ವಾಲ್ಮೀಕಿ ನಾಯಕ ಆಸ್ಪತ್ರೆಯಿಂದ ಡಿಶ್ಚಾರ್ಜ್

0
109

ವಾಡಿ: ಕೊರೊನಾ ಸೋಂಕು ದೃಢಪಟ್ಟು ಕಳೆದ ಹತ್ತು ದಿನಗಳಿಂದ ಕಲಬುರಗಿ ನಗರದ ಇಎಸ್‌ಐಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಚಿತ್ತಾಪುರ ಮತಕ್ಷೇತ್ರದ ಮಾಜಿ ಶಾಸಕ, ಬಿಜೆಪಿಯ ಹಿರಿಯ ಮುಖಂಡ ವಾಲ್ಮೀಕಿ ನಾಯಕ ಸೋಂಕಿನಿಂದ ಗುಣಮುಖರಾಗಿದ್ದಾರೆ.

ಸೆ.೧೦ ರಂದು ನಡೆಸಲಾದ ಕೊರೊನಾ ಪರೀಕ್ಷೆಯಲ್ಲಿ ಶುಕ್ರವಾರ ನೆಗೆಟೀವ್ ವರದಿ ಪ್ರಕಟವಾಗಿದೆ. ಹೀಗಾಗಿ ಅವರನ್ನು ಶುಕ್ರವಾರ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದ್ದು, ಒಂದು ವಾರಗಳ ಸಮಯ ಹೋಂ ಕ್ವಾರಂಟೈನ್ ಇರಲು ವೈದ್ಯರು ಸೂಚಿಸಿದ್ದಾರೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here