ಕಲಬುರಗಿ: ರಾಜ್ಯದಲ್ಲಿ ಗಾಂಜಾ ಪ್ರಕರಣಗಳು ಭಾರಿ ಸದ್ದು ಮಾಡುತ್ತಿದ್ದು, ಈಗಾಗಲೇ ನಟಿ ರಾಗಿಣಿ ಸೇರಿದಂತೆ ಹಲವರನ್ನು ಬೆಂಗಳೂರು ಪೊಲೀಸರು ವಿಚಾರಣೆ ನಡೆಸಿ ತನಿಖೆ ನಡೆಸುತ್ತಿದ್ದು, ನಿನ್ನೆಯಷ್ಟೆ ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಕಮಲ್ ಪಂತ್ ಸುದ್ದಿಗೋಷ್ಟಿ ನಡೆಸಿ 1350 ಗಾಂಜಾ ಸೇರಿ ನಾಲ್ವರು ಆರೋಪಿಗಳನ್ನು ಬಂಧಿಸಿರುವ ಕುರಿತು ಸುದ್ದಿಗೊಷ್ಠಿಯಲ್ಲಿ ತಿಳಿಸಿದರು.
ಸದ್ಯ ಈ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್ ಸಿಕ್ಕಿದ್ದು, ಜಿಲ್ಲೆಯಲ್ಲಿ ಕುರಿ ಫಾರ್ಮ್ ನಲ್ಲಿ ಸಿಕ್ಕಿರುವ ಗಾಂಜಾ ಮೊಟ್ಟೆಯ ಪ್ರಕರಣದ ಪ್ರಮುಖ ಬಂಧಿತ ಆರೋಪಿ ಕಲಬುರಗಿ ಜಿಲ್ಲೆಯ ಚಂದ್ರಕಾಂತ್ ಚೌವ್ಹಾಣ್ ಬಿಜೆಪಿ ಕಾರ್ಯಕರ್ತ ಎಂಬುದು ದೃಢಪಟ್ಟಿದೆ.
ಆರೋಪಿ ಚಂದ್ರಕಾಂತ ಬಿಜೆಪಿಯ ಇತರೆ ಕಾರ್ಯಕರ್ತರೊಂದಿಗೆ ತೆಗೆದುಕೊಂಡಿರುವ ಫೋಟೋವನ್ನು ಮಾಜಿ ಸಚಿವ, ಶಾಸಕರಾದ ಪ್ರಿಯಾಂಕ್ ಖರ್ಗೆ ತಮ್ಮ ಟ್ವಿಟ್ಟರ್ ನಲ್ಲಿ ಹಂಚಿಕೊಂಡು ಬಿಜೆಪಿ ನಾಯಕರ ಕಾಲೆಳೆದಿದ್ದಾರೆ.
“ಬಿಜೆಪಿಯವರೇ ನಿಮ್ಮದೇ ಸರ್ಕಾರವಿದೆ. ನಿಮ್ಮ ಬಳಿ ಎಲ್ಲ ಸಂಪನ್ಮೂಲಗಳು ಇವೆ. ಅವುಗಳನ್ನು ಉಪಯೋಗಿಸಿಕೊಂಡು ಕಲಬುರಗಿಯಲ್ಲಿ ಅಕ್ರಮವಾಗಿ ಸ್ಥಾಪಿಸಿರುವ ಜೂಜು ಅಡ್ಡೆಗಳನ್ನು ಕಂಡುಹಿಡಿಯಿರಿ. ಈ ರೀತಿಯ ಕ್ಲಬ್ಗಳನ್ನು ನಡೆಸಲು ಯಾರೂ ಅನುಮತಿ ಕೊಟ್ಟಿದ್ದಾರೆ ಎಂಬುದನ್ನು ಕಂಡುಹಿಡಿಯಿರಿ. ಯಾವು ರಾಜಕೀಯ ನಾಯಕ ರಕ್ಷಣೆಯಿಂದ ಇವರು ಕೆಲಸ ಮಾಡುತ್ತಿದ್ದಾರೆ ಎಂಬುದನ್ನು ಪತ್ತೆ ಹಚ್ಚಿ” ಎಂದು ಸಾಮಾಜಿಕ ಜಾಲಾತಾಣ ಮತ್ತೊಂದು ಟ್ವೀಟ್ ಮೂಲಕ ಸವಾಲು ಹಾಕಿದ್ದಾರೆ.
ಸಂಸದ ಜಾಧವ್ ತಿರುಗೇಟು: ಗಾಂಜಾ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಪ್ರಿಯಾಂಕ್ ಖರ್ಗೆ ಅವರ ಹೇಳಿಕೆಯ ವಿರುದ್ದ ಸಂಸದ ಡಾ. ಉಮೇಶ್ ಜಾಧವ್ ಪ್ರತಿಕ್ರಿಯೆ ನೀಡಿ, ಗಾಂಜಾ ಏಮಬ ಸಾಮಾಜಿಕ ಪಿಡುಗನ್ನು ಎಲ್ಲರೂ ಸೇರಿ ತೆಗೆದುಹಾಕಬೇಕು, ಪ್ರಕರಣದಲ್ಲಿ ಯಾರೂ ರಾಜಕೀಯ ಮಾಡಬಾರದು ಎಂದು ತಿರುಗೇಟ್ಟು ನೀಡಿದ್ದಾರೆ.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…