ಕಲಬುರಗಿ: ಸೇಡಂ ತಾಲೂಕಿನ ಯಾನಗುಂದಿಯ ಶ್ರೀ ಸದ್ಗುರು ಯೋಗೇಶ್ವರ ವೀರ ಧರ್ಮಜ ಆಶ್ರಮದ ಮಾತಾ ಮಾಣಿಕೇಶ್ವರಿ ತಾಯಿಯ ಆರೋಗ್ಯ ಕುರಿತು ವರದಿ ನೀಡಬೇಕೆಂದು ಕಲಬುರ್ಗಿ ಹೈಕೋರ್ಟ್ ನಿರ್ದೇಶನದ ಹಿನ್ನೆಲೆಯಲ್ಲಿ ಶುಕ್ರವಾರ ಸಾಯಂಕಾಲ ಜಿಲ್ಲಾಧಿಕಾರಿ ಆರ್.ವೆಂಕಟೇಶ ಕುಮಾರ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯಡಾ ಮಾರ್ಟಿನ್ ಮಾರ್ಬನ್ಯಾಂಗ್ ಅವರು ಯಾನಗುಂದಿಯ ಆಶ್ರಮಕ್ಕೆ ಭೇಟಿ ನೀಡಿ ಮಾತೆ ಮಾಣಿಕೇಶ್ವರಿ ಅವರ ಆರೋಗ್ಯ ವಿಚಾರಿಸಿದರು.
ಮಾತೆ ಮಾಣಿಕೇಶ್ವರಿ ಆರೋಗ್ಯದ ವಸ್ತುಸ್ಥಿತಿಯ ಕುರಿತಂತೆ ಆಶ್ರಮದ ಟ್ರಸ್ಟಿನ ಕಾರ್ಯದರ್ಶಿ ಶಿವಯ್ಯ ಸ್ವಾಮಿ ಹಾಗೂ ಮಾತೆಯ ಆಪ್ತ ಸಿಬ್ಬಂದಿಗಳಿಂದ ಜಿಲ್ಲಾಧಿಕಾರಿಗಳು ಮಾಹಿತಿ ಪಡೆದುಕೊಂಡರು.
ಇದೇ ಸಂದರ್ಭದಲ್ಲಿ ವೈದ್ಯರ ತಂಡವು ಮಾತೆ ಮಾಣಿಕೇಶ್ವರಿ ತಾಯಿಯ ಅರೋಗ್ಯ ತಪಾಸಣೆ ಸಹ ನಡೆಸಿತು.
ಈ ಸಂದರ್ಭದಲ್ಲಿ ಸೇಡಂ ಸಹಾಯಕ ಆಯುಕ್ತ ಪೂಜಾರ ವೀರಮಲ್ಲಪ್ಪ, ತಹಶೀಲ್ದಾರ ಕೀರ್ತಿ ಚಾಲಕ್, ಎಎಸ್ಪಿ ಅಕ್ಷಯ ಕುಮಾರ, ಮಾಜಿ ವೈದ್ಯಕೀಯ ಶಿಕ್ಷಣ ಸಚಿವ ಡಾ.ಎ.ಬಿ.ಮಲಕರೆಡ್ಡಿ, ಯಾನಾಗುಂದಿ ಅಶ್ರಮದ ಟ್ರಸ್ಟಿನ ಖಜಾಂಚಿ ಸಿದ್ರಾಮಪ್ಪ ಸಣ್ಣೂರ, ಟ್ರಸ್ಟ್ ಸದಸ್ಯರಾದ ಜ್ನಾನೇಶ್ವರ, ಮಂದಾರ, ಹಣಮಂತ ಮಡ್ಡಿ, ಜಗಜೀವನರೆಡ್ಡಿ ಸೇರಿದಂತೆ ಇನ್ನಿತರರು ಇದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…