ಬಿಸಿ ಬಿಸಿ ಸುದ್ದಿ

ಪಾಣೇಗಾಂವ್ ಗ್ರಾಮಕ್ಕೆ ಒಳಚರಂಡಿ ವ್ಯವಸ್ಥೆ ಇಲ್ಲ: ಗ್ರಾ.ಪಂ ಅಧಿಕಾರಗಳ ವಿರುದ್ಧ ಆಕ್ರೋಶ

ಕಲಬುರಗಿ: ಈ ಗ್ರಾಮದಲ್ಲಿ ಚರಂಡಿ ಮತ್ತು ಒಳಚರಂಡಿ ವ್ಯವಸ್ಥೆ ಇಲ್ಲದ ಕಾರಣ ಗ್ರಾಮದ ಬೀದಿಗಳಲ್ಲಿ ಸಾರ್ವಜನಿಕರು ಬಳಸಿದ ಬಚ್ಚಲು ಕಲುಷಿತ ನೀರು ದಿನನಿತ್ಯ ಓಡಾಡುವ ರಸ್ತೆ ಮೇಲೆ ಹರಿದು ದುರ್ನಾತ ಬೀರುತ್ತಿದೆ. ಜನರು ಬೇಸತ್ತು ಹೋಗಿರುವ ಪ್ರಸಂಗ ನಗರದ ಹೊರ ವಲಯದಲ್ಲಿರುವ ಖಣದಾಳ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿದೆ.

ಇನ್ನೊಂದು ಕಡೆ ಒಳಚರಂಡಿ ವ್ಯವಸ್ಥೆ ಇಲ್ಲದ ಕಾರಣ ಗುಂಡಿ ತೋಡಿ ಶೌಚಾಲಯ ನಿರ್ಮಿಸಲು ಹಿಂದೇಟು ಹಾಕುತ್ತಿದ್ದಾರೆ. ಮನೆಯಲ್ಲಿ ವೈಯಕ್ತಿಕ ಶೌಚಾಲಯ ಕಟ್ಟಿಸಿಕೊಳ್ಳುವ ಬದಲು ಬಯಲು ಶೌಚಾಲಯಕ್ಕೆ ಮೊರೆಹೋಗಿದ್ದಾರೆ. ಪರಿಣಾಮವಾಗಿ ಗ್ರಾಮದ ರಸ್ತೆಗಳು ಕೂಡ ದುರ್ನಾತ ಬೀರುತ್ತಿದ್ದು, ಕಲುಷಿತ ವಾತಾವರಣ ನಿರ್ಮಾಣವಾಗಿದೆ. ಈ ರಸ್ತೆಯಿಂದ ಸಂಚರಿಸುವಂತಹ ಸಾರ್ವಜನಿಕರು ವಾಹನಗಳು ಸವಾರರು ಹಿಡಿಶಾಪ ಹಾಕುವಂತಾಗಿದೆ ಎಂದು ಗ್ರಾಮದ ನಿವಾಸಿ ಮತ್ತು ಸಾಮಾಜಿಕ ಹೋರಾಟಗಾರ ಭೀಮಾಶಂಕರ್ ಪಾಣೇಗಾಂವ್ ತಿಳಿಸಿದ್ದಾರೆ.

ಗ್ರಾಮದಲ್ಲಿ ಸೊಳ್ಳೆಗಳ ಕಾಟ  ಹೆಚ್ಚಾಗಿದ್ದು, ಹಲವು ಸಾಂಕ್ರಾಮಿಕ ರೋಗಗಳಿಗೆ ಸಾರ್ವಜನಿಕರು ತುತ್ತಾಗುವಂತಾಗಿದೆ. ಊರಿನ ಜನರಿಗೆ  ಓಡಾಡಲು ತುಂಬಾ ಕಷ್ಟ ಆಗುತ್ತಿದೆ. ಅದರಲ್ಲಿ ಮಳೆಗಾಲ ಬಂದರೆ ಸಾಕು ಮಳೆಯ ನೀರು ಗ್ರಾಮಸ್ಥರು ಉಪಯೋಗಿಸಿದ ನೀರು ಎರಡನ್ನು ಸೇರಿ ಓಣಿ ಗಳ ರಸ್ತೆ ಮೇಲೆ ಗಲೀಜು ನೀರು ಹರಿಯುತ್ತಾ ಇರುತ್ತದೆ. ಕರೆಂಟು ಹೋದರೆ ಕತ್ತಲಲ್ಲಿ ಜನಗಳು ಓಡಾಡಲು ದುಸ್ತರವಾಗುತ್ತದೆ. ಮಕ್ಕಳು, ಮಹಿಳೆಯರು ಮತ್ತು ವಯೋವೃದ್ಧರು ಕಾಲುಜಾರಿ ಬೀಳುವಂತ ಸಂಭವಗಳು ಹೆಚ್ಚಿವೆ ಎಂದು ತಿಳಿಸಿದರು.

ಒಟ್ಟಾರೆಯಾಗಿ ಗ್ರಾಮದ ಜನತೆಗೆ ಚರಂಡಿ ಮತ್ತು ಒಳಚರಂಡಿ ವ್ಯವಸ್ಥೆ ಇಲ್ಲದ ಕಾರಣ ಹಲವಾರು ಭೀಕರ ಸಮಸ್ಯೆಗಳನ್ನು ಅನುಭವಿಸುವಂತಾಗಿದೆ. ಹೀಗಾಗಿ ಗ್ರಾಮವು ಕೊಳಚೆ ಪ್ರದೇಶ ದಂತೆ ಮಾರ್ಪಡುವಾಗುತ್ತಿದೆ ಎಂದು ಗ್ರಾಮ ಪಂಚಾಯತಿ ವಿರುದ್ಧ ಅಸಮಧಾನ ವ್ಯಕ್ತಪಡಿಸಿದ್ದಾರೆ.

ಆದ್ದರಿಂದ ಸಂಬಂಧಿಸಿದ ಜನಪ್ರತಿನಿಧಿಗಳಾಗಲಿ ಅಧಿಕಾರಿಗಳಾಗಲಿ ಮತ್ತು ಇಲಾಖೆಯವರು ಕೂಡಲೇ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲಿಸಿ ಈ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ ಈ ಕೂಡಲೇ ಗ್ರಾಮಕ್ಕೆ ಚರಂಡಿ ಮತ್ತು ಒಳಚರಂಡಿ ವ್ಯವಸ್ಥೆ ಮಾಡಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

emedialine

Recent Posts

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

15 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

18 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

1 day ago

ಸಿದ್ದ ಶ್ರೀ ಕಾರ್ಖಾನೆ ಪ್ರಾರಂಭವಾಗುವರೆಗೂ ಹೋರಾಟ: ವೀರಣ್ಣ ಗಂಗಾಣಿ

ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…

1 day ago

ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆ

ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…

1 day ago

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

1 day ago