ನವದೆಹಲಿ: ಜಿಎಸ್‌ಟಿಯ ತೆರಿಗೆ ವಂಚನೆ ಶಾಖೆಯ ಇಬ್ಬರು ಮಾಜಿ ಅಧಿಕಾರಿಗಳ ವಿರುದ್ಧ ಕೇಂದ್ರ ತನಿಖಾ ಸಂಸ್ಥೆ ಸಿಬಿಐ ಪ್ರಕರಣ ದಾಖಲಿಸಿದೆ. ಪ್ರಕರಣದ ಇತ್ಯರ್ಥಕ್ಕೆ ಇಬ್ಬರೂ ಅಧಿಕಾರಿಗಳು 5 ಕೋಟಿ ರೂ.ಗಳ ಲಂಚಕ್ಕೆ ಒತ್ತಾಯಿಸಿದ್ದಾರೆ ಎಂದು ಆರೋಪಿಸಲಾಗಿದೆ.
ಜಿಎಸ್ಟಿ ಇಲಾಖೆಯ ಮಾಜಿ ಉಪ ಆಯುಕ್ತ ಸುಧಾ ರಾಣಿ ಚಿಲ್ಕಾ ಮತ್ತು ಇಲಾಖೆಯ ಅಧೀಕ್ಷಕ ಶ್ರೀನಿವಾಸ್ ಗಾಂಧಿ ಬೊಲಿನೇನಿ ವಿರುದ್ಧ ಪ್ರಕರಣ ದಾಖಲಾಗಿದೆ.
ಇಬ್ಬರು ಅಧಿಕಾರಿಗಳು ಹೈದರಾಬಾದ್‌ನಲ್ಲಿ ನೇಮಿಸಲಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದು, ಇಬ್ಬರು ಅಧಿಕಾರಿಗಳು 2019 ರ ಏಪ್ರಿಲ್ 15 ರಂದು ಇನ್ಫಿನಿಟಿ ಮೆಟಲ್ ಪ್ರಾಡಕ್ಟ್ಸ್ ಲಿಮಿಟೆಡ್ ನಿಂದ 10 ಲಕ್ಷ ರೂಪಾಯಿಗಳನ್ನು ತೆಗೆದುಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ. ಈ ಕಂಪನಿಯು ತೆರಿಗೆ ಸಾಲಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ತನಿಖೆಯನ್ನು ಎದುರಿಸುತ್ತಿದೆ ಇವರು 11 ತಿಂಗಳ ಪ್ರಾಥಮಿಕ ತನಿಖೆಯ ನಂತರ ಈ ಬಂಧನ ಮಾಡಲಾಗಿದೆ.
ತನಿಖೆಯ ಸಮಯದಲ್ಲಿ, ಅಧಿಕಾರಿಗಳ ವಿರುದ್ಧ ಕ್ರಮ ತೆಗೆದುಕೊಳ್ಳಲು ಏಜೆನ್ಸಿ ಸಾಕಷ್ಟು ಪುರಾವೆಗಳನ್ನು ಕಂಡುಹಿಡಿದಿದೆ. ಪಿಟಿಐ ಸುದ್ದಿ ಸಂಸ್ಥೆ ಪ್ರಕಾರ, ಸಿಬಿಐ ಇಬ್ಬರು ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲು ಕೇಂದ್ರ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಅವರಿಂದ ಅನುಮತಿ ಕೋರಿತ್ತು ಎಂಬ ವಿಷಯ ತಿಳಿದುಬಂದಿದೆ.
ಹೈದರಾಬಾದ್‌ನ ಮುಸದ್ದಿಲಾಲ್ ಜ್ಯುವೆಲ್ಲರ್ಸ್ ವಿರುದ್ಧ ವಂಚನೆ ಪ್ರಕರಣ ಮತ್ತು ಪ್ರಸಿದ್ಧ ಗಣಿಗಾರಿಕೆ ಉದ್ಯಮಿ ಜನಾರ್ದನ್ ರೆಡ್ಡಿ ವಿರುದ್ಧ ಮನಿ ಲಾಂಡರಿಂಗ್ ತಡೆ ಕಾಯ್ದೆಯಡಿ ದಾಖಲಾಗಿರುವ ಪ್ರಕರಣವೂ ಇದರಲ್ಲಿ ಸೇರಿದೆ. ಬೊಲಿನೇನಿ ಗಾಂಧಿ ಮತ್ತು ಅವರ ಪತ್ನಿಯ ಮೇಲೆ 2019 ರಲ್ಲಿ ಅಧಿಕ ಸಂಪತಿಹೊಂದಿರುವ ಆರೋಪವು ಹೇಳಿಬಂದಿತು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…