ಶಹಾಬಾದ:ತಾಲೂಕಿನಲ್ಲಿ ಬುಧವಾರ ಸಂಜೆ ಧಾರಾಕಾರ ಮಳೆ ಸುರಿದಿದ್ದರಿಂದ ಹಳ್ಳಕೊಳ್ಳಗಳಿಗೆ ಮಳೆಯ ನೀರು ತುಂಬಿ ಬಂದು ಅಕ್ಕಪಕ್ಕದ ಹೊಲಗಳಿಗೆ ನುಗ್ಗಿದ್ದರಿಂದ ಬೆಳೆಗಳಿಗೆ ಅಪಾರ ಪ್ರಮಾಣದ ಹಾನಿಯಾಗಿದೆ.
ಹೊನಗುಂಟಾ, ಶಂಕರವಾಡಿ, ಮರತೂರ, ತೆಗನೂರ, ಮುಗುಳನಾಗಾವ, ಹಳೆಶಹಾಬಾದ, ಮುತ್ತಗಾ ಸೇರಿದಂತೆ ಅನೇಕ ಗ್ರಾಮಗಳ ರಸ್ತೆಯ ಬದಿ, ಹಳ್ಳಕೊಳ್ಳ, ನದಿ ಪಾತ್ರದ ಹೊಲಗಳಿಗೆ ನೀರು ನುಗ್ಗಿದ್ದರಿಂದ ತೊಗರಿ ಬೆಳೆಗಳು ನೀರಿನಲ್ಲಿ ಮುಳಗಿದ್ದರಿಂದ ಬೆಳೆ ಹಾನಿಯಾಗಿದೆ.
ಮಳೆಗಾಲದ ಪ್ರಾರಂಭದಲ್ಲಿಯೇ ರೈತರು ಹೆಸರು, ಉದ್ದು, ಬಿತ್ತಿದ್ದರಿಂದ ಈ ಬೆಳೆಗಳ ರಾಶಿ ಹಂತದಲ್ಲಿ ಮಳೆ ಬಂದು ರೈತರಿಗೆ ಅಪಾರ ನಷ್ಟವಾದ ಬೆನ್ನಲ್ಲೆ ಬುಧವಾರ ಸುರಿದ ಭಾರಿ ಮಳೆಯಿಂದ ಹಳ್ಳದ ನೀರು ಹೊಲಕ್ಕೆ ನುಗ್ಗಿದ್ದು, ಬೆಳೆ ಸಂಪೂರ್ಣ ಮುಳುಗಿದೆ.
ಬಹುತೇಖ ಕಡೆಗಳಲ್ಲಿ ಸೇತುವೆ ಮತ್ತು ಕಲವಟ್ಗಳ ಪೈಪುಗಳು ಸಂಪೂರ್ಣ ಮುಚ್ಚಿ ಹೋಗಿದ್ದರಿಂದ ನೀರು ಹಲಗಳಿಗೆ ನುಗ್ಗುತ್ತಿವೆ.ಆದ್ದರಿಂದ ಕಲವಟ್ಗಳು ರಸ್ತೆಗೆ ಹೊಂದಿಕೊಂಡಿರುವ ಸಣ್ಣ ಸೇತುವೆಗಳನ್ನು ಸ್ವಚ್ಛಗೊಳಿಸಿ ನೀರು ಸರಾಗವಾಗಿ ಹರಿಯುವಂತೆ ಮಾಡಬೇಕಾಗಿದೆ.ಅದಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಈ ಬಗ್ಗೆ ಕ್ರಮಕೈಗೊಳ್ಳಬೇಕೆಂದು ಸಾರ್ವಜನಿಕರ ಒತ್ತಾಯವಾಗಿದೆ.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…