ಈಶಾನ್ಯ ಕರ್ನಾಟಕ ಶಿಕ್ಷಕರ ಮತಕ್ಷೇತ್ರ: ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿಕೊಳ್ಳಲು ಸೂಚನೆ

0
320
ಕಲಬುರಗಿ: 1-11-2019 ಅರ್ಹತಾ ದಿನವಾಗಿ ಪರಿಗಣಿಸಿ ಈಗಾಗಲೇ ಈಶಾನ್ಯ ಕರ್ನಾಟಕ ಶಿಕ್ಷಕರ ಮತಕ್ಷೇತ್ರದ ಮತದಾರರ ಅಂತಿಮ ಮತದಾರರ ಪಟ್ಟಿಯನ್ನು ದಿ.16-01-2020ಕ್ಕೆ ಪ್ರಕಟಿಸಲಾಗಿದ್ದು, ನಿರಂತರ ಹೆಸರು ಸೇರ್ಪಡೆ ಪ್ರಕ್ರಿಯೆ ಭಾಗವಾಗಿ ಅರ್ಹ ಮತದಾರರು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ನೋಂದಾಯಿಸಿಕೊಳ್ಳಬಹುದಾಗಿದೆ ಎಂದು ಕಲಬುರಗಿ ವಿಭಾಗದ ಪ್ರಾದೇಶಕ ಆಯುಕ್ತರಾದ ಡಾ. ಎನ್.ವಿ. ಪ್ರಸಾದ್ ಅವರು ತಿಳಿಸಿದ್ದಾರೆ.
2020ರ ಜನವರಿ 16 ರಂದು ಪ್ರಕಟಿಸಿರುವ ಅಂತಿಮ ಮತದಾರರ ಪಟ್ಟಿಯಲ್ಲಿ ಒಟ್ಟು 24,941 ಮತದಾರರು ತಮ್ಮ ಹೆಸರನ್ನು ನೋಂದಾಯಿಸಿಕೊಂಡಿದ್ದಾರೆ. ಮತಪಟ್ಟಯಲ್ಲಿ ಈಗಲೂ ಹೆಸರು ಸೇರಿಸಲು ಅವಕಾಶ ನೀಡಲಾಗಿದ್ದು, ಅರ್ಹ ಮತದಾರರು ತಮ್ಮ ಹೆಸರನ್ನು ನೋಂದಣಿಗಾಗಿ ಮತದಾರರ ನೋಂದಣಾಧಿಕಾರಿಗಳು, ಸಹಾಯಕ ಮತದಾರರ ನೋಂದಾಧಿಕಾರಿಗಳು ಹಾಗೂ ತಹಶೀಲ್ದಾರರ ಕಚೇರಿಗಳಲ್ಲಿ ಅರ್ಜಿ ನಮೂನೆ-19ರಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ ಎಂದರು.
ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸಲು ಭಾರತದ ಪ್ರಜೆಯಾಗಿರಬೇಕು. ಆಯಾ ಮತಕ್ಷೇತ್ರದ ವ್ಯಾಪ್ತಿಯಲ್ಲಿ ಸಾಮಾನ್ಯ ನಿವಾಸಿಯಾಗಿರುವ ಮತ್ತು 1ನೇ ನವೆಂಬರ್ 2019ಕ್ಕೆ ಮೊದಲು 6 ವರ್ಷಗಳ ಅವಧಿಯಲ್ಲಿ, ಪ್ರೌಢ ಶಾಲೆಗಿಂತ ಕಡಿಮೆಯಿಲ್ಲದ ದರ್ಜೆಯಲ್ಲಿ ನಿರ್ದಿಷ್ಟಪಡಿಸಿದ ರಾಜ್ಯದೊಳಗಿನ ಯಾವುದೇ ಶೈಕ್ಷಣಿಕ ಸಂಸ್ಥೆಗಳಲ್ಲಿ (ಸರ್ಕಾರಿ, ಅನುದಾನಿತ, ಅನುದಾನ ರಹಿತ) ಒಟ್ಟು ಕನಿಷ್ಠ 3 ವರ್ಷ ಬೋಧನಾ ವೃತ್ತಿಯಲ್ಲಿ ನಿರತರಾಗಿರುವ ಪ್ರತಿಯೊಬ್ಬ ವ್ಯಕ್ತಿಯೂ ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸಲು ಅರ್ಹನಾಗಿದ್ದಾನೆ.
ಬೋಧನಾ ವೃತ್ತಿ ಕುರಿತು ಸಂಬಂಧಿಸಿದ ಸಂಸ್ಥೆಯಿಂದ ಅನುಬಂಧ-2ರಲ್ಲಿ ಪ್ರಮಾಣಪತ್ರವನ್ನು ಅರ್ಜಿ ಸಲ್ಲಿಸುವ ಮೂಲಕ ತಮ್ಮ ಹೆಸರನ್ನು ಮತದಾರರ ಪಟ್ಟಿಯಲ್ಲಿ ನೋಂದಾಯಿಸಿಕೊಳ್ಳಬಹುದಾಗಿದೆ ಅವರು ತಿಳಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here