ಬಿಸಿ ಬಿಸಿ ಸುದ್ದಿ

ಮಹಾನಾಯಕ ಧಾರಾವಾಹಿಯ ವಿಚಾರಕ್ಕೆ ಕೈ ಹಾಕಿದರೆ ಸುಮ್ಮನೆ ಕೂರುವುದಿಲ್ಲ: ಯಾಗಾಪುರ

ಶಹಾಪುರ: ಇಂದು ಪೇಠಶಿರೂರ  ಗ್ರಾಮದಲ್ಲಿ  ಮಹಾನಾಯಕ  ಧಾರವಾಹಿಯ ಪೋಸ್ಟರ್ ಉದ್ಘಾಟನೆ ಮಾಡಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಕೋಲಿಸಮಾಜದ  ಅರುಣಕುಮಾರ ಯಾಗಾಪುರ ಅವರು ಮಹಾನಾಯಕ ಧಾರಾವಾಹಿಯು ಡಾ.ಬಿ.ಆರ್. ಅಂಬೇಡ್ಕರ್ ಅವರ ನೈಜ ಇತಿಹಾಸ ಜನರ ಮುಂದಿಡುತ್ತಿದೆ  ಡಾ. ಅಂಬೇಡ್ಕರ್ ರವರ ಕೊಡುಗೆಯು ಈ ದೇಶದ ಎಲ್ಲಾ ಜಾತಿ ವರ್ಗಗಳ ಪ್ರತಿಯೊಬ್ಬ ನಾಗರಿಕನಿಗೂ ಸಲ್ಲುತ್ತದೆ.

ಈ ಧಾರಾವಾಹಿಯು ನಮ್ಮೆಲ್ಲರಿಗೂ ವಿಶೇಷವಾಗಿ  ನಮ್ಮ ಮಕ್ಕಳಿಗೆ ಸ್ಪೂರ್ತಿದಾಯಕ ವಾಗಿದೆ ಆದ್ದರಿಂದ ಈ ಧಾರಾವಾಹಿಯನ್ನು ಈ ದೇಶದ ಪ್ರತಿಯೊಬ್ಬರೂ ನೊಡುವುದರ ಮೂಲಕ ಯಶಸ್ವಿಗೊಳಿಸೊಣ, ಈ ಧಾರಾವಾಹಿಯನ್ನು ಪ್ರಸಾರ ಮಾಡುತ್ತಿರುವ   ಜೀ-ಕನ್ನಡ ವಾಹಿನಿಗೆ ಅಭಿನಂದನೆಗಳು ಮತ್ತು ವಾಹಿನಿಯೊಂದಿಗೆ ನಾವಿದ್ದೇವೆ ಎಂದರು.

ಈ ಸಂದರ್ಭದಲ್ಲಿ ಮುಖಂಡರಾದ ಶಿವಾಜಿ ರೂಪನೂರ್, ಬಾಬು ಬೆಣ್ಣೂರ ,ದಶರಥ ಸೀತಾಳೆ, ರಾಹುಲ್ ಮಾಡಬೂಳ, ರಾಣಪ್ಪ ಬಜಂತ್ರಿ ಮತ್ತಿತರಿದ್ದರು.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

4 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

13 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

13 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

14 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

1 day ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago