂತೆ ಅನೇಕರಿದ್ದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…