ಸ್ಥಳೀಯ ಸಂಸ್ಥೆಗಳ ಚುನಾವಣೆ ಪ್ರಮಾಣಿತ ಕಾರ್ಯನಿರ್ವಹಣಾ ಪದ್ಧತಿ ಮಾರ್ಗಸೂಚಿ

0
100

ಬೆಂಗಳೂರು: ಕೋವಿಡ್-೧೯ ಹಿನ್ನೆಲೆಯಲ್ಲಿ ಸ್ಥಳೀಯ ಸಂಸ್ಥೆಗಳ ಸಾರ್ವತ್ರಿಕ / ಉಪ ಚುನಾವಣೆ ನಡೆಸಲು ಅನುಸರಿಸಬೇಕಾದ ಪ್ರಾಮಾಣಿತ ಕಾರ್ಯ ನಿರ್ವಹಣಾ ಪದ್ಧತಿ ಮಾರ್ಗಸೂಚಿಯನ್ನು ರಚಿಸಲಾಗಿದೆ.

ಗ್ರಾಪಂಚಾಯಿತಿಗಳ ಚುನಾವಣೆಯಲ್ಲಿ ಅಭ್ಯರ್ಥಿಗಳು ಗರಿಷ್ಠ ೫ ಜನ ಬೆಂಬಲಿಗರೊಂದಿಗೆ ಸಾಮಾಜಿಕ ಅಂತರ ಕಾಯುಕೊಂಡು ಪ್ರಚಾರ ಮಾಡಬಹುದಾಗಿದೆ. ಕೋವಿಡ್ ಸೋಂಕಿತ ವ್ಯಕ್ತಿಗಳು ಮತ ಚಲಾಯಿಸಲು ಹಕ್ಕುಳ್ಳವರಾಗಿದ್ದು, ಇವರಿಗೆ ಅಂಚೆ ಮತಪತ್ರಗಳ ಮೂಲಕ ಮತಚಲಾಯಿಸಲು ಅವಕಾಶ ಕಲ್ಪಿಸಲಾಗುತ್ತದೆ.

Contact Your\'s Advertisement; 9902492681

ಚುನಾವಣಾ ಕಾರ್ಯದಲಿ ನಿರತರಾಗುವ ಎಲ್ಲಾ ಅಧಿಕಾರಿ ಸಿಬ್ಬಂದಿಯವರು ಅವಶ್ಯಕ ಸಾಮಗ್ರಿಗಳಾದ ಫೇಸ್ ಮಾಸ್ಕ್, ಸ್ಯಾನಿಟೈಸರ್, ಥರ್ಮಲ್ ಸ್ಕ್ಯಾನರ್ ಇತ್ಯಾದಿಗಳನ್ನು ಉಪಯೋಗಿಸಿಕೊಂಡು ಕೋವಿಡ್ ಮಾರ್ಗಸೂಚಿಯನ್ನು ಅನುಸರಿಸಿ ಚುನಾವಣೆ ನಡೆಸಲು ಅನುಕೂಲ ಕಲ್ಪಿಸಲಾಗಿದ್ದು, ಈ ಬಗ್ಗೆ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆಗಳನ್ನು ನೀಡಲಾಗಿದೆ ಎಂದು ರಾಜ್ಯ ಚುನಾವಣಾ ಆಯೋಗದ ಅಧೀನ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here