ಬಿಸಿ ಬಿಸಿ ಸುದ್ದಿ

ಕಲ್ಯಾಣ ಕರ್ನಾಟಕದ ರಚನಾತ್ಮಕ ಪ್ರಗತಿಗೆ ಘೋಷಣೆ ಮಾಡಿರುವ ಬೇಡಿಕೆ ಕಾಲಮೀತಿಯಲ್ಲಿ ಅನುಷ್ಠಾನ ಸಿಎಂಗೆ ಒತ್ತಾಯ

ಕಲಬುರಗಿ: ಕಲ್ಯಾಣ ಕರ್ನಾಟಕದ ರಚನಾತ್ಮಕ ಪ್ರಗತಿಗಾಗಿ ಕಳೆದ ವರ್ಷ ಘೋಷಣೆ ಮಾಡಿರುವ ಪ್ರಮುಖ ಘೋಷಣೆಯ ಬೇಡಿಕೆಗಳಿಗೆ ಕಾಲಮೀತಿಯಲ್ಲಿ ಅನುಷ್ಠಾನಗೊಳಿಸಬೇಕೆಂದು ಕಲ್ಯಾಣ ಕರ್ನಾಟಕ ಉತ್ಸವ ಸಮಿತಿವತಿಯಿಂದ ಇಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಪ್ರತೇಕವಾಗಿ ಭೇಟಿಯಾಗಿ ಕಳೆದ ವರ್ಷ ಘೋಷಣೆ ಮಾಡಿರುವ ಪ್ರಮುಖ ಅಂಶಗಳ ಬೇಡಿಕೆಗಳ ಈಡೇರಿಸುವಂತೆ ಸಮಿತಿಯ ನೇತೃತ್ವದಲ್ಲಿ ಒತ್ತಾಯಿಸಲಾಯಿತು.

371 (ಜೆ) ಕಲಂ ಪರಿಣಾಮಕಾರಿ ಅನುಷ್ಠಾನಕ್ಕೆ ಪ್ರತೇಕ ಸಚಿವಾಲಯ ಸ್ಥಾಪನೆ ಮಾಡುವುದು, 371 (ಜೆ) ಕಲಂ ತಿದ್ದುಪಡಿಯ ಅನುಷ್ಠಾನದ ನಿಯಮಗಳಲ್ಲಿ ಇರುವ ದೋಷಗಳ ನಿವಾರಣೆಗೆ ವಿಶೇಷ ಕ್ರಮ ಕೈಗೊಳ್ಳುವುದು, ಕಲ್ಯಾಣ ಕರ್ನಾಟಕ ಪ್ರದೇಶದ ೩೭೧ (ಜೆ) ಕಲಂಗೆ ಸಂಬಂಧಿಸಿದ ವಿಶೇಷ ಕೋಶ ಪ್ರಧಾನ ಕಛೇರಿ ಬೆಂಗಳೂರಿನಲ್ಲಿದ್ದು, ಪ್ರಾದೇಶಿಕ ಕಛೇರಿ ಕಲಬುರಗಿಯಲ್ಲಿ ಸ್ಥಾಪನೆ ಮಾಡುವುದು., ಕಲ್ಯಾಣ ಕರ್ನಾಟಕದ ಇತಿಹಾಸ ಕಾಲಮಿತಿಯಲ್ಲಿ ರಚನೆಗೆ ಸರ್ಕಾರದ ವತಿಯಿಂದ ಎಲ್ಲಾ ರೀತಿಯ ನೆರವು ನೀಡುವುದು ಮತ್ತು ಗುಲಬರ್ಗಾ ವಿಶ್ವವಿದ್ಯಾಲಯದಲ್ಲಿ ಕಲ್ಯಾಣ ಕರ್ನಾಟಕ ಸಮಗ್ರ ಅಧ್ಯಯಾನ ಪೀಠ ಸ್ಥಾಪನೆ ಮಾಡುವುದಾಗಿವೆ.

ಈ ಪ್ರಮುಖ ಬೇಡಿಕೆಗಳ ಬಗ್ಗೆ ಕಳೆದ ವರ್ಷ ತಾವು ಅಧೀಕೃತವಾಗಿ ಘೋಷಣೆ ಮಾಡಿರುವಂತೆ ಪ್ರವಾಹ ಮತ್ತು ಕೋವಿಡ -೧೯ ಕಾರಣಗಳಿಂದ ವಿಳಂಬವಾಗಿದೆ. ಇನ್ನು ಮುಂದೆ ಈ ಬೇಡಿಕೆಗಳ ಈಡೇರಿಕೆಯ ಬಗ್ಗೆ ಗಂಭಿರವಾಗಿ ಪರಿಗಣಿಸಿ ಕಾಲಮಿತಿಯಲ್ಲಿ ಈಡೇರಿಸುವ ನಿಟ್ಟಿನಲ್ಲಿ ಕ್ರಮಜರುಗಿಸಲು ಈಗಾಗಲೇ ಸಂಬಂಧಪಟ್ಟ ಅಧಿಕಾರಿಗಳಿಗೆ ಆದೇಶಿಸಿರುವ ಬಗ್ಗೆ ಭರವಸೆ ನೀಡಿರುತ್ತಾರೆಂದು ಸಮಿತಿಯ ಅಧ್ಯಕ್ಷರು ಮತ್ತು ಮಾಜಿ ವಿಧಾನಪರಿಷತ ಸದಸ್ಯರಾದ  ಶಶೀಲ ಜಿ.ನಮೋಶಿಯವರು ತಿಳಿಸಿದ್ದಾರೆ.

ಈ ಭೇಟಿಯ ಸಂದರ್ಭದಲ್ಲಿ ಸಮಿತಿಯ ಪ್ರಧಾನ ಕಾರ್ಯದರ್ಶಿಗಳಾದ ಲಕ್ಷ್ಮಣ ದಸ್ತಿ ಸೇರಿದಂತೆ, ಅಣ್ಣಾರಾವ ದುತ್ತರಗಾಂವ, ಮನೀಷಜಾಜು, ಶಿವರಾಜ ಪಾಟೀಲ, ಮುಂತಾದವರು ಉಪಸ್ಥಿತರಿದ್ದರು.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

13 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

23 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

23 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

23 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

2 days ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

2 days ago