ಕಲಬುರಗಿ ಡಿ.ಎ.ಆರ್. ಪೊಲೀಸ್ ಪರೇಡ್ ಮೈದಾನದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ

0
72

ಕಲಬುರಗಿ: ಇಂದು ಕಲಬುರಗಿಯಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಅಂಗವಾಗಿ ಕಲಬುರಗಿ ಡಿ.ಎ.ಆರ್. ಪೊಲೀಸ್ ಪರೇಡ್ ಮೈದಾನದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ರಾಷ್ಡ್ರಧ್ವಜಾರೋಹಣ ನೆರವೇರಿಸಿ ದರು.

ಸಾವಿರಾರು ಕೋಟಿ ರು.ಗಳ ಕಾಮಗಾರಿಗಳ ಶಿಲನ್ಯಾಸ ಮತ್ತು ಲೋಕಾರ್ಪಣೆ ಮಾಡಿ ಮಾತನಾಡಿದ ಭಾಷಣದ ಹೈಲೈಟ್ಸ್.

Contact Your\'s Advertisement; 9902492681

ಕಲ್ಯಾಣ ಕರ್ನಾಟಕ ಸಮಗ್ರ ಅಭಿವೃದ್ಧಿಗೆ ಸರ್ಕಾರ ಬದ್ಧ: ನಮ್ಮ ಸರ್ಕಾರ ಅಸ್ತಿತ್ವಕ್ಕೆ ಬಂದ ಕೂಡಲೆ ಹೈದರಬಾದ್-ಕರ್ನಾಟಕ ಪ್ರದೇಶವನ್ನು “ಕಲ್ಯಾಣ ಕರ್ನಾಟಕ” ಎಂದು ಮರು ನಾಮಕರಣ ಮಾಡಿ ಇಲ್ಲಿನ ಬಹುಜನರ ಒತ್ತಾಸೆಯನ್ನು ಈಡೇರಿಸಲಾಗಿದೆ.

ಪ್ರಾದೇಶಿಕ ಅಸಮತೋಲನವನ್ನು ನಿವಾರಿಸುವ ಉದ್ದೇಶದಿಂದ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯು ಸ್ಥಾಪನೆಗೊಂಡಿದೆ.

ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಮತ್ತು ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ, ಕೃಷಿ ಮತ್ತು ಸಾಂಸ್ಕøತಿಕ ಸಂಘವು ನಿಗದಿತ ಗುರಿ ಮುಟ್ಟುವಲ್ಲಿ ಸರ್ವರ ಸಹಕಾರದೊಂದಿಗೆ ಸಂಪೂರ್ಣ ಯಶಸ್ವಿಯಾಗುತ್ತದೆ ಎಂದು ನಾನು ನಂಬಿದ್ದೇನೆ.

ಮೂರು ಸಾವಿರ ಕೋಟಿ ರೂ.ಗಳ ವೆಚ್ಚದಲ್ಲಿ ಕಲಬುರಗಿ, ಬೀದರ ಜಿಲ್ಲೆಗೆ ಉಪಯೋಗವಾಗುವ ಕೃಷಿ ಮತ್ತು ಕುಡಿಯುವ ನೀರಿನ ಯೋಜನೆ ಮತ್ತು ಕಾಗಿಣಾ ನದಿಗೆ ಹೊಂದಿಕೊಂಡು 10 ಏತ ನೀರಾವರಿ ಯೋಜನೆಯ ಕಾಮಗಾರಿಗೆ ಅನುಮೋದನೆ ನೀಡಲಾಗಿದ್ದು, ಅನುಷ್ಠಾನಕ್ಕೆ ಕ್ರಮವಹಿಸಲಾಗುವುದು.

ಇದರಿಂದ ಬೀದರ್ ಮತ್ತು ಕಲಬುರಗಿ ಜಿಲ್ಲೆಯ ರೈತರ ಲಕ್ಷಾಂತರ ಎಕರೆ ಭೂಮಿಗೆ ನೀರಿನ ಪೂರೈಕೆ ಹಾಗೂ ಕುಡಿಯುವ ನೀರಿನ ಸಮಸ್ಯೆ ನಿವಾರಣೆಯಾಗಲಿದೆ.

ರಾಯಚೂರು ಜಿಲ್ಲೆಯ ಗೋಲಪಲ್ಲಿಯಲ್ಲಿ 1,200 ಮೆಗಾ ವ್ಯಾಟ್ ಸಾಮಥ್ರ್ಯದ 10,000 ಕೋಟಿ ರೂ.ಗಳ ವೆಚ್ಚದಲ್ಲಿ ಜಲ ವಿದ್ಯುತ್ ಯೋಜನೆಯು ಪರಿಶೀಲನಾ ಹಂತದಲ್ಲಿದ್ದು, ನೆರೆ ರಾಜ್ಯದ ಜೊತೆ ಮಾತುಕತೆಯ ನಂತರ ಸೂಕ್ತ ಕ್ರಮವಹಿಸಲಾಗುವುದು.

ಮುಂದಿನ ನಾಲ್ಕು ತಿಂಗಳ ಅವಧಿಯಲ್ಲಿ ಬಸವಕಲ್ಯಾಣದಲ್ಲಿ ಅನುಭವ ಕಲ್ಯಾಣ ಮಂಟಪ ನಿರ್ಮಾಣ ಕಾರ್ಯಾರಂಭ ಮಾಡಲಾಗುವುದು.

ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಮತ್ತು ಕಲ್ಯಾಣ ಕರ್ನಾಟಕ ವ್ಯಾಪ್ತಿಗೊಳಪಡುವ ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ ಹಾಗೂ ಬಳ್ಳಾರಿ ಜಿಲ್ಲೆಗಳು ಅತಿ ಹಿಂದುಳಿದ ಪ್ರದೇಶಗಳಾಗಿದ್ದು, ಈ ಭಾಗದ ಸರ್ವತೋಮುಖ ಅಭಿವೃದ್ಧಿಗೆ ಸರ್ಕಾರ ಸಾಧ್ಯವಾದ ಎಲ್ಲ ಕ್ರಮಗಳನ್ನು ಕೈಗೊಂಡಿದೆ.

ಕಲಬುರಗಿ ವಿಮಾನ ನಿಲ್ದಾಣದಲ್ಲಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಮಾಧ್ಯಮದವರೊಂದಿಗೆ ನಡೆಸಿದ ಮಾತುಕತೆ:

ಕೋವಿಡ್, ಪ್ರವಾಹ ಪರಿಸ್ಥಿತಿ ಸೇರಿದಂತೆ
ರಾಜ್ಯದ ವಿವಿಧ ಅಭಿವೃದ್ಧಿ ವಿಷಯಗಳ ಕುರಿತು ಚರ್ಚಿಸಲು ದೆಹಲಿಗೆ ತೆರಳುತ್ತಿದ್ದು, ಅಲ್ಲಿ ಕೇಂದ್ರ ಸಚಿವರು, ಪ್ರಧಾನಿಯವರನ್ನು ಭೇಟಿಯಾಗಿ ಚರ್ಚಿಸಲಾಗುವುದು.

ಕಲ್ಯಾಣ ಕರ್ನಾಡಕ ಪ್ರದೇಶಾಭಿವೃದ್ಧಿ ಮಂಡಳಿಗೆ ಅನುದಾನ ನೀಡಿಕೆ ವಿಚಾರದಲ್ಲಿ ರಾಜ್ಯ ಸರ್ಕಾರ ಹಿಂದೆ ಬೀಳುವ ಪ್ರಶ್ಬೆಯೆ ಇಲ್ಲ. ಸಮರ್ಪಕ ಅನುದಾನ ನೀಡಲಾಗುವುದು.

ಅಧಿವೇಶನ ಮುನ್ನ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ತಾವು ಇರಾದೆ ಹೊಂದಿದ್ದು, ಈ ಬಗ್ಗೆ ಪಕ್ಷದ ವರಿಷ್ಠರೊಂದಿಗೆ ಚರ್ಚಿಸಿ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here