ಕಲಬುರಗಿ: ನಗರದ ಬ್ರಹ್ಮಪುರ ಬಡಾವಣೆಯ ವಾರ್ಡ್ ನಂ. 36ರಲ್ಲಿ ಬರುವ ಕೋರಿಮಠ ಧನಗರಗಲ್ಲಿ ಸಮೀಪದ ಸಾರ್ವಜನಿಕ ಮೂತ್ರಾಲಯವು ಸರಿಯಾದ ನಿರ್ವಹಣೆ ಇಲ್ಲದೆ ಗಬ್ಬು ದುರ್ನಾತ ಬೀರುತಿದೆ.ನೀರಿನ ಕೊರತೆ ಯಿಂದಾಗಿ ಹಾಳಾಗಿ ಹೋಗುತ್ತಿದೆ. ಇಲ್ಲಿನ ಸಾರ್ವಜನಿಕರು ಮೂತ್ರಾಲಯಕ್ಕೆ ಹೋಗಲು ಹಿಂದೇಟು ಹಾಕುವಂತಾಗಿದೆ.
ಕೆಲವೊಮ್ಮೆ ರಸ್ತೆ ಪಕ್ಕದಲ್ಲಿ ಮೂತ್ರ ಮಾಡಿ ಹೋಗುತ್ತಿದ್ದಾರೆ. ಇಲ್ಲಿನ ಸುತ್ತಮುತ್ತಲಿನ ಜನರಿಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಇಲ್ಲಿಂದ ಸಂಚರಿಸುವ ಸಾರ್ವಜನಿಕರು ಮೂಗು ಮುಚ್ಚಿಕೊಂಡು ಓಡಾಡು ಡುವ ಪರಿಸ್ಥಿತಿ ನಿರ್ಮಾಣವಾಗಿದೆ.. ಮಹಿಳೆಯರು ಕೂಡ ಹಿಡಿಶಾಪ ಹಾಕುತ್ತಾ ಮಜುಗುರ ಪಟ್ಟು ಸಂಚರಿಸುತ್ತಾರೆ ಎಂದು ಹೋರಾಟಗಾರರು ಭೀಮಾಶಂಕರ್ ಪಾಣೇಗಾಂವ್ ವ್ಯವಸ್ಥೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸ್ವಚ್ಛ ಭಾರತ ಎಂಬ ಘೋಷಣೆಗಳು ಕೇವಲ ಕಚೇರಿಯ ಫೈಲ್ ಗಳಲ್ಲಿ ಮತ್ತು ಸರಕಾರದಿಂದ ಅನುದಾನ ಪಡೆಯಲು ಪಡೆಯಲು ಸಿಮಿತವಾಗಿದೆ ಎಂದು ಅಸಮಧಾನ ವ್ಯಕ್ತಪಡಿಸಿದರು.
ಕೂಡಲೇ ಸಂಬಂಧಿಸಿದ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಸಮಸ್ಯೆ ಬಗೆಹರಿಸಿ ಸಾರ್ವಜನಿಕ ಸ್ಥಳದಲ್ಲಿರುವ ಸೌಚಾಲಯದ ನಿರ್ವಹಣೆ ಜವಾಬ್ದಾರಿಯನ್ನು ನಿರ್ವಹಿಸಬೇಕೆಂದು ಅವರು ಒತ್ತಾಯಿಸಿದ್ದಾರೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…