ಅಪಾರ ಪ್ರಮಾಣದ ಗಾಂಜಾ ವಶ, ರಾಜಕೀಯ ಕೈವಾಡದ ಶಂಕೆ: ಶಾಸಕ ಖರ್ಗೆ

0
102

ಕಲಬುರಗಿ: ಜಿಲ್ಲೆಯಲ್ಲಿ ಬೆಂಗಳೂರು ಪೊಲೀಸರು ದಾಳಿ ಮಾಡಿ ಅಂದಾಜು ರೂಪಾಯಿ 6 ಕೋಟಿ ಮೌಲ್ಯದ 1350 ಕೆಜಿ ಗಾಂಜಾ ವಶಪಡಿಸಿಕೊಂಡಿರುವುದರ ಹಿನ್ನೆಲೆಯಲ್ಲಿ ಜಿಲ್ಲೆ ಅಕ್ರಮ ಚಟುವಟಿಕೆಗಳ ತಾಣವಾಗುತ್ತಿದೆ ಎಂದು ಶಾಸಕರಾದ ಪ್ರಿಯಾಂಕ್ ಖರ್ಗೆ ಕಳವಳ ವ್ಯಕ್ತಪಡಿಸಿದ್ದಾರೆ.

ಈ‌ಕುರಿತು ತಮ್ಮ ಫೇಸ್ ಬುಕ್ ಖಾತೆಯಲ್ಲಿ ಬರೆದುಕೊಂಡಿರುವ ಅವರು ರಾಜ್ಯದ ಇತಿಹಾಸದಲ್ಲೇ ಇಷ್ಟೊಂದು ಪ್ರಮಾಣದ ಅಕ್ರಮ ಚಟುವಟಿಕೆ ಇದಾಗಿದ್ದು ಬಯಲಿಗೆಳೆದ ಬೆಂಗಳೂರು ಪೊಲೀಸರು ಅಭಿನಂದನಾರ್ಹರು ಎಂದು ಹೇಳಿದ್ದಾರೆ.

Contact Your\'s Advertisement; 9902492681

ತಾವು ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದಾಗ ಎಲ್ಲ ರೀತಿಯ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕಿದ್ದಾಗಿ ಹೇಳಿರುವ ಶಾಸಕರು 2019 ರ ನಂತರ ಅಕ್ರಮ ಜೂಜು ಅಡ್ಡೆಗಳು ಜಿಲ್ಲಾದ್ಯಂತ ತಲೆ ಎತ್ತಿದ್ದು ಜಿಲ್ಲೆಯನ್ನು ಅಕ್ರಮ ಚಟುವಟಿಕೆಗಳ ತಾಣವನ್ನಾಗಿ ಪರಿವರ್ತಿಸಿವೆ ಎಂದು ದೂರಿದ್ದಾರೆ.

ಓಡಿಶಾ ರಾಜ್ಯದಿಂದ ಸರಬರಾಜು ಮಾಡಲಾಗಿದೆ ಎನ್ನಲಾದ ಈ ಅಪಾರ ಪ್ರಮಾಣದ ಗಾಂಜಾ ಮೂರು ರಾಜ್ಯಗಳ ಚೆಕ್ ಪೋಸ್ಟ್ ದಾಟಿಕೊಂಡು ಬಂದಿದ್ದಾದರೂ ಹೇಗೆ? ಇಷ್ಟೊಂದು ಸುಲಭವಾಗಿ ಸರಬರಾಜಾಗಲು ರಾಜಕೀಯ ಕೈವಾಡ ಇರುವುದು ಸ್ಪಷ್ಟವಾಗಿದೆ ಎಂದು ಶಂಕೆ ವ್ಯಕ್ತಪಡಿಸಿರುವ ಪ್ರಿಯಾಂಕ್ ಖರ್ಗೆ ಅವರು ಈ ಕುರಿತು ಸ್ಥಳೀಯ ಆಡಳಿತಕ್ಕೆ ಮಾಹಿತಿ ಇರಲಿಲ್ಲವೇ ? ಎಂದು ಪ್ರಶ್ನಿಸಿದ್ದಾರೆ.

ಬೆಂಗಳೂರು ಪೊಲೀಸರು ದಾಳಿಯನ್ನು ಉಲ್ಲೇಖಿಸಿರುವ ಅವರು ದಾಳಿಯ ಕುರಿತು ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡದಿರುವುದು ನೋಡಿದರೆ, ಸ್ಥಳೀಯ ಪೊಲೀಸರ ಮೇಲೆ ಆಡಳಿತ ಪಕ್ಷದ ರಾಜಕೀಯ ಒತ್ತಡ ಇತ್ತೇ ಎನ್ನುವ ಅನುಮಾನ ಮೂಡುತ್ತದೆ. ಅಥವಾ ಸ್ಥಳೀಯ ಪೊಲೀಸರ ಮೇಲೆ ನಂಬಿಕೆ ಇರಲಿಲ್ಲವೇ ಎನ್ನುವ ಪ್ರಶ್ನೆ ಮೂಡುತ್ತದೆ ಎಂದು ಬರೆದಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here