ಬಿಸಿ ಬಿಸಿ ಸುದ್ದಿ

ನಾಳೆ ಸಿಎಂಯಿಂದ ಜಯದೇವ ಹೃದ್ರೋಗ ಆಸ್ಪತ್ರೆ ಕಲಬುರಗಿ ಶಾಖೆಯ ನೂತನ ಕಟ್ಟಡಕ್ಕೆ ಶಂಕುಸ್ಥಾಪನೆ

ಕಲಬುರಗಿ: ಕಲಬುರಗಿಯ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ ಆವರಣದಲ್ಲಿ ನೂತನವಾಗಿ ನಿರ್ಮಿಸಲು ಉದ್ದೇಶಿಸಲಾಗಿರುವ ಶ್ರೀ ಜಯದೇವ ಹೃದ್ರೋಗ ಆಸ್ಪತ್ರೆಯ ಕಲಬುರಗಿ ಶಾಖೆಯ 300 ಹಾಸಿಗೆ ಸಾಮಥ್ರ್ಯದ ಆಸ್ಪತ್ರೆ ಸಂಕೀರ್ಣಕ್ಕೆ ಗುರುವಾರ ಸೆಪ್ಟೆಂಬರ್ 17 ರಂದು ಬೆಳಿಗ್ಗೆ 9 ಗಂಟೆಗೆ ರಾಜ್ಯದ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ ಅವರು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.

ಉಪಮುಖ್ಯಮಂತ್ರಿಗಳು, ಲೋಕೋಪಯೋಗಿ ಮತ್ತು ಸಮಾಜ ಕಲ್ಯಾಣ ಸಚಿವರು ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಗೋವಿಂದ ಎಂ. ಕಾರಜೋಳ, ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಬಿ. ಶ್ರೀರಾಮುಲು ಅವರ ಘನ ಉಪಸ್ಥಿತಿಯಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಅಧ್ಯಕ್ಷರು ಹಾಗೂ ಕಲಬುರಗಿ ದಕ್ಷಿಣ ಶಾಸಕ ದತ್ತಾತ್ರೇಯ ಸಿ. ಪಾಟೀಲ ರೇವೂರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.

ಕರ್ನಾಟಕ ವಿಧಾನಸಭೆಯ ವಿರೋಧ ಪಕ್ಷದ ಮುಖ್ಯ ಸಚೇತಕರು ಹಾಗೂ ಜೇವರ್ಗಿ ಶಾಸಕರಾದ ಡಾ. ಅಜಯಸಿಂಗ್, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಸುವರ್ಣಾ ಹಣಮಂತರಾಯ ಮಲಾಜಿ, ಕಲಬುರಗಿ ಲೋಕಸಭಾ ಸದಸ್ಯರಾದ ಡಾ. ಉಮೇಶ ಜಾಧವ, ಬೀದರ ಲೋಕಸಭಾ ಸದಸ್ಯ ಭಗವಂತ ಖೂಬಾ, ರಾಜ್ಯಸಭಾ ಸದಸ್ಯ ಡಾ. ಮಲ್ಲಿಕಾರ್ಜುನ ಖರ್ಗೆ, ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ, ಕೃಷಿ ಹಾಗೂ ಸಾಂಸ್ಕøತಿಕ ಸಂಘದ ಅಧ್ಯಕ್ಷ ಡಾ. ಬಸವರಾಜ ಪಾಟೀಲ ಸೇಡಂ ಹಾಗೂ ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಅಧ್ಯಕ್ಷರು ಹಾಗೂ ಸೇಡಂ ಶಾಸಕ ರಾಜಕುಮಾರ ಪಾಟೀಲ ತೇಲ್ಕೂರ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.

ವಿಧಾನಸಭೆ ಶಾಸಕರುಗಳಾದ ಪ್ರಿಯಾಂಕ್ ಖರ್ಗೆ, ಎಂ.ವೈ.ಪಾಟೀಲ್, ಕನೀಜ್ ಫಾತೀಮಾ, ಬಸವರಾಜ ಮತ್ತಿಮಡ, ಸುಭಾಷ ಆರ್. ಗುತ್ತೇದಾರ, ಡಾ. ಅವಿನಾಶ ಜಾಧವ ಹಾಗೂ ವಿಧಾನ ಪರಿಷತ್ತಿನ ಶಾಸಕರುಗಳಾದ ಸುನೀಲ ವಲ್ಲ್ಯಾಪುರೆ, ಬಿ.ಜಿ. ಪಾಟೀಲ್, ಡಾ.ಚಂದ್ರಶೇಖರ ಪಾಟೀಲ್, ಡಾ. ಸಾಯಿಬಣ್ಣ ತಳವಾರ, ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತ ಹಾಗೂ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಕಾರ್ಯದರ್ಶಿ ಡಾ. ಎನ್.ವಿ. ಪ್ರಸಾದ್, ಕಲಬುರಗಿ ತಾಲೂಕು ಪಂಚಾಯತ್ ಅಧ್ಯಕ್ಷ ಶಿವರಾಜ್ ಸಜ್ಜನ್, ಕಲಬುರಗಿ ಜಿಲ್ಲಾಧಿಕಾರಿ ವಿ.ವಿ. ಜ್ಯೋತ್ಸ್ನಾ, ಎಸ್‍ಜೆಐಸಿಆರ್ ಆಡಳಿತ ಮಂಡಳಿ ಸದಸ್ಯರುಗಳಾದ ಎಸ್.ಟಿ. ಯಾವಗಲ್, ಡಾ. ಕೆ. ಪೂರ್ಣೆಶ್, ಎ.ಸಿ. ಷಡಕ್ಷರಿ, ಎಸ್‍ಜೆಐಸಿಆರ್ ಆಡಳಿತ ಮಂಡಳಿ ಸದಸ್ಯರು ಹಾಗೂ ಕೂಡ್ಲಿಗಿ ಶಾಸಕ ಎನ್.ವೈ. ಗೋಪಾಲಕೃಷ್ಣ, ಎಸ್‍ಜೆಐಸಿಆರ್ ಆಡಳಿತ ಮಂಡಳಿ ಸದಸ್ಯರು ಹಾಗೂ ಜಯನಗರ ಶಾಸಕಿ ಸೌಮ್ಯ ರೆಡ್ಡಿ, ಎಸ್‍ಜೆಐಸಿಆರ್ ಆಡಳಿತ ಮಂಡಳಿ ಸದಸ್ಯರು ಹಾಗೂ ಮಧುಗಿರಿ ಶಾಸಕ ಎಂ.ವಿ. ವೀರಭದ್ರಯ್ಯ ವಿಶೇಷ ಆಹ್ವಾನಿತರಾಗಿ ಆಗಮಿಸಲಿದ್ದಾರೆ.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

13 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

23 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

23 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

23 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

2 days ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

2 days ago