ಹೈದರಾಬಾದ್ ಕರ್ನಾಟಕ

ಮಹಿಳಾ ವಿಶ್ವವಿದ್ಯಾಲಯದಿಂದ ಪದ್ಮಾವತಿ ಯತಗಲ್‌ಗೆ ಪ್ರಥಮ ರ‍್ಯಾಂಕ್‌ನೊಂದಿಗೆ ನಾಲ್ಕು ಚಿನ್ನದ ಪದಕ

ರಾಯಚೂರು: ಜಿಲ್ಲೆಯ ಲಿಂಗಸೂಗೂರು ತಾಲ್ಲೂಕಿನ ಕಸಬಾಲಿಂಗಸೂಗೂರು ಗ್ರಾಮದ ಪದ್ಮಾವತಿ ಯತಗಲ್ ಅವರಿಗೆ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯ ವಿಜಯಪುರದಿಂದ ಎಂ.ಎ. ಕನ್ನಡದಲ್ಲಿ ಅತೀ ಹೆಚ್ಚು ಅಂಕ ಪಡೆದು ಪ್ರಥಮ ರ‍್ಯಾಂಕ್‌ನೊಂದಿಗೆ ನಾಲ್ಕು ಚಿನ್ನದ ಪದಕಗಳನ್ನು ಪಡೆದಿರುವುದರಿಂದ ವಿಶ್ವವಿದ್ಯಾಲಯದ ೧೧ನೇ ವಾರ್ಷಿಕ ಘಟಿಕೋತ್ಸವದಲ್ಲಿ ಪದಕಗಳನ್ನು ನೀಡಿ ಗೌರವಿಸಲಾಗುತ್ತಿದೆ.

ಪದ್ಮಾವತಿ ಯತಗಲ್ ಇವರು ಕಸಬಾ ಲಿಂಗಸೂಗೂರು ಗ್ರಾಮದ ಕೃಷಿ ಕುಟುಂಬದ ಶ್ರೀ ನಾಗಪ್ಪ ಯತಗಲ್ ಹಾಗೂ ಶ್ರೀಮತಿ ದುರಗಮ್ಮ ಇವರ ಸುಪುತ್ರಿಯಾಗಿದ್ದಾರೆ. ಇವರು ಕಸಬಾ ಲಿಂಗಸೂಗೂರಿನ ಸರಕಾರಿ ಶಾಲೆಯಲ್ಲಿ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣವನ್ನು ಪಡೆದು, ಪದವಿಪೂರ್ವ ಶಿಕ್ಷಣವನ್ನು ಲಿಂಗಸೂಗೂರಿನ ಶ್ರೀ ಅಮರೇಶ್ವರ ಬಾಲಕಿಯರ ಪದವಿಪೂರ್ವ ಕಾಲೇಜಿನಲ್ಲಿ ಪೂರೈಸಿ, ನಂತರ ಪದವಿ ಶಿಕ್ಷಣವನ್ನು ಎಸ್.ಎಂ.ಎಲ್.ಬಿ. ಕಲಾ, ವಾಣಿಜ್ಯ ಹಾಗೂ ವಿಜ್ಞಾನ ಮಹಾವಿದ್ಯಾಲಯದಿಂದ ಪಡೆದಿದ್ದಾರೆ.

ಈಗ ವಿಜಯಪುರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದಿಂದ ಎಂ.ಎ.ಕನ್ನಡ ವಿಷಯದಲ್ಲಿ ಇಡೀ ವಿಶ್ವವಿದ್ಯಾಲಯಕ್ಕೆ ಅತೀ ಹೆಚ್ಚು ಅಂಕಗಳನ್ನು ಪಡೆದು ಪ್ರಥಮ ರ‍್ಯಾಂಕ್‌ನೊಂದಿಗೆ ಶ್ರೀಮತಿ ಸಂಗಮ್ಮ ಗುರುಬಸಪ್ಪ ಬಿರಾದಾರ ಚಿನ್ನದ ಪದಕ, ಶ್ರೀ ಈಶ್ವರಚಂದ್ರ ಚಿಂತಾಮಣಿ ಚಿನ್ನದ ಪದಕ, ಶ್ರೀಮತಿ ಪಾರ್ವತಿ ಈಶ್ವರಚಂದ್ರ ಚಿಂತಾಮಣಿ ಚಿನ್ನದ ಪದಕ, ಪ್ರೊ. ಎ.ಎಸ್. ಹಿಪ್ಪರಗಿ ಚಿನ್ನದ ಪದಕಗಳನ್ನು ಇದೇ ಸೆಪ್ಟೆಂಬರ್ ೧೯, ೨೦೨೦ ರಂದು ವಿಶ್ವವಿದ್ಯಾಲಯದ ೧೧ನೇ ವಾರ್ಷಿಕ ಘಟಿಕೋತ್ಸವ ಸಮಾರಂಭದಲ್ಲಿ ಗೌರವಾನ್ವಿತ ಕುಲಾಧಿಪತಿಗಳಾದ ಶ್ರೀ ವಾಜುಭಾಯಿ ವಾಲಾ ರಾಜ್ಯಪಾಲರು ಚಿನ್ನದ ಪದಕಗಳೊಂದಿಗೆ ಪದವಿಯನ್ನು ಪ್ರದಾನ ಮಾಡಲಿದ್ದಾರೆ.

ರೈತ ಕುಟುಂಬದ ಹಿನ್ನೆಲೆಯುಳ್ಳ ಪದ್ಮಾವತಿ ಯತಗಲ್ ಅವರು ಸ್ನಾತಕೋತ್ತರ ಪದವಿಯಲ್ಲಿ ಪ್ರಥಮ ರ‍್ಯಾಂಕ್ ಪಡೆಯುವ ಮೂಲಕ ರಾಜ್ಯದ ಏಕೈಕ ಮಹಿಳಾ ವಿಶ್ವವಿದ್ಯಾಲಯಕ್ಕೆ ಹಾಗೂ ಇಡೀ ರಾಯಚೂರು ಜಿಲ್ಲೆಗೆ ಕೀರ್ತಿಯನ್ನು ತಂದಿದ್ದಾಳೆ. ಪದ್ಮಾವತಿ ಯತಗಲ್ ಅವರ ಸಾಧನೆಗೆ ಗ್ರಾಮಸ್ಥರು, ವಿದ್ಯಾಗುರುಗಳು ಹರ್ಷವನ್ನು ವ್ಯಕ್ತಪಡಿಸಿದ್ದಾರೆ.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

8 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

18 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

18 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

18 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

1 day ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

2 days ago