ಕಲಬುರಗಿ: ಕೂಡಲೇ ಪರಿಶಿಷ್ಟ ಪಂಗಡ ಜಾತಿ ಪ್ರಮಾಣ ಪತ್ರ ನೀಡಲಾಗುವುದು, ಸೆ. 17ರಂದು ಈ ಪ್ರತಿಭಟನಾ ಸ್ಥಳಕ್ಕೆ ಮುಖ್ಯಮಂತ್ರಿಗಳನ್ನು ಕರೆದುಕೊಂಡು ಬರುವ ಪ್ರಯತ್ನ ಮಾಡುತ್ತೇನೆ ಎಂದು ಸಂಸದ ಡಾ. ಉಮೇಶ ಜಾಧವ ಹೇಳಿದರು.
ತಳವಾರ, ಪರಿವಾರ ಎಸ್.ಟಿ ಹೋರಾಟ ಸಮಿತಿ ಹಮ್ಮಿಕೊಂಡಿರುವ 15ನೇ ದಿನದ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹಕ್ಕೆ ಬೆಂಬಲ ಸೂಚಿಸಿ ಮಾತನಾಡಿದ ಅವರು ಸಂಸತ್ ಅಧಿವೇಶನದ ಶೂನ್ಯ ವೇಳೆಯಲ್ಲಿ ತಳವಾರ ಪರಿವಾರ ಸಮುದಾಯಗಳಿಗೆ ರಾಜ್ಯದಲ್ಲಿ ಆಗುತ್ತಿರುವ ಅನ್ಯಾಯ ಕುರಿತು ಪ್ರಶ್ನೆ ಎತ್ತುವೆ ಎಂದರು.
ಕೇಂದ್ರ ಸರ್ಕಾರ ಈಗಾಗಲೇ ಈ ಸಮುದಾಯಗಳನ್ನು ಪರಿಶಿಷ್ಟ ಪಂಗಡದ ಪಟ್ಟಿಯಲ್ಲಿ ಸೇರಿಸಿ ರಾಜ್ಯಪತ್ರ ಹೊರಡಿಸಿದೆ. ಆದರೆ ರಾಜ್ಯದಲ್ಲಿ ಯಾವುದೋ ಗೊಂದಲದಿಂದ ನಿಮಗೆ ಪ್ರಮಾಣ ಪತ್ರ ಸಿಗುತ್ತಿಲ್ಲ. ಖುದ್ದಾಗಿ ನಾನು ಮುಖ್ಯಮಂತ್ರಿಗಳವರ ಗಮನಕ್ಕೆ ತರುತ್ತೇನೆ ಎಂದು ತಿಳಿಸಿದರು.
ಸಪ್ಟಂಬರ್ 17ರಂದು ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆಗೆ ಆಗಮಿಸಲಿರುವ ಮುಖ್ಯಮಂತ್ರಿಗಳವರಿಗೆ ಪ್ರತಿಭಟನಾ ಸ್ಥಳಕ್ಕೆ ಕರೆದುಕೊಂಡು ಬರುವೇ ಎಂದು ತಿಳಿಸಿದ ಅವರು, ತಳವಾರ, ಪರಿವಾರ ಸಮುದಾಯಗಳೊಂದಿಗೆ ಕೋಲಿ ಸಮಾಜ ಕೂಡ ಅಭೂತಪೂರ್ವ ಬೆಂಬಲ ಸಿಕ್ಕಿದ್ದು, ಪರಿಶಿಷ್ಟ ಪಂಗಡಕ್ಕೆ ಸೇರುವುದು ಈ ಸಮಾಜದ ಬಹುದಿನಗಳ ಬೇಡಿಕೆಯಾದೆ. ಈ ಬೇಡಿಕೆಯ ದ್ವನಿಯನ್ನು ನಾನು ಸಂಸತ್ತೀನ ಅಧಿವೇಶನದಲ್ಲಿ ಎತ್ತುತ್ತೇನೆ ಎಂದು ಹೇಳಿದರು.
ಈ ಸಂದರ್ಭದಲ್ಲಿಡಾ.ಸದಾ೯ರ ರಾಯಪ್ಪ , ರಾಜೇಂದ್ರ ರಾಜವಾಳ , ಚಂದ್ರಶೇಖರ ಜಮಾದಾರ ವಕೀಲರು , ಸುನಿತಾ ತಳವಾರ್, ದಿಗಂಬರ ಕಾಡಪ್ಪಗೋಳ, ಶರಣು ಕೋಲಿ, ದಿಗಂಬರ ಡಾಂಗೆ, ಚಂದ್ರಕಾಂತ್ ಗಂವ್ಹಾರ ,ಅನಿಲ ಕಾಮಣ್ಣ ವಚ್ಚಾ, ಇನ್ನಿತರರು ಉಪಸ್ಥಿತರಿದ್ದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…