ಕಲಬುರಗಿ: ನಗರದ ಶರಣಬಸವ ವಿಶ್ವ ವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಎಂ.ಎ. ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ ವನ್ನು ತೃತೀಯ ಸೆಮಿಸ್ಟರ್ ವಿದ್ಯಾರ್ಥಿಗಳಿಂದ ಹಮ್ಮಿಕೊಳ್ಳಲಾಗಿತ್ತು.
ಈ ಸಮಾರಂಭದ ಅಧ್ಯಕ್ಷತೆಯನ್ನು ವಿಭಾಗದ ಮುಖ್ಯಸ್ಥರಾದ ಟಿ.ವಿ.ಶಿವಾನಂದ್ ರವರು ವಹಿಸಿ ಮಾತನಾಡಿದ್ದರು.
ವಿಭಾಗದ ಸಹಾಯಕ ಪ್ರಾಧ್ಯಾಪಕರುಗಳಾದ ಶ್ರೀಮತಿ ಅಶ್ವಿನಿ ರೆಡ್ಡಿ, ಡಾ.ಸುನಿತಾ ಪಾಟೀಲ್, ಶ್ರೀಮತಿ ನಿರ್ಮಲಾ ದೊರೆ, ಪತ್ರಕರ್ತ ಸುಭಾಷ್ ಬಣಗಾರ, ಅನಿತಾ ಗಾಯಕ್ವಾಡ್, ವೇದಿಕೆ ಮೇಲಿದ್ದರು.
ಕಾರ್ಯಕ್ರಮವು ಪ್ರಾರ್ಥನಾ ಗೀತೆ ಯೊಂದಿಗೆ ಪ್ರಾರಂಭವಾಯಿತು. ವಿದ್ಯಾರ್ಥಿ ಶಿವಲಿಂಗ ಹಾಡಿದ್ದರು. ಸ್ವಾಗತ ಭಾಷಣವನ್ನು ಭೀಮಾಶಂಕರ್ ಪಾಣೇಗಾಂವ್ ಮಾಡಿದರು. ನಿರೂಪಣೆಯನ್ನು ಕಾಶಿಬಾಯಿ ಗುತ್ತೇದಾರ, ಪ್ರದೀಪ್ ಜಮಾದಾರ್ ವಹಿಸಿದ್ದರು.ನಿಂಗಣ್ಣ ಜಂಬಗಿ ಪ್ರಾಸ್ತಾವಿಕ ನುಡಿ ಮಾತಾನಾಡಿದರು. ವಂದನಾರ್ಪಣೆಯನ್ನು ರಾಜಶೇಖರ್ ಮಾತೋಳಿ ವಹಿಸಿದ್ದರು.
ಈ ಕಾರ್ಯಕ್ರಮದಲ್ಲಿ ಫೋಟೋ ಜರ್ನಲಿಸ್ಟ್ ಅಶೋಕ್ ಪಾಟೀಲ್, ಬಸವರಾಜ್, ರಾಘು ಕುಲಕರ್ಣಿ ಹಾಜರಿದ್ದರು. ಈ ಸಂದರ್ಭದಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳಾದ ಸಿದ್ದಮ್ಮ ಜಮಾದಾರ್, ದಸ್ತಗಿರ್ ನದಾಫ, ಜಯಲಕ್ಷ್ಮಿ, ದೇವೇಂದ್ರ ಚಾವಡಿ ತಮ್ಮ ಅನಿಸಿಕೆಯನ್ನು ವ್ಯಕ್ತಪಡಿಸಿದರು. ಹಾಗೂ ತೃತೀಯ ಸೆಮಿಸ್ಟರ್ ನ ರೋಹಿತ್, ಸ್ನೇಹಾ ತೇಲಕರ ಸೇರಿದಂತೆ ಹಲವರು ಭಾಗವಹಿಸಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…