ಬಿಸಿ ಬಿಸಿ ಸುದ್ದಿ

ಕಲಬುರಗಿ ನಗರದ ವಿವಿಧ ಬಡಾವಣೆಗಳಲ್ಲಿನ ಒಟ್ಟು 1068 ಹಂದಿಗಳ ಸ್ಥಳಾಂತರ

ಕಲಬುರಗಿ: ನಗರದ ವಿವಿಧ ಬಡಾವಣೆಗಳಲ್ಲಿ ಅನಧೀಕೃತವಾಗಿ ಸಾಕುತ್ತಿರುವ ಹಂದಿಗಳನ್ನು ಬೇರೆ ಕಡೆಗೆ ಸ್ಥಳಾಂತರಿಸಲು ಇತ್ತೀಚೆಗೆ ಮಾಲೀಕರೊಂದಿಗೆ ಸಭೆ ಕರೆದು ಕಟ್ಟು ನಿಟ್ಟಿನ ಸೂಚನೆ ನೀಡಿ, ಐದು ದಿನಗಳ ಕಾಲಾವಕಾಶ ನೀಡಲಾಗಿತ್ತು. ಆದರೂ ಕೂಡ ಹಂದಿ ಮಾಲೀಕರು ಪಾಲಿಕೆಯ ಆಯುಕ್ತರ ನಿರ್ದೇಶನ ಪಾಲನೆ ಮಾಡದೇ ಯಥಾಸ್ಥಿತಿಯಲ್ಲಿ ತಮ್ಮ ಕಾರ್ಯಚಟುವಟಿಕೆಯನ್ನು ಮುಂದುವರಿಸಿರುತ್ತಾರೆ. ಇದರ ಹಿನ್ನೆಲೆಯಲ್ಲಿ ಕಲಬುರಗಿ ಮಹಾನಗರ ಪಾಲಿಕೆ ಹಿರಿಯ ಪಶುವೈದ್ಯಾಧಿಕಾರಿ ಡಾ. ಮುಹಮ್ಮದ ಸಖಾವತ್ ಹುಸೇನ್ ಮತ್ತು ತಂಡದ ನೇತೃತ್ವ ಹಾಗೂ ನಗರದ ಕೆಲವು ಹಂದಿ ಮಾಲೀಕರ ಸಹಯೋಗದೊಂದಿಗೆ 2020ರ ಸೆಪ್ಟೆಂಬರ್ 9 ರಿಂದ 11 ರವರೆಗೆ ಮೂರು ದಿನಗಳ ಕಾಲ ವಿವಿಧ ಬಡಾವಣೆಗಳಲ್ಲಿನ ಒಟ್ಟು 1068 ಹಂದಿಗಳನ್ನು ಸ್ಥಳಾಂತರಿಸಲಾಗಿದೆ ಎಂದು ಕಲಬುರಗಿ ಮಹಾನಗರ ಪಾಲಿಕೆ ಆಯುಕ್ತ ಲೋಖಂಡೆ ಸ್ನೇಹಲ್ ಸುಧಾಕರ್ ಅವರು ತಿಳಿಸಿದ್ದಾರೆ.

ಸೆಪ್ಟೆಂಬರ್ 9 ರಂದು ನಗರದ ಮೌಲಾ ಅಲಿ ಕಟ್ಟಾ ಎಂ.ಎಸ್.ಕೆ.ಮಿಲ್‍ನಲ್ಲಿ 93 ಹಂದಿಗಳು ಹಾಗೂ ಎಂ.ಜಿ.ರೋಡ ಬಸವೇಶ್ವರ ಕಾಲೋನಿಯಲ್ಲಿ 62 ಸೇರಿದಂತೆ ಒಟ್ಟು 155 ಹಂದಿಗಳನ್ನು ಸ್ಥಳಾಂತರಿಸಲಾಗಿರುತ್ತದೆ.

ಸೆಪ್ಟೆಂಬರ್ 10ರಂದು ಮೌಲಾ ಅಲಿ ಕಟ್ಟಾದಲ್ಲಿ ಉಳಿದ 59 ಹಂದಿ, ಖದೀರ ಚೌಕ್‍ದಲ್ಲಿ 75, ಕೋಲ್ಡ್ ಸ್ಟೋರೇಜ್ ಮತ್ತು ಮಹಾನಗರ ಪಾಲಿಕೆಯ ನೈರ್ಮಲ್ಯ ನಿರೀಕ್ಷಕರ ಕಚೇರಿ ಹಿಂದುಗಡೆಯಲ್ಲಿ 103, ಬಸವ ನಗರ 43, ತಾರಪೈಲ್‍ದಲ್ಲಿನ 184 ಮತ್ತು ಪಂಚಶೀಲ ನಗರದಲ್ಲಿ 160 ಸೇರಿದಂತೆ ಒಟ್ಟು 624 ಹಂದಿಗಳನ್ನು ಹಿಡಿದು ಸ್ಥಳಾಂತರಿಸಲಾಗಿದೆ.

ಸೆಪ್ಟೆಂಬರ್ 11 ರಂದು ಸ್ವಸ್ತಿಕ್ ನಗರದಲ್ಲಿ 89, ಗುಬ್ಬಿ ಕಾಲೋನಿಯಲ್ಲಿ 70, ಉಮರ ಕಾಲೋನಿ 46, ಬಸವ ನಗರದಲ್ಲಿ 28 ಹಾಗೂ ಕೋರಂಟಿ ಹನುಮಾನ ಟೆಂಪಲ್ ತಾಂಡದ ಸಮೀಪ 56 ಸೇರಿದಂತೆ ಒಟ್ಟು 289 ಹಂದಿಗಳನ್ನು ಸ್ಥಳಾಂತರಿಸಲಾಗಿದೆ.

ಕಲಬುರಗಿ ಮಹಾನಗರದ ವಿವಿಧ ಬಡಾವಣೆಗಳಲ್ಲಿ ಹಂದಿಗಳ ಹಾವಳಿ ಮತ್ತು ಉಪಟಳ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಪ್ರತಿದಿನ ಮಹಾನಗರ ಪಾಲಿಕೆಗೆ ಹಲವಾರು ದೂರುಗಳು ಬಂದಿವೆ. ನಗರದ ವಿವಿಧ ವಾರ್ಡಗಳಲ್ಲಿ ಅನಧಿಕೃತವಾಗಿ ಹಂದಿ ಸಾಕಾಣಿಕೆ ಮಾಡುವ ಮಾಲೀಕರಿಗೆ ಲಿಖಿತವಾಗಿ ಈಗಾಗಲೇ ಹಲವಾರು ಬಾರಿ ನೋಟೀಸ್ ಜಾರಿ ಮಾಡಿ ತಾವಾಗಿಯೇ ಹಂದಿಗಳನ್ನು ಬೇರೆ ಕಡೆಗೆ ಸ್ಥಳಾಂತರ ಮಾಡಲು ಸೂಚಿಸಲಾಗಿತ್ತು.

ಕಲಬುರಗಿ ನಗರದಲ್ಲಿ ಹಂದಿಗಳ ಹಾವಳಿ/ಉಪಟಳ ನಿಯಂತ್ರಣಕ್ಕಾಗಿ ಮಹಾನಗರ ಪಾಲಿಕೆಯ ಹಿರಿಯ ಪಶು ವೈದ್ಯಾಧಿಕಾರಿಯವರ ನೇತೃತ್ವದಲ್ಲಿ ಮುಂದಿನ ದಿನಗಳಲ್ಲಿಯೂ ಸಹ ಕಾರ್ಯಾಚರಣೆ ಕೈಗೊಂಡು ಹಂದಿಗಳನ್ನು ಸ್ಥಳಾಂತರಿಸಲು ಕ್ರಮಕೈಗೊಳ್ಳಲು ರೂಪರೇಷೆಗಳನ್ನು ಸಿಧ್ಧಪಡಿಸಲಾಗಿದೆ. ನಗರದ ವಿವಿಧ ಬಡಾವಣೆಯಲ್ಲಿ ಹಂದಿ ಮಾಲೀಕರಿಗೆ ತಮ್ಮ ಹಂದಿಗಳನ್ನು 2020ರ ಸೆಪ್ಟೆಂಬರ್ 14 ರವರೆಗೆ ನಗರದಿಂದ ಹೊರಗಡೆ ಸ್ಥಳಾಂತರಿಸಲು ಧ್ವನಿ ವರ್ಧಕ ಮೂಲಕ ಪ್ರಚಾರ ಮಾಡಿ ಎಚ್ಚರಿಕೆ ನೀಡಲಾಗಿದೆ.

ಕಲಬುರಗಿ ನಗರದ ಸಾರ್ವಜನಿಕರು ತಮ್ಮ ಮನೆಯಲ್ಲಿ ಉಳಿದಿರುವ ಆಹಾರದ ಹಸಿ ಕಸವನ್ನು (ಮುಸರಿ ಪದಾಥರ್Àಗಳು) ಸಾರ್ವಜನಿಕ ಅಥವಾ ಖುಲ್ಲಾ ನಿವೇಶನದಲ್ಲಿ ಹಾಕಬಾರದೆಂದು ಕಲಬುರಗಿ ಮಹಾನಗರ ಪಾಲಿಕೆಯ ಆಯುಕ್ತರು ಕಲಬುರಗಿ ನಗರದ ಸಾರ್ವಜಕರಲ್ಲಿ ಮನವಿ ಮಾಡಿದ್ದಾರೆ.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

9 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

19 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

19 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

19 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

1 day ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

2 days ago